ರಾವಂದೂರು: ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರದ ಜನಪರ ಯೋಜನೆಗಳು ಹೆಚ್ಚು ಲೋಕಸಭಾ ಸದಸ್ಯರು ಆಯ್ಕೆಯಾಗಲು ಸಹಕಾರಿಯಾಗಲಿದೆ ಎಂದು ಸಚಿವ ಕೆ.ವೆಂಕಟೇಶ್ ತಿಳಿಸಿದರು.
ಪಿರಿಯಾಪಟ್ಟಣ ತಾಲೂಕು ಕಿತ್ತೂರು ಗ್ರಾಮದಲ್ಲಿ ಶುಕ್ರವಾರ ಕುಟುಂಬ ಸಮೇತವಾಗಿ ಮತಗಟ್ಟೆಗೆ ಆಗಮಿಸಿ ಮತ ಚಲಾಯಿಸಿ ನಂತರ ಮಾತನಾಡಿದರು.
ಈ ಬಾರಿ ಲೋಕಸಭಾ ಚುನಾವಣೆಯಲ್ಲಿ ಹೆಚ್ಚು ಸ್ಥಾನಗಳನ್ನು ಕಾಂಗ್ರೆಸ್ ಪಡೆಯಲಿದೆ. ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರದ ಜನಪರ ಯೋಜನೆಗಳು ಇವರ ಗೆಲುವಿಗೆ ಶ್ರೀರಕ್ಷೆಯಾಗಲಿದ್ದು ಕೇಂದ್ರದ ಬಿಜೆಪಿ ಸರ್ಕಾರದ ಜನವಿರೋಧಿ ನೀತಿಗಳು ಕಾಂಗ್ರೆಸ್ ಅಭ್ಯರ್ಥಿಗಳು ಹೆಚ್ಚಿನ ಸ್ಥಾನ ಪಡೆಯಲು ಅನುಕೂಲವಾಗಲಿದೆ ಎಂದು ತಿಳಿಸಿದರು.
ಪತ್ನಿ ಭಾರತಿ ವೆಂಕಟೇಶ್, ಪುತ್ರ ನಿತಿನ್ ವೆಂಕಟೇಶ್, ಮೊಮ್ಮಗ ತೇಜಸ್ ಕುಮಾರ್ ಹಾಜರಿದ್ದರು.