More

    ಕರಾವಳಿಯಲ್ಲಿ ಕಲೆಗೆ ಪ್ರೋತ್ಸಾಹ: ಕ್ರೀಡಾ ಸಚಿವ ನಾರಾಯಣ ಗೌಡ ಮೆಚ್ಚುಗೆ

    ಶಿರ್ವ: ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳು ಕಲೆ ಮತ್ತು ಕ್ರೀಡೆಗೆ ಹೆಚ್ಚಿನ ಪ್ರೋತ್ಸಾಹ ನೀಡುತ್ತಿವೆ. ಇಲ್ಲಿನ ಕಲೆ, ಸಂಸ್ಕೃತಿ ಅತ್ಯಂತ ಶ್ರೀಮಂತವಾದುದು. ತುಳುನಾಡು ಹಾಗೂ ಕನ್ನಡ ನಾಡು ಅತ್ಯಂತ ಶ್ರೇಷ್ಠತೆ ಪಡೆದ ನಾಡು ಎಂದು ಯುವ ಸಬಲೀಕರಣ ಮತ್ತು ಕ್ರೀಡಾ ಸಚಿವ ಕೆ.ಸಿ.ನಾರಾಯಣ ಗೌಡ ಹೇಳಿದರು.
    ಶಿರ್ವ ಗ್ರಾಮ ಪಂಚಾಯಿತಿಯ ಮಟ್ಟಾರು ಎಂಬಲ್ಲಿ ಕರಾವಳಿ ಅಭಿವೃದ್ಧಿ ಪ್ರಾಧಿಕಾರ ವತಿಯಿಂದ ಮಂಜೂರಾದ ವಿವಿಧ ಕಾಮಗಾರಿ ಹಾಗೂ ಬಯಲು ರಂಗಮಂದಿರ ನಿರ್ಮಾಣ ಕಾಮಗಾರಿಗೆ ಶಂಕುಸ್ಥಾಪನೆ ನೆರವೇರಿಸಿ ಮಾತನಾಡಿದರು.
    ಪ್ರಾಧಿಕಾರ ಮೂಲಕ ಇಂದು ಹಳ್ಳಿಹಳ್ಳಿಗಳು ಅಭಿವೃದ್ಧಿಯತ್ತ ಸಾಗುತ್ತಿವೆ. ಈ ಇಲಾಖೆಯಲ್ಲಿ ಕೆಲಸ ಮಾಡಲು ತುಂಬ ಸಂತಸವಾಗುತ್ತಿದೆ. ಗ್ರಾಮೀಣ ಪ್ರತಿಭೆಗಳನ್ನು ಗುರುತಿಸಿ ಅವರಿಗೆ ಶಕ್ತಿ ತುಂಬಿ ಸಮಾಜದ ಮುಖ್ಯವಾಹಿನಿಗೆ ಪರಿಚಯಿಸುವ ಕಾರ್ಯವೂ ಇಲಾಖೆಯಿಂದ ನಡೆಯುತ್ತಿದೆ ಎಂದರು.

    ಉಡುಪಿ ಜಿಲ್ಲಾ ಪಂಚಾಯಿತಿ ಅಧ್ಯಕ್ಷ ದಿನಕರ ಬಾಬು ಅಧ್ಯಕ್ಷತೆ ವಹಿಸಿದ್ದರು. ಕಾಪು ತಾಲೂಕು ಪಂಚಾಯತಿ ಅಧ್ಯಕ್ಷೆ ಶಶಿಪ್ರಭಾ ಎಸ್.ಶೆಟ್ಟಿ, ಜಿಲ್ಲಾ ಪಂಚಾಯತಿ ಯೋಜನಾಧಿಕಾರಿ ಶ್ರೀನಿವಾಸ್, ಕಾಪು ಪುರಸಭಾ ಅಧ್ಯಕ್ಷ ಅನಿಲ್ ಕುಮಾರ್, ರಾಜ್ಯ ಬಿಜೆಪಿ ಕಾರ್ಯಕಾರಿ ಸಮಿತಿ ಸದಸ್ಯ ಸುರೇಶ್ ಶೆಟ್ಟಿ ಗುರ್ಮೆ, ಜಿಲ್ಲಾ ಪಂಚಾಯಿತಿ ಸದಸ್ಯೆ ಗೀತಾಂಜಲಿ ಸುವರ್ಣ, ಪ್ರಾಧಿಕಾರ ಸದಸ್ಯರಾದ ವಿಜಯ್ ಕುಮಾರ್, ಕೇಸರಿ ಯುವರಾಜ್, ಮಂಜುನಾಥ್ ಜೆನ್ನು, ಶ್ರೀಕಾಂತ್ ನಾಯಕ್, ನಯನಾ ಗಣೇಶ್, ಕ್ರೀಡಾ ಇಲಾಖಾಧಿಕಾರಿ ರೋಶನ್ ಶೆಟ್ಟಿ, ಉದ್ಯಾವರ ರಾಧಾಕಷ್ಣ, ಬೆಳ್ಳೆ ಗ್ರಾಪಂ ಅಧ್ಯಕ್ಷ ಸುಧಾಕರ್ ಪೂಜಾರಿ, ಕುತ್ಯಾರು ಗ್ರಾಪಂ ಅಧ್ಯಕ್ಷೆ ಲತಾ ಆಚಾರ್ಯ, ಶಿರ್ವ ಗ್ರಾಮ ಪಂಚಾಯಿತಿ ಅಧ್ಯಕ್ಷ ಗ್ರೆಗೊರಿ ಕೊನ್ರಾಡ್ ಕ್ಯಾಸ್ಟಲಿನೊ, ಜಿಲ್ಲಾ ಪಂಚಾಯಿತಿ ಸದಸ್ಯೆ ಶಿಲ್ಪಾ, ವೀಣಾ ಶೆಟ್ಟಿ, ಸುಧಾಕರ್ ಶೆಟ್ಟಿ, ಯೋಜನಾಧಿಕಾರಿ ಚಂದ್ರಶೇಖರ್ ರೈ, ನಿರ್ಮಿತಿ ಕೇಂದ್ರದ ಅರುಣ್ ಕುಮಾರ್ ಮೊದಲಾದವರು ಉಪಸ್ಥಿತರಿದ್ದರು.
    ಪ್ರದೀಪ್ ಡಿಸೋಜ ಸ್ವಾಗತಿಸಿದರು. ಸುರೇಂದ್ರ ಪೂಜಾರಿ ಕಾರ್ಯಕ್ರಮ ನಿರೂಪಿಸಿದರು. ಸಂತೋಷ್ ಮೂಡುಬೆಳ್ಳೆ ವಂದಿಸಿದರು.

    ಗ್ರಾಮೀಣ ಭಾಗದ ಅವಶ್ಯಕತೆ ಪೂರೈಕೆ
    ಕರಾವಳಿ ಪ್ರಾಧಿಕಾರ ಅಧ್ಯಕ್ಷ ಮಟ್ಟಾರು ರತ್ನಾಕರ ಹೆಗ್ಡೆ ಮಾತನಾಡಿ, ಗ್ರಾಮೀಣ ಭಾಗದ ಜನರ ಅವಶ್ಯಕತೆ ಪೂರೈಸುವ ಕೆಲಸವನ್ನು ಪ್ರಾಧಿಕಾರದ ಮೂಲಕ ನಡೆಸಲಾಗುತ್ತಿದೆ. ಈಗಾಗಲೇ ಮೀನು ಮಾರುಕಟ್ಟೆ, ರಸ್ತೆ, ತೂಗುಸೇವೆಯಂಥ ಹಲವು ಕೋಟಿ ರೂ. ಮೌಲ್ಯದ ಕಾಮಗಾರಿಗಳನ್ನು ನಡೆಸಿದ್ದೇವೆ. ಕಾರ್ಕಳದ ಕೋಟಿ ಚೆನ್ನಯ ಥೀಮ್ ಪಾರ್ಕ್‌ಗೆ 50 ಲಕ್ಷ ರೂ. ಅನುದಾನ ನೀಡಲಾಗಿದೆ ಎಂದು ಹೇಳಿದರು.

    ಉಡುಪಿ ಹಾಗೂ ಮಂಗಳೂರು ಭಾಗಗಳಲ್ಲಿ ಕೆಲಸ ಮಾಡುವುದೆಂದರೆ ಅತ್ಯಂತ ಖುಷಿ ನೀಡುತ್ತದೆ. ಈ ಭಾಗದ ಜನಪ್ರತಿನಿಧಿಗಳು ಬರಿಯ ಅಭಿವೃದ್ಧಿ ಕಾಮಗಾರಿ ಬಿಟ್ಟರೆ ಬೇರೇನೂ ಕೇಳುವುದಿಲ್ಲ.
    ಕೆ.ಸಿ.ನಾರಾಯಣ ಗೌಡ, ಯುವ ಸಬಲೀಕರಣ ಮತ್ತು ಕ್ರೀಡಾ ಸಚಿವ

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts