ಸಿಂಧನೂರು: ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡ ಅಭಿವೃದ್ಧಿ ನಿಗಮದ ಅಧೀಕ್ಷಕ ಪಿ.ಚಂದ್ರಶೇಖರನ್ ಆತ್ಮಹತ್ಯೆಗೆ ಕಾರಣರಾಗಿರುವ ಪರಿಶಿಷ್ಟ ವರ್ಗಗಳ ಕಲ್ಯಾಣ ಸಚಿವ ಬಿ.ನಾಗೇಂದ್ರ ರಾಜೀನಾಮೆ ಪಡೆಯಬೇಕು. ಚಂದ್ರಶೇಖರನ್ ಕುಟುಂಬಕ್ಕೆ 25 ಲಕ್ಷ ರೂ. ಪರಿಹಾರ ನೀಡಬೇಕೆಂದು ಒತ್ತಾಯಿಸಿ ತಹಸೀಲ್ ಕಚೇರಿ ಶಿರಸ್ತೇದಾರ್ ಶಿವಾನಂದಗೆ ಕರವೇ ತಾಲೂಕು ಘಟಕದಿಂದ ಗುರುವಾರ ಮನವಿ ಸಲ್ಲಿಸಲಾಯಿತು.
ಆತ್ಮಹತ್ಯೆ ಮಾಡಿಕೊಂಡಿರುವ ಅಧಿಕಾರಿ ಡೆತ್‌ನೋಟ್‌ನಲ್ಲಿ ಎಲ್ಲ ಬರೆದಿಟ್ಟಿದ್ದಾರೆ. ಆತ್ಮಹತ್ಯೆಗೆ ಸಚಿವ ನಾಗೇಂದ್ರ ಮತ್ತು ನಿಗಮ ಅಧ್ಯಕ ದದ್ದಲ್ ಬಸನಗೌಡ ಕಾರಣ ಎಂದು ತಿಳಿದು ಬಂದಿದ್ದು, ಮೊದಲು ಸಚಿವರ ರಾಜೀನಾಮೆ ಪಡೆಯಬೇಕು. ನಿಗಮದ ಅಧ್ಯಕ್ಷರನ್ನು ವಜಾ ಮಾಡಬೇಕು. ಈ ಪ್ರಕರಣವನ್ನು ಸಿಬಿಐಗೆ ವಹಿಸಿ ಸಂಚಿನಲ್ಲಿ ಭಾಗಿಯಾದವರ ವಿರುದ್ಧ ಕಾನೂನು ಕ್ರಮ ವಹಿಸಬೇಕು. ಮೃತ ಅಧಿಕಾರಿಯ ಕುಟುಂಬದ ಸದಸ್ಯರೊಬ್ಬರಿಗೆ ಸರ್ಕಾರಿ ಉದ್ಯೋಗ ನೀಡಬೇಕೆಂದು ಆಗ್ರಹಿಸಲಾಯಿತು.