More

    ಗೆಜ್ಜೆಗಿರಿ ಕ್ಷೇತ್ರ ಅಭಿವೃದ್ಧಿಗೆ ಸಹಕಾರ: ಸಚಿವ ಮಧು ಬಂಗಾರಪ್ಪ ಭರವಸೆ

    ಪುತ್ತೂರು ಗ್ರಾಮಾಂತರ: ಗೆಜ್ಜೆಗಿರಿ ಕ್ಷೇತ್ರದ ಅಭಿವೃದ್ಧಿಯ ವಿಷಯ ಮತ್ತು ಅದನ್ನು ಮುಂದುವರಿಸಿಕೊಂಡು ಹೋಗುವಲ್ಲಿ ಸದಾ ನಿಮ್ಮ ಜತೆಗಿರುತ್ತೇನೆ. ನಾನು ಮತ್ತು ಇಲ್ಲಿನ ಶಾಸಕರು ಜತೆಗಿದ್ದು ಕ್ಷೇತ್ರದ ಅಭಿವೃದ್ಧಿಗೆ ಸಂಪೂರ್ಣ ಸಹಕಾರ ನೀಡುತ್ತೇನೆ. ಕ್ಷೇತ್ರಕ್ಕೆ ಸಮುದಾಯ ಭವನ ಮತ್ತು ಪ್ರವಾಸೋದ್ಯಮದ ಪ್ರಯೋಜನಗಳನ್ನು ಒದಗಿಸಿಕೊಡಲು ಪ್ರಾಮಾಣಿಕ ಪ್ರಯತ್ನ ನಡೆಸುವುದಾಗಿ ಶಿಕ್ಷಣ ಸಚಿವ ಮಧು ಬಂಗಾರಪ್ಪ ಹೇಳಿದರು.

    ದೇಯಿ ಬೈದ್ಯೆತಿ ಕೋಟಿ-ಚೆನ್ನಯ ಮೂಲಸ್ಥಾನ ಗೆಜ್ಜೆಗಿರಿ ಕ್ಷೇತ್ರಕ್ಕೆ ಶನಿವಾರ ರಾತ್ರಿ ಭೇಟಿ ನೀಡಿ ವಿಶೇಷ ಪ್ರಾರ್ಥನೆ ಸಲ್ಲಿಸಿ ಬಳಿಕ ಗೆಜ್ಜೆಗಿರಿ ಕ್ಷೇತ್ರಾಡಳಿತ ಸಮಿತಿಯಿಂದ ಶಿಕ್ಷಣ ಸಚಿವ ಮಧು ಬಂಗಾರಪ್ಪ ಮತ್ತು ಕ್ಷೇತ್ರದ ಶಾಸಕ ಅಶೋಕ್ ರೈ ಅವರಿಗೆ ಅಭಿನಂದನಾ ಸಮಾರಂಭದಲ್ಲಿ ಮಾತನಾಡಿದರು.

    ಸರ್ಕಾರ ನನಗೆ ಮಕ್ಕಳ ವಿದ್ಯಾಭ್ಯಾಸದ ಕೆಲಸದ ಮಹತ್ವದ ಸಚಿವ ಸ್ಥಾನ ಕೊಟ್ಟಿದೆ. ಮಕ್ಕಳಿಗೆ ವಿದ್ಯಾಭ್ಯಾಸ ಕೊಡುವಂಥ ಪುಣ್ಯದ ಕೆಲಸ ಬೇರಾವುದೂ ಇಲ್ಲ. ಈ ಜವಾಬ್ದಾರಿಯನ್ನು ದೇವರ ಕೆಲಸ ಎಂದು ತಿಳಿದುಕೊಂಡು ನಿಭಾಯಿಸುತ್ತೇನೆ ಎಂದರು.
    ಅಭಿನಂದನೆ ಸ್ವೀಕರಿಸಿ ಶಾಸಕ ಅಶೋಕ್ ರೈ ಮಾತನಾಡಿ, ಕ್ಷೇತ್ರದ ಅಭಿವೃದ್ಧಿಗೆ ಅವಶ್ಯಕ ಮೂಲ ಅವಶ್ಯಕತೆಗಳನ್ನು ಸರ್ಕಾರದ ಮೂಲಕ ಒದಗಿಸಿಕೊಡುವುದಾಗಿ ತಿಳಿಸಿದರು.

    ಗೆಜ್ಜೆಗಿರಿ ಕ್ಷೇತ್ರಾಡಳಿತ ಸಮಿತಿ ಅಧ್ಯಕ್ಷ ಪೀತಾಂಬರ ಹೆರಾಜೆ ಅಧ್ಯಕ್ಷತೆ ವಹಿಸಿದ್ದರು. ಸಮಿತಿ ಗೌರವಾಧ್ಯಕ್ಷ ಜಯಂತ ನಡುಬೈಲು, ಆನುವಂಶಿಕ ಮೊಕ್ತೇಸರ ಶ್ರೀಧರ ಪೂಜಾರಿ, ಸಮಿತಿ ಕೋಶಾಧಿಕಾರಿ ದೀಪಕ್ ಕೋಟ್ಯಾನ್, ಕಾಂಗ್ರೆಸ್ ಮುಖಂಡ ಕಾವು ಹೇಮನಾಥ ಶೆಟ್ಟಿ, ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯೆ ಅನಿತಾ ಹೇಮನಾಥ ಶೆಟ್ಟಿ, ಸಮಿತಿ ಪ್ರಮುಖರಾದ ಅಕ್ಷಿತ್ ಸುವರ್ಣ, ಡಾ.ರಾಜಾರಾಮ್, ಸತೀಶ್ ಕುಮಾರ್ ಕೆಡಿಂಜಿ, ನವನೀತ್ ಹಿಂಗಾಣಿ, ಶೇಖರ್ ಬಂಗೇರ, ರಾಜೇಂದ್ರ ಚಿಲಿಂಬಿ, ನಾರಾಯಣ ಮಚ್ಚಿನ, ಪ್ರಕಾಶ್ ಪೂಜಾರಿ ನಾರಾವಿ, ಜಯರಾಮ್ ಬಂಗೇರ, ವೇದನಾಥ ಸುವರ್ಣ ಉಪಸ್ಥಿತರಿದ್ದರು. ಗೆಜ್ಜೆಗಿರಿ ಕ್ಷೇತ್ರಾಡಳಿತ ಸಮಿತಿ ಪ್ರಧಾನ ಕಾರ್ಯದರ್ಶಿ ಉಲ್ಲಾಸ್ ಕೋಟ್ಯಾನ್ ಸ್ವಾಗತಿಸಿ, ಉಪಾಧ್ಯಕ್ಷ ರವಿ ಪೂಜಾರಿ ಚಿಲಿಂಬಿ ವಂದಿಸಿದರು.

    ಬ್ರಹ್ಮಶ್ರೀ ನಾರಾಯಣ ಗುರುಗಳ ನಿಗಮ ಮಾಡಬೇಕೆಂಬ ಯೋಚನೆ ಇತ್ತು. ಆದರೆ ಸರ್ಕಾರದ ಗ್ಯಾರಂಟಿ ಯೋಜನೆಗಳನ್ನು ಮೊದಲು ಅನುಷ್ಠಾನ ಮಾಡಬೇಕಿದ್ದು, ನಾವು ಅದಕ್ಕೆ ಬದ್ಧವಾಗಿದ್ದೇವೆ. ಹಾಗೆಂದು ನಿಗಮ ವಿಚಾರದಲ್ಲಿ ಯಾವುದೇ ಕಾರಣಕ್ಕೂ ಹಿಂದೆ ಹೋಗುವುದಿಲ್ಲ. ಮಂತ್ರಿಯಾಗಿ ನಾನು ಈ ಕೆಲಸ ಮಾಡದಿದ್ದರೆ ತಪ್ಪಾಗುತ್ತದೆ.
    – ಮಧು ಬಂಗಾರಪ್ಪ ರಾಜ್ಯದ ಶಿಕ್ಷಣ ಸಚಿವ

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts