ಧಾರವಾಡ: ಸಮಾಜ ಕಲ್ಯಾಣ ಇಲಾಖೆ ಸಚಿವ ಡಾ. ಎಚ್.ಸಿ. ಮಹಾದೇವಪ್ಪ ನ.8ರಂದು ಜಿಲ್ಲಾ ಪ್ರವಾಸ ಕೈಗೊಂಡಿದ್ದಾರೆ. ಅಂದು ಬೆಳಗ್ಗೆ 11 ಗಂಟೆಗೆ ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಸಮಾಜ ಕಲ್ಯಾಣ ಇಲಾಖೆಯ ಬೆಳಗಾವಿ ವಿಭಾಗದ ಎಲ್ಲ ಜಿಲ್ಲೆಗಳ ನಿಗಮ, ಮಂಡಳಿ, ಆಯೋಗಗಳು ಅನುಷ್ಠಾನಗೊಳಿಸುತ್ತಿರುವ ಯೋಜನೆಗಳ ಪ್ರಗತಿ ಪರಿಶೀಲನಾ ಸಭೆ ಜರುಗಿಸುವರು. ಸಂಜೆ 5 ಗಂಟೆಗೆ ಹುಬ್ಬಳ್ಳಿಗೆ ತೆರಳಿ ರಾತ್ರಿ 9 ಗಂಟೆಗೆ ಬೆಂಗಳೂರಿಗೆ ತೆರಳುವರು ಎಂದು ಪ್ರಕಟಣೆ ತಿಳಿಸಿದೆ.
