More

    ಹಿಂದುಗಳ ಜನಸಂಖ್ಯೆ ಕುಸಿತಕ್ಕೆ ಸಚಿವ ಜೋಶಿ ಕಳವಳ

    ಹುಬ್ಬಳ್ಳಿ : ದೇಶದಲ್ಲಿ ಹಿಂದುಗಳ ಜನಸಂಖ್ಯೆ ಕುಸಿತ ತೀವ್ರ ಆತಂಕಕಾರಿ ಬೆಳವಣಿಗೆಯಾಗಿದೆ ಎಂದು ಕೇಂದ್ರ ಸಂಸದೀಯ ಸಚಿವ ಪ್ರಲ್ಹಾದ ಜೋಶಿ ಕಳವಳ ವ್ಯಕ್ತಪಡಿಸಿದ್ದಾರೆ. ನಗರದಲ್ಲಿ ಶುಕ್ರವಾರ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಈಗಲೇ ಎಚ್ಚೆತ್ತುಕೊಂಡು ಪರ್ಯುಯ ಕ್ರಮ ಕೈಗೊಳ್ಳಬೇಕಿದೆ ಎಂದು ಹೇಳಿದರು.

    ಭಾರತದಲ್ಲಿ ಹಿಂದುಗಳ ಜನಸಂಖ್ಯೆ ಕ್ಷೀಣಿಸುತ್ತಿರುವ ಬಗ್ಗೆ ತಕ್ಷಣಕ್ಕೆ ಯಾವುದೇ ನಿರ್ಧಾರಕ್ಕೆ ಬರಲಾಗುವುದಿಲ್ಲ. ಆದರೆ, ಸಮಗ್ರ ಅಧ್ಯಯನ ನಡೆಸಬೇಕಿದೆ ಎಂದು ಅಭಿಪ್ರಾಯ ವ್ಯಕ್ತಪಡಿಸಿದರು.

    ದೇಶದಲ್ಲಿ ಹಿಂದುಗಳ ಜನಸಂಖ್ಯೆ ಕಡಿಮೆಯಾದಂತೆ ಕಾಲಕ್ರಮೇಣ ಪ್ರಜಾಪ್ರಭುತ್ವವೇ ಬದಲಾಗುವ ಸ್ಥಿತಿ ಎದುರಾಗಲಿದೆ. ಅಲ್ಲದೆ, ಭಾರತ ಜಾತ್ಯತೀತವಾಗಿ ಉಳಿಯುವುದಿಲ್ಲ ಎಂದು ಜೋಶಿ ಆತಂಕ ವ್ಯಕ್ತಪಡಿಸಿದರು.

    ಜಗತ್ತಿನಲ್ಲೇ ಏಕೈಕ ಜಾತ್ಯತೀತ ರಾಷ್ಟ್ರ ಭಾರತ. ಜಾತ್ಯತೀತತೆ ಎನ್ನುವುದು ಭಾರತೀಯರ ರಕ್ತ, ಸ್ವಭಾವದಲ್ಲೇ ಬಂದಿದೆ. ಮುಂದೊಂದು ದಿನ ಇದಕ್ಕೆ ಧಕ್ಕೆ ಉಂಟಾಗಬಹುದು ಎಂದರು.

    ಭಾರತ ವಿವಿಧತೆಯಲ್ಲಿ ಏಕತೆ ಕಂಡ ದೇಶವಾಗಿದೆ. ನಾನಾ ಧರ್ಮ, ಸಂಸ್ಕೃತಿ ಆಚರಣೆಗೆ ಮುಕ್ತ ಅವಕಾಶ ಕೊಟ್ಟ ರಾಷ್ಟ್ರ ನಮ್ಮದು. ಈ ಪರಂಪರೆಯೆ ಮುಂದುವರಿಯಬೇಕು ಎಂದು ಆಶಯ ವ್ಯಕ್ತಪಡಿಸಿದರು.

    ಭಾರತ ಪ್ರಮುಖವಾಗಿ ಹಿಂದುಗಳ ದೇಶವೆಂದರೂ ಸರ್ವ ಧರ್ವಿುಯರನ್ನು ಒಳಗೊಂಡಿದೆ. ಆದರೆ, ಈಗ ಹಿಂದುಗಳ ಸಂಖ್ಯೆಯೇ ಕುಸಿಯುತ್ತಿದೆ ಎಂದರೆ, ಸರ್ಕಾರ ಮತ್ತು ಸಮಾಜ ಗಂಭೀರವಾಗಿ ಚಿಂತಿಸಬೇಕಾದ ಸಂಗತಿ ಎಂದು ಎಚ್ಚರಿಕೆ ನೀಡಿದರು.

    ಪ್ರಜಾಪ್ರಭುತ್ವದ ರೂವಾರಿ, ಸಾಮಾಜಿಕ ಸಮಾನತೆಯ ಹರಿಕಾರ ಬಸವಣ್ಣ. ಇಂದು ಅವರ ಕಲ್ಪನೆಯ ಸಮಾಜ ನಿಮಾಣ ಮತ್ತು ಆಡಳಿತ ವ್ಯವಸ್ಥೆ ಬರಬೇಕಿದೆ ಎಂದು ಪ್ರಲ್ಹಾದ ಜೋಶಿ ಪ್ರತಿಪಾದಿಸಿದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts