More

  ಪ್ರಲ್ಹಾದ ಜೋಶಿ ಅಧಿಕಾರ ಸ್ವೀಕಾರ

  ಹುಬ್ಬಳ್ಳಿ : ಗ್ರಾಹಕ ವ್ಯವಹಾರ, ಆಹಾರ ಮತ್ತು ಸಾರ್ವಜನಿಕ ವಿತರಣೆ, ನವ ಮತ್ತು ನವೀಕರಿಸಬಹುದಾದ ಇಂಧನ ಖಾತೆ ನೂತನ ಸಚಿವರಾಗಿ ಪ್ರಲ್ಹಾದ ಜೋಶಿ ಮಂಗಳವಾರ ಅಧಿಕಾರ ವಹಿಸಿಕೊಂಡರು.

  ಕೇಂದ್ರ ಸಚಿವ ಪಿಯೂಷ್ ಗೋಯಲ್ ಅವರಿಂದ ಪ್ರಲ್ಹಾದ ಜೋಶಿ ಅಧಿಕಾರ ವಹಿಸಿಕೊಂಡರು. ಅಧಿಕಾರ ಸ್ವೀಕಾರದ ನಂತರ ಇಲಾಖೆಯ ಅಧಿಕಾರಿಗಳೊಂದಿಗೆ ಸಭೆ ನಡೆಸಿದರು. ನವೀಕರಿಸಬಹುದಾದ ಇಂಧನ ಸಚಿವಾಲಯದ ಕಾರ್ಯದರ್ಶಿ ಭೂಪೇಂದ್ರ ಸಿಂಗ್ ಹಾಗೂ ಇತರ ಹಿರಿಯ ಅಧಿಕಾರಿಗಳು ಹಾಜರಿದ್ದರು.

  ಪ್ರಧಾನಿ ನರೇಂದ್ರ ಮೋದಿ ಅವರ ವಿಕಸಿತ ಭಾರತ ಸಂಕಲ್ಪದಡಿ ದೇಶದ ಜನರಿಗೆ ಆಹಾರ ಭದ್ರತೆಯನ್ನು ಖಾತರಿಪಡಿಸಲು ಬದ್ಧನಾಗಿದ್ದೇನೆ. ದೇಶದಲ್ಲಿ ಕೃಷಿ ಉತ್ಪಾದನೆ ಬಲಪಡಿಸಲು ಮತ್ತಷ್ಟು ಕ್ರಮಗಳನ್ನು ತೆಗೆದುಕೊಳ್ಳುವುದಾಗಿ ಸಚಿವ ಜೋಶಿ ಇದೇ ಸಂದರ್ಭದಲ್ಲಿ ಹೇಳಿದರು.

  2047 ರ ವೇಳೆಗೆ ಭಾರತ ಇಂಧನ ಸ್ವಾತಂತ್ರ್ಯ ಸಾಧಿಸುವುದು ನಮ್ಮ ಸಂಕಲ್ಪವಾಗಿದೆ. ನವೀಕರಿಸಬಹುದಾದ ಇಂಧನ ಕ್ಷೇತ್ರದಲ್ಲಿ ಭಾರತವನ್ನು ಜಾಗತಿಕ ಉತ್ಪಾದನಾ ಮತ್ತು ಬಳಕೆಯ ಕೇಂದ್ರವನ್ನಾಗಿ ಮಾಡುವ ದೃಷ್ಟಿಯೊಂದಿಗೆ ನಾವು ಮುಂದುವರಿಯುತ್ತೇವೆ ಎಂದರು.

  See also  ಪಿಒಕೆ ಕಳೆದುಕೊಳ್ಳಲು ನೆಹರೂ ಮಾಡಿದ 2 ಪ್ರಮಾದಗಳೇ ಕಾರಣ: ಲೋಕಸಭೆಯಲ್ಲಿ ಅಮಿತ್​ ಶಾ ವಾಗ್ದಾಳಿ

  ಸಿನಿಮಾ

  ಲೈಫ್‌ಸ್ಟೈಲ್

  ಟೆಕ್ನಾಲಜಿ

  Latest Posts