More

    ಪುತ್ರ ಸುನಿಲ್ ಬೋಸ್‌ಗೆ ಎಂಪಿ ಟಿಕೆಟ್‌ಗೆ ಸಚಿವ ಮಹದೇವಪ್ಪ ಬ್ಯಾಟಿಂಗ್

    ಮೈಸೂರು: ಲೋಕಸಭಾ ಚುನಾವಣೆಯಲ್ಲಿ ನನ್ನ ಪುತ್ರ ಸುನಿಲ್ ಬೋಸ್‌ಗೆ ಟಿಕೆಟ್ ನೀಡುವ ವಿಚಾರದಲ್ಲಿ ಪಕ್ಷದ ಹೈಕಮಾಂಡ್ ಅಂತಿಮ ತೀರ್ಮಾನ ತೆಗೆದುಕೊಳ್ಳುತ್ತದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಡಾ.ಎಚ್.ಸಿ. ಮಹದೇವಪ್ಪ ಹೇಳಿದರು.

    ನಗರದಲ್ಲಿ ಶುಕ್ರವಾರ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಚಾಮರಾಜನಗರ, ಮೈಸೂರು- ಕೊಡಗು ಲೋಕಸಭಾ ಕ್ಷೇತ್ರಗಳಿಗೆ ಇನ್ನೂ ಅಭ್ಯರ್ಥಿ ಆಯ್ಕೆ ಆಗಿಲ್ಲ. ಪುತ್ರ ಸುನೀಲ್ ಬೋಸ್‌ಗೆ ಟಿಕೆಟ್ ನೀಡುವಂತೆ ಪುತ್ರನ ಪರವಾಗಿ ನಾನು ಮಾತನಾಡುತ್ತಿಲ್ಲ. ಆದರೆ, ಪಕ್ಷದ ಸದಸ್ಯತ್ವ ಪಡೆಯದವರೇ ಶಾಸಕರಾಗಿದ್ದಾರೆ. ರಾಜಕೀಯದಲ್ಲಿ ಅಂಥ ಸನ್ನಿವೇಶಗಳು ಬಂದು ಬಿಡುತ್ತವೆ. ನಂಜನಗೂಡು ಉಪಚುನಾವಣೆಯಲ್ಲೇ ಸುನೀಲ್ ಬೋಸ್ ಅಭ್ಯರ್ಥಿ ಆಗಬೇಕಿತ್ತು. ಆಗಿನಿಂದಲೇ ಪಕ್ಷ ಸಂಘಟನೆ ಮಾಡಿದ್ದಾನೆ. ಕಳೆದ ಮೂರು ಚುನಾವಣೆಗಳಿಂದ ಸುನಿಲ್‌ಬೋಸ್‌ಗೆ ಟಿಕೆಟ್ ಸಿಕ್ಕಿಲ್ಲ. ಅದಾಗ್ಯೂ ಮುನಿಸಿಕೊಳ್ಳದೆ ಪಕ್ಷದ ಪರ ಕೆಲಸ ಮಾಡುತ್ತಿದ್ದಾನೆ. ಅಭ್ಯರ್ಥಿ ಆಯ್ಕೆಗಾಗಿ ವೀಕ್ಷಕರು ಬಂದು ಅಭಿಪ್ರಾಯ ಸಂಗ್ರಹಿಸಿ ಹೋಗಿದ್ದಾರೆ ಎಂದರು.

    ಜಾತಿ ಗಣತಿ ವರದಿ ಇನ್ನೂ ಸರ್ಕಾರಕ್ಕೆ ಸಲ್ಲಿಕೆ ಆಗಿಲ್ಲ, ಆಗಲೇ ಊಹೆ ಮಾಡಿ ವಿರೋಧ ಮಾಡಿದರೆ ಹೇಗೆ? ಪ್ರತಿಯೊಬ್ಬರಿಗೂ ಸಾಮಾಜಿಕ, ಶೈಕ್ಷಣಿಕ, ಆರ್ಥಿಕ ಸಮಾನತೆ ಸಿಗಬೇಕು. ಅದಕ್ಕಾಗಿಯೇ ನಮ್ಮ ಸರ್ಕಾರ ಇದ್ದಾಗ ಸಮೀಕ್ಷೆ ನಡೆಸಲಾಗಿತ್ತು. ಇದೀಗ ನಮ್ಮದೇ ಸರ್ಕಾರ ಅಧಿಕಾರಕ್ಕೆ ಬಂದಿದ್ದು, ವರದಿ ಸ್ವೀಕಾರ ಆಗಬೇಕಿದೆ. ಅಂತಿಮ ವರದಿ ಸಲ್ಲಿಕೆಗೆ ಸಮಯಾವಕಾಶ ಕೇಳಿದ್ದಾರೆ. ವರದಿಯಲ್ಲಿ ಏನಿದೆ ಅಂತ ಯಾರೂ ನೋಡಿಲ್ಲ. ವರದಿ ಸರ್ಕಾರದ ಕೈಸೇರುವ ಮುನ್ನವೇ ವಿರೋಧ ಮಾಡುವುದು ಸರಿಯಲ್ಲ ಎಂದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts