More

    ಶಿಕ್ಷಣ ಕ್ಷೇತ್ರಕ್ಕೆ ಬಂದ ಸಲಹೆಗಳ ಅನುಷ್ಠಾನ: ಸಚಿವ ಮಧು ಬಂಗಾರಪ್ಪ ಹೇಳಿಕೆ

    ಬೆಂಗಳೂರು: ನಮ್ಮ ಸರ್ಕಾರ ಶಿಕ್ಷಣಕ್ಕೆ ವಿಶೇಷ ಒತ್ತು ನೀಡಿದೆ. ಇದರ ಬಗ್ಗೆ ಯಾರೇ ಸಲಹೆಗಳನ್ನು ನೀಡಿದ್ದರೂ ಅವುಗಳನ್ನು ಅನುಷ್ಠಾನಕ್ಕೆ ತರಲು ಸಿದ್ಧ ಎಂದು ಸಚಿವ ಮಧು ಬಂಗಾರಪ್ಪ ಹೇಳಿದ್ದಾರೆ.

    ಸಾರ್ವಜನಿಕ ಗ್ರಂಥಾಲಯ ಇಲಾಖೆ ವತಿಯಿಂದ ಹಂಪಿನಗರದ ನಗರ ಕೇಂದ್ರ ಗ್ರಂಥಾಲಯದಲ್ಲಿ ಶನಿವಾರ ಆಯೋಜಿಸಲಾಗಿದ್ದ ‘ಗ್ರಂಥಪಾಲಕರ ದಿನ’ ಹಾಗೂ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಮಾತನಾಡಿದರು.

    ರಾಜ್ಯದ ಎಲ್ಲ ಶಾಲಾ ಮಕ್ಕಳಿಗೆ ಡಿಜಿಟಲ್ ಗ್ರಂಥಾಲಯಗಳ ಬಗ್ಗೆ ಅರಿವು ಮೂಡಿಸುವ ಕಾರ್ಯವನ್ನು ಕೈಗೆತ್ತಿಕೊಳ್ಳುಲಾಗುವುದು. ಸರ್ಕಾರಿ, ಅನುದಾನಿತ, ಅನುದಾನರಹಿತ ಶಾಲೆಗಳಿಗೆ ಡಿಜಿಟಲ್ ಗ್ರಂಥಾಲಯಗಳ ಬಗ್ಗೆ ಮಾಹಿತಿ ನೀಡಲಾಗುವುದು. ರಾಜ್ಯದ 447 ಗ್ರಂಥಾಲಯಗಳಲ್ಲಿ ಲಕ್ಷಾಂತರ ಪುಸ್ತಕಗಳು ಆನ್‌ಲೈನ್‌ನಲ್ಲಿ ಲಭ್ಯವಿದ್ದು, ಹೇಗೆ ಲಾಗಿನ್ ಆಗಬೇಕು, ಬಳಕೆ ಹೇಗೆ ಮತ್ತಿತರ ಮಾಹಿತಿಗಳನ್ನು ತಿಳಿಸಲು ಶಾಲೆಗಳಿಗೆ ತಿಳಿಸಲಾಗುವುದು ಎಂದು ಹೇಳಿದ ಸಚಿವರು, ರಾಜ್ಯದಲ್ಲಿ ಒಟ್ಟು 1.20 ಕೋಟಿ ಶಾಲಾ ಮಕ್ಕಳಿದ್ದಾರೆ. ಆದರೆ, ಇವರಿಗೆ ಮೂರುವರೆ ಲಕ್ಷ ಮಾತ್ರ ಶಿಕ್ಷಕರಿದ್ದಾರೆ. ಶಿಕ್ಷಕರ ಕೊರತೆ ನೀಗಿಸಲು ಪ್ರಮಾಣಿಕ ಪ್ರಯತ್ನ ಮಾಡಲಾಗುವುದು. ಶಿಕ್ಷಣ ಇಲಾಖೆಯಲ್ಲಿ ಬಹಳಷ್ಟು ಸಮಸ್ಯೆಗಳಿದ್ದು, ಇವುಗಳನ್ನೂ ಪರಿಹರಿಸಲು ಶಕ್ತಿ ಮೀರಿ ಕೆಲಸ ಮಾಡುವುದಾಗಿ ಭರವಸೆ ನೀಡಿದರು.

    ಡಾ.ಎಸ್.ಆರ್.ರಂಗನಾಥನ್ ಗ್ರಂಥಾಲಯ ವಿಜ್ಞಾನದ ಪಿತಾಮಹ. ಗ್ರಂಥಾಲಯಕ್ಕೆ ಇವರು ಅದ್ಭುತ ಕೊಡುಗೆ ನೀಡಿದ್ದಾರೆ. ನಮ್ಮ ತಂದೆ ಮಾಜಿ ಮುಖ್ಯಮಂತ್ರಿ ಎಸ್.ಬಂಗಾರಪ್ಪ ಅವರು ಮೈಸೂರಿನಲ್ಲಿ ಕಾಲೇಜಿನ ದಿನಗಳಲ್ಲಿ ಹೆಚ್ಚಿನ ಸಮಯವನ್ನು ಗ್ರಾಂಥಾಲಯಗಳಲ್ಲಿ ಕಳೆಯುತ್ತಿದ್ದರು. ಹೀಗಾಗಿ, ಅವರ ಭಾಷಣಗಳಲ್ಲಿ ಹೊಸ ಪದಗಳು ಹುಟ್ಟುತ್ತಿದ್ದವು ಎಂದು ಸಚಿವರು ತಿಳಿಸಿದರು. ಇಲಾಖೆ ನಿರ್ದೇಶಕ ಡಾ.ಸತೀಶಕುಮಾರ ಎಸ್.ಹೊಸಮನಿ, ಸಾಹಿತಿ ಶೂದ್ರ ಶ್ರೀನಿವಾಸ್ ಮತ್ತಿತರರಿದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts