ಸಿಎಂ ಎಚ್ಡಿಕೆಗೆ ಪತ್ರ ಬರೆದು ಬೇಸರ ವ್ಯಕ್ತಪಡಿಸಿದ್ದಾರೆ ಪ್ರಿಯಾಂಕ್​ ಖರ್ಗೆ: ಅಷ್ಟಕ್ಕೂ ಪತ್ರದಲ್ಲೇನಿದೆ?

ಬೆಂಗಳೂರು: ಕರ್ನಾಟಕ ಲೋಕಸೇವಾ ಆಯೋಗದ ಮೂಲಕ ನಡೆಯುತ್ತಿರುವ ನೇಮಕಾತಿಯಲ್ಲಿ ಸಾಮಾನ್ಯ ವರ್ಗಕ್ಕೆ ಮೀಸಲಾದ ಹುದ್ದೆಗಳಲ್ಲಿ ಮೆರಿಟ್​ ಆಧಾರದಲ್ಲಿ ಪರಿಶಿಷ್ಟ ಜಾತಿ/ಪಂಗಡಗಳ ಅಭ್ಯರ್ಥಿಗಳು ಅವಕಾಶ ವಂಚಿತರಾಗುತ್ತಿರುವ ಬಗ್ಗೆ ಸಚಿವ ಪ್ರಿಯಾಂಕ್​ ಖರ್ಗೆ ಅವರು ಮುಖ್ಯಮಂತ್ರಿ ಎಚ್​.ಡಿ ಕುಮಾರಸ್ವಾಮಿ ಅವರಿಗೆ ಪತ್ರ ಬರೆದು ಗಮನ ಸೆಳೆದಿದ್ದಾರೆ.

ಈ ಕುರಿತು ನಾಲ್ಕು ಪುಟಗಳ ಪತ್ರ ಬರೆದಿರುವ ಪ್ರಿಯಾಂಕ್​ ಖರ್ಗೆ, ಅನುಸೂಚಿತ ಜಾತಿಗಳ ಮೀಸಲನ್ನು ಶೇ. 50ಕ್ಕೇ ಮಿತಿಗೊಳಿಸುತ್ತಿರುವ ಬಗ್ಗೆ ಮತ್ತು ಮೆರಿಟ್​ ಹೊಂದಿರುವ ಪರಿಶಿಷ್ಟ ಜಾತಿ / ಪಂಗಡಗಳ ಅಭ್ಯರ್ಥಿಗಳಿಗೆ ಸಾಮಾನ್ಯ ವರ್ಗಕ್ಕೆ ಮೀಸಲಾದ ಹುದ್ದೆಗಳಲ್ಲಿ ಅವಕಾಶ ನೀಡದೆ ಇರುವ ಬಗ್ಗೆ ಅಸಮಾಧಾನ ಹೊರಹಾಕಿದ್ದಾರೆ. ಅಲ್ಲದೆ, ಕೂಡಲೇ ಈ ವಿಚಾರವಾಗಿ ಮಧ್ಯಪ್ರವೇಶ ಮಾಡಬೇಕಾಗಿ ಅವರು ಕೋರಿದ್ದಾರೆ.

ಪತ್ರದಲ್ಲೇನಿದೆ? ನೀವೇ ಓದಿ…