More

    ರೈತರನ್ನು ಭೇಟಿ ಮಾಡಲಿರುವ ಕೇಂದ್ರ ಸಚಿವ ಅಮಿತ್ ಷಾ: ಜ.7ರೊಳಗೆ ಸಿಎಂ ಜತೆ ಮಾತುಕತೆ

    ಮಂಡ್ಯ: ಜಿಲ್ಲೆಗೆ ಆಗಮಿಸಲಿರುವ ಕೇಂದ್ರ ಗೃಹ ಸಚಿವ ಅಮಿತ್ ಷಾ ಅವರೊಂದಿಗೆ ರೈತರನ್ನು ಭೇಟಿ ಮಾಡಿಸುವುದಾಗಿ ಜಿಲ್ಲಾ ಉಸ್ತುವಾರಿ ಸಚಿವ ಕೆ.ಗೋಪಾಲಯ್ಯ ಹೇಳಿದ್ದಾರೆ.
    ಕಬ್ಬು ಮತ್ತು ಹಾಲಿಗೆ ದರ ನಿಗದಿ ಸಂಬಂಧ ನಗರದಲ್ಲಿ ಅನಿರ್ದಿಷ್ಟಾವಧಿ ಧರಣಿ ನಡೆಸುತ್ತಿರುವ ಹಿನ್ನೆಲೆಯಲ್ಲಿ ಗುರುವಾರ ಡಿಸಿ ಕಚೇರಿ ಸಭಾಂಗಣದಲ್ಲಿ ರೈತ ಸಂಘದ ಮುಖಂಡರೊಂದಿಗೆ ಆಯೋಜಿಸಿದ್ದ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.
    ನಾವೆಲ್ಲರೂ ರೈತ ಕುಟುಂಬದಲ್ಲಿ ಹುಟ್ಟಿ ಬೆಳೆದವರು. ರೈತರ ಸಮಸ್ಯೆಗಳನ್ನು ಕುರಿತು ಜ.7ರೊಳಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರೊಂದಿಗೆ ಸಭೆ ನಡೆಸಿ ಚರ್ಚಿಸಿ ರಾಜ್ಯ ಸರ್ಕಾರದಿಂದ ಬಗೆಹರಿಸಲಾಗುವುದು. ಅಂತೆಯೇ ಅಮಿತ್ ಷಾ ಅವರು ಕಾರ್ಯಕ್ರಮಗಳಲ್ಲಿ ಭಾಗವಹಿಸುವ ಸಂದರ್ಭದಲ್ಲಿ ರೈತರು ತಮ್ಮ ಬೇಡಿಕೆಗಳನ್ನು ಸಚಿವರ ಮುಂದೆ ಹೇಳಿಕೊಳ್ಳಲು ಅವಕಾಶ ಮಾಡಿಕೊಡಲಾಗುವುದು ಎಂದು ಭರವಸೆ ನೀಡಿದರು.
    ಸಭೆಯಲ್ಲಿ ವಿಧಾನ ಪರಿಷತ್ ಸದಸ್ಯ ಸಿ.ಪಿ ಯೋಗೇಶ್ವರ್, ಜಿಲ್ಲಾಧಿಕಾರಿ ಡಾ.ಎಚ್.ಎನ್. ಗೋಪಾಲಕೃಷ್ಣ, ಜಿಲ್ಲಾ ಎಸ್ಪಿ ಎನ್.ಯತೀಶ್, ರೈತ ಸಂಘದ ರಾಜ್ಯಾಧ್ಯಕ್ಷ ಬಡಗಲಪುರ ನಾಗೇಂದ್ರ, ಸಂಘಟನಾ ಕಾರ್ಯದರ್ಶಿ ಎಸ್.ಸಿ.ಮಧುಚಂದನ್ ಇತರರಿದ್ದರು.
    ಐವರಿಗೆ ಕೋವಿಡ್ ಟೆಸ್ಟ್: ಕೇಂದ್ರ ಸಚಿವ ಅಮಿತ್ ಷಾ ಅವರನ್ನು ಭೇಟಿ ಮಾಡಲಿರುವ ಹಿನ್ನೆಲೆಯಲ್ಲಿ ಬಡಗಲಪುರ ನಾಗೇಂದ್ರ, ಎಸ್.ಸಿ.ಮಧುಚಂದನ್, ಪ್ರಸನ್ನ ಎನ್.ಗೌಡ, ಎ.ಎಲ್.ಕೆಂಪುಗೌಡ, ಮಹೇಶ್ ಪ್ರಭು ಅವರಿಗೆ ಕೋವಿಡ್ ಟೆಸ್ಟ್ ಮಾಡಲಾಗಿದೆ.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts