More

    ಆಶಾ ಕಾರ‌್ಯಕರ್ತೆಯರ ಸೇವೆ ಸ್ಮರಣೀಯ : ಸಚಿವ ಜೆ.ಸಿ.ಮಾಧುಸ್ವಾಮಿ

    ತುಮಕೂರು: ಕರೊನಾ ಸೋಂಕು ನಿಯಂತ್ರಣಕ್ಕೆ ಶ್ರಮಿಸುತ್ತಿರುವ ಆಶಾ ಕಾರ್ಯಕರ್ತೆಯರ ಸೇವೆ ಸ್ಮರಣೀಯ ಎಂದು ಜಿಲ್ಲಾ ಉಸ್ತುವಾರಿ ಸಚಿವ ಜೆ.ಸಿ.ಮಾಧುಸ್ವಾಮಿ ಅಭಿಪ್ರಾಯಪಟ್ಟರು.

    ನಗರದ ಕನ್ನಡಭವನದಲ್ಲಿ ಗುರುವಾರ ಡಿಸಿಸಿ ಬ್ಯಾಂಕ್ ಮತ್ತು ತುಮುಲ್,ಆರೋಗ್ಯ ಇಲಾಖೆ ಹಾಗೂ ಜಿಲ್ಲಾ ಸಹಕಾರ ಸಂಘಗಳ ಸಹಯೋಗದಲ್ಲಿ ಆಯೋಜಿಸಿದ್ದ ಆಶಾ ಕಾರ್ಯಕರ್ತೆಯರಿಗೆ ಪ್ರೋತ್ಸಾಹ ಧನ ವಿತರಣಾ ಕಾರ್ಯಕ್ರಮದಲ್ಲಿ ಮಾತನಾಡಿದರು. ಜಿಲ್ಲೆಯಲ್ಲಿ ಕಳೆದ 2 ತಿಂಗಳ ಕಾಲ ತಮ್ಮ ಯೋಗಕ್ಷೇಮ ಮರೆತು ಮನೆಮನೆಗೆ ಭೇಟಿ ಮಾಡಿ ಪ್ರತಿ ಕುಟುಂಬ ಸದಸ್ಯರ ಆರೋಗ್ಯ ಸಮೀಕ್ಷೆ ನಡೆಸಿ ಪ್ರತಿಯೊಬ್ಬರ ಮಾಹಿತಿಯನ್ನು ಜಿಲ್ಲಾಡಳಿತ ಹಾಗೂ ತಾಲೂಕು ಆಡಳಿತಕ್ಕೆ ನೀಡಿದ ಹೆಗ್ಗಳಿಕೆ ಇವರಿಗಿದೆ ಎಂದರು.

    ಸೇವೆ ಮಾಡುವ ಅವಕಾಶ ಎಲ್ಲರಿಗೂ ಸಿಗುವುದಿಲ್ಲ, ಆಶಾ, ಅಂಗನವಾಡಿ ಕಾರ್ಯಕರ್ತೆ ಯರ ಸೇವೆ ಎಲ್ಲರಿಗೂ ಅನುಕರಣೀಯವಾಗಿದ್ದು, ಇದನ್ನು ಗುರುತಿಸಿ ರಾಜ್ಯ ಸರ್ಕಾರ ತಲಾ 3 ಸಾವಿರ ರೂ. ಪ್ರೋತ್ಸಾಹಧನ ನೀಡಲಾಗುತ್ತಿದೆ ಎಂದರು. ಸಹಕಾರ ಸಚಿವ ಎಸ್.ಟಿ ಸೋಮಶೇಖರ್ ಮಾತನಾಡಿ, ತುಮಕೂರು ಜಿಲ್ಲಾಡಳಿತ ಅನುಸರಿಸಿದ ಕ್ರಮಗಳಿಂದ ಜಿಲ್ಲೆಯಲ್ಲಿ ಕರೊನಾ ನಿಯಂತ್ರಣದಲ್ಲಿ ಯಶಸ್ವಿಯಾಗಿದೆ ಎಂದರು.

    ಸಂಸದ ಜಿ.ಎಸ್ ಬಸವರಾಜು ಮಾತನಾಡಿ, ದೇಶದಲ್ಲಿ ಕರೊನಾ ನಿಯಂತ್ರಣಕ್ಕಾಗಿ ಕರ್ಫ್ಯೂ, ಲಾಕ್‌ಡೌನ್ ಮಾಡಿದ್ದರಿಂದ ದೇಶದಲ್ಲಿಯೇ ಕರೊನಾ ಸಾವಿನ ಸಂಖ್ಯೆ ಕಡಿಮೆಯಾಗಿದೆ. ಇದಕ್ಕೆ ಜನರು ಸ್ಪಂದಿಸಿದ್ದಾರೆ ಎಂದರು. ಸಮಾರಂಭದಲ್ಲಿ ಜಿಲ್ಲೆಯ 101 ಆಶಾ ಕಾರ್ಯಕರ್ತೆಯರಿಗೆ ಪ್ರಶಂಸನಾ ಪತ್ರ ಹಾಗೂ ಪ್ರೋತ್ಸಾಹಧನವನ್ನು ಸಾಂಕೇತಿಕವಾಗಿ ವಿತರಿಸಲಾಯಿತು. ಬೀದಿ ಬದಿ ವ್ಯಾಪಾರಿಗಳಿಗೆ ಸಾಲದ ಚೆಕ್ ವಿತರಣೆ ಮಾಡಲಾಯಿತು.

    ಬೆಂಗಳೂರು ನಗರಾಭಿವೃದ್ಧಿ ಸಚಿವ ಭೈರತಿ ಬಸವರಾಜು, ಅಪೆಕ್ಸ್ ಬ್ಯಾಂಕ್ ಅಧ್ಯಕ್ಷ ಕೆ.ಎನ್.ರಾಜಣ್ಣ, ಜಿಲ್ಲಾಧಿಕಾರಿ ಡಾ.ಕೆ.ರಾಕೇಶ್‌ಕುಮಾರ್, ಉಪವಿಭಾಗಾಧಿಕಾರಿ ಅಜಯ್, ಡಿಎಚ್‌ಒ ಡಾ.ನಾಗೇಂದ್ರಪ್ಪ, ಜಿಲ್ಲಾ ಹಾಲು ಒಕ್ಕೂಟ ಅಧ್ಯಕ್ಷ ಮಹಾಲಿಂಗಪ್ಪ, ಮಾಜಿ ಶಾಸಕ ಡಾ.ಎಂ.ಆರ್.ಹುಲಿನಾಯ್ಕರ್ ಇದ್ದರು.

    ರಾಜ್ಯದಾದ್ಯಂತ 40250 ಆಶಾ ಕಾರ್ಯಕರ್ತೆಯರಿಗೆ ತಲಾ 3 ಸಾವಿರ ರೂ.ದಂತೆ 12.7 ಕೋಟಿ ರೂಪಾಯಿ ಸಹಕಾರ ಇಲಾಖೆ ವತಿಯಿಂದ ನೀಡಲಾಗಿದೆ. ಕೋವಿಡ್ ನಿಯಂತ್ರಣದಲ್ಲಿ ಕಾರ್ಯಕರ್ತೆಯರ ಪಾತ್ರ ಮಹತ್ವದ್ದು.
    ಎಸ್.ಟಿ.ಸೋಮಶೇಖರ್ ಸಹಕಾರ ಸಚಿವ

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts