ಶಿವಮೊಗ್ಗ: ಸ್ಥಳೀಯ ಸಂಸ್ಥೆ ಚುನಾವಣೆಗೆ ಕಾರ್ಯಕರ್ತರು ಸಜ್ಜಾಗಬೇಕಿದೆ. ಯಾವತ್ತೇ ಚುನಾವಣೆ ಘೋಷಣೆಯಾದರೂ ಪರಿಣಾಮಕಾರಿಯಾಗಿ ಎಲ್ಲರೂ ಒಗ್ಗಟ್ಟಿನಿಂದ ಎದುರಿಸಬೇಕಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಎಸ್.ಮಧು ಬಂಗಾರಪ್ಪ ಕಾರ್ಯಕರ್ತರಿಗೆ ಕರೆ ನೀಡಿದರು.
ನಗರದ ಜಿಲ್ಲಾ ಕಾಂಗ್ರೆಸ್ ಭವನದಲ್ಲಿ ಮಂಗಳವಾರ ಕಾಂಗ್ರೆಸ್ ಪಕ್ಷದ ಕಾರ್ಯಕರ್ತರು ಹಾಗೂ ಮುಖಂಡರ ಬೃಹತ್ ಸಭೆಯಲ್ಲಿ ಮಾತನಾಡಿದ ಅವರು, ಪಕ್ಷದ ಸಂಘಟನೆ ಹಾಗೂ ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ ಕಾರ್ಯಕರ್ತರು ಒಗ್ಗಟ್ಟಿನಿಂದ ಹೋರಾಡಬೇಕಿದೆ. ಚುನಾವಣೆ ಗೆಲ್ಲುವ ನಿಟ್ಟಿನಲ್ಲಿ ಪ್ರಾಮಾಣಿಕ ಪ್ರಯತ್ನ ಮಾಡಬೇಕಿದೆ ಎಂದರು.
ಮಹಾನಗರ ಪಾಲಿಕೆ ಅಧಿಕಾರವನ್ನು ಹಿಡಿಯುತ್ತ ಎಲ್ಲ ಮುಖಂಡರು ಹಾಗೂ ಕಾರ್ಯಕರ್ತರು ಆಲೋಚನೆ ಮಾಡಬೇಕು. ಪಕ್ಷ ಹಾಗೂ ನಾನು ವೈಯಕ್ತಿಕವಾಗಿ ನಿಮ್ಮ ಗೆಲುವಿಗೆ ಜತೆಯಲ್ಲಿ ಇರುತ್ತೇನೆ. ಪಕ್ಷದ ಗ್ಯಾರಂಟಿ ಕಾರ್ಯಕ್ರಮದ ಜತೆಗೆ ಮಹಾನಗರದ ಅಭಿವೃದ್ಧಿಗೆ ಸರ್ಕಾರ ಕೈಗೊಂಡಿರುವ ಕಾರ್ಯಕ್ರಮಗಳನ್ನು ಕಾರ್ಯಕರ್ತರು ಮನೆಮನೆಗೆ ತಲುಪಿಸಬೇಕು ಹೇಳಿದರು.
ಪಕ್ಷದ ಕಾರ್ಯಕರ್ತರು ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷವನ್ನು ಅಧಿಕಾರಕ್ಕೆ ತಂದಂತೆ ಮುಂಬರುವ ಚುನಾವಣೆಗಳಲ್ಲಿ ಕಾಂಗ್ರೆಸ್ ಪಕ್ಷವನ್ನು ಅಧಿಕಾರಕ್ಕೆ ತರಲು ತಮ್ಮ ತಮ್ಮ ಬೂತ್‌ಮಟ್ಟದಲ್ಲಿ ಉತ್ತಮ ರೀತಿಯಲ್ಲಿ ಕಾರ್ಯನಿರ್ವಹಿಸಬೇಕು. ಕಾಂಗ್ರೆಸ್ ಶಿಸ್ತಿನ ಪಕ್ಷ ಆಗಿರುವುದರಿಂದ ಮುಂದಿನ ದಿನಗಳಲ್ಲಿ ಗ್ರಾಪಂ, ತಾಪಂ, ಜಿಪಂ, ಪಪಂ, ನಗರಸಭೆ, ಪುರಸಭೆ, ಮಹಾನಗರ ಪಾಲಿಕೆಗಳಿಗೆ ಪಕ್ಷ ಯಾರಿಗೆ ಟಿಕೆಟ್ ನೀಡಿದರೂ ಬೆಂಬಲಿಸಿ, ಹೆಚ್ಚಿನ ಅಂತರದಲ್ಲಿ ಗೆಲ್ಲಿಸಬೇಕು ಎಂದು ಸೂಚಿಸಿದರು.
ಪ್ರತಿಯೊಬ್ಬ ಕಾರ್ಯಕರ್ತರು ಪಕ್ಷ ಸಂಘಟನೆಯಲ್ಲಿ ನಿರಂತರವಾಗಿರಬೇಕು. ಪಕ್ಷದ ಚೌಕಟ್ಟಿನಲ್ಲಿ ಒಗ್ಗಟ್ಟಾಗಿ ಪಕ್ಷವನ್ನು ಮತ್ತಷ್ಟು ಸಂಘಟಿಸಿ ಬಲಿಷ್ಠಗೊಳಿಸಬೇಕು. ಇಂದು ರಾಜ್ಯದಲ್ಲಿ ಅಧಿಕಾರಿಕ್ಕೆ ಬರಲು ಕಾರ್ಯಕರ್ತರ ಶ್ರಮ ಅನನ್ಯ. ನಿಮ್ಮ ಶ್ರಮ ವ್ಯರ್ಥವಾಗಲು ಬಿಡುವುದಿಲ್ಲ. ಮುಂದಿನ ಚುನಾವಣೆಗಳು ಕಾರ್ಯಕರ್ತರ ಚುನಾವಣೆ ನಮ್ಮೆಲ್ಲರ ಹೊಣೆ ಸಾಕಷ್ಟಿದ್ದು ನಿಮ್ಮೆಲ್ಲರ ಗೆಲುವಿಗೆ ಒಗ್ಗಟ್ಟಿನಿಂದ ಶ್ರಮಿಸುತ್ತೇವೆ ಎಂದು ಭರವಸೆ ನೀಡಿದರು.
ಜಿಲ್ಲಾಧ್ಯಕ್ಷ ಆರ್.ಪ್ರಸನ್ನ ಕುಮಾರ್, ಮಾಜಿ ಶಾಸಕ ಎಚ್.ಎಂ.ಚಂದ್ರಶೇಖರಪ್ಪ, ಸೂಡಾ ಅಧ್ಯಕ್ಷ ಎಚ್.ಎಸ್.ಸುಂದರೇಶ್, ಮುಖಂಡರಾದ ಇಸ್ಮಾಯಿಲ್ ಖಾನ್, ಎಂ.ಶ್ರೀಕಾಂತ್, ಎಚ್.ಸಿ.ಯೋಗೇಶ್. ಎನ್.ರಮೇಶ್, ಎಸ್.ರವಿಕುಮಾರ್, ಎಸ್.ಕೆ.ಮರಿಯಪ್ಪ, ಸಿ.ಎಸ್.ಚಂದ್ರಭೂಪಾಲ್, ಕಲೀಂ ಪಾಷಾ, ಶಿವಕುಮಾರ್ ಮತ್ತಿತರರು ಉಪಸ್ಥಿತರಿದ್ದರು.
ಸ್ಥಳೀಯ ಸಂಸ್ಥೆ ಚುನಾವಣೆಗೆ ಸಜ್ಜಾಗಿ, ಕಾರ್ಯಕರ್ತರಿಗೆ ಸಚಿವ ಮಧು ಕರೆ

ಕನಸಿನಲ್ಲಿ ಈ ಮೂರು ಪಕ್ಷಿಗಳು ಕಂಡ್ರೆ ಲಾಟರಿ ಹೊಡೆದಂತೆ! Lucky Birds ನೀಡುವ ಸುಳಿವೇನು..?
Lucky Birds : ಸಾಮಾನ್ಯವಾಗಿ ನಿದ್ದೆಯಲ್ಲಿ ಕನಸು ಕಾಣೋದು ಸಹಜ. ಈ ಕನಸುಗಳ ಮೂಲಕ ಪ್ರಕೃತಿ…
ಯಾವ ಕಾರಣಕ್ಕೂ ಮಾವಿನ ವಾಟೆ ಎಸೆಯಬೇಡಿ…ಅದರ ಪ್ರಯೋಜನಗಳ ಬಗ್ಗೆ ತಿಳಿದ್ರೆ ನೀವು ಖಂಡಿತ ಅಚ್ಚರಿಪಡ್ತೀರಾ! Mango Kernels
Mango Kernels : ಮಾವಿನ ಹಣ್ಣನ್ನು ಹಣ್ಣುಗಳ ರಾಜ ಎಂದು ಕರೆಯುತ್ತಾರೆ. ರುಚಿಗೆ ಮಾತ್ರವಲ್ಲ, ಮಾವಿನ…
ಪ್ಲಾಸ್ಟಿಕ್ ಬಾಕ್ಸ್ನಲ್ಲಿ ಬಿಸಿ ಅನ್ನ ಇಡುವ ಅಭ್ಯಾಸವಿದೆಯೇ? ಆರೋಗ್ಯದ ಬಗ್ಗೆ ಇರಲಿ ಎಚ್ಚರ.. hot rice in plastic boxes
hot rice in plastic boxes: ಪ್ಲಾಸ್ಟಿಕ್ ಬಳಕೆಯನ್ನು ತಡೆಯಲಾಗುತ್ತಿಲ್ಲ. ಪ್ಲಾಸ್ಟಿಕ್ ಪಾತ್ರೆಗಳನ್ನು ಬಳಸುವುದು ಹಾನಿಕಾರಕ,…