More

    ಒತ್ತುವರಿ ಕೆರೆ ಜಮೀನು ಸ್ವಾಧೀನಪಡಿಸಿಕೊಂಡು ಅಂತರ್ಜಲ ಪುನಶ್ಚೇತ

    ಚಿಕ್ಕಮಗಳೂರು: ಒತ್ತುವರಿಯಾಗಿರುವ ಕೆರೆ ಜಮೀನು ಸ್ವಾಧೀನಪಡಿಸಿಕೊಂಡು ಹೂಳೆತ್ತಿ ಅಂತರ್ಜಲ ಪುನಶ್ಚೇತನಗೊಳಿಸುವ ಮೂಲಕ ರೈತರ ಕೃಷಿ ಜಮೀನಿಗೆ ಅನುಕೂಲ ಮಾಡಿಕೊಡಲಾಗುವುದು ಎಂದು ಜಿಲ್ಲಾ ಉಸ್ತುವಾರಿ ಸಚಿವ ಸಿ.ಟಿ.ರವಿ ಹೇಳಿದರು.

    ತಾಲೂಕಿನ ಬಿಳೇಕಲ್ಲಳ್ಳಿ ಗ್ರಾಪಂನ ಕರೆಸಿದ್ಧನಹಳ್ಳಿ ಸಮೀಪದ ಕೆರೆ ಹೂಳೆತ್ತುವ ಕಾರ್ಯಕ್ಕೆ ಶನಿವಾರ ಚಾಲನೆ ನೀಡಿ ಮಾತನಾಡಿದರು.

    ಬಯಲುಸೀಮೆ ಭಾಗದ ರೈತರ ಜಮೀನಿಗೆ ಅನುಕೂಲ ಮಾಡುವ ಹಾಗೂ ಅಂತರ್ಜಲ ಮಟ್ಟ ಹೆಚ್ಚಿಸುವ ಉದ್ದೇಶದಿಂದ ಹಿಂದಿನ ಸರ್ಕಾರಿ ಭೂದಾಖಲೆಗಳಲ್ಲಿ ಕೆರೆ-ಕಟ್ಟೆ ಎಂದು ನಮೂದಾಗಿರುವ ಪ್ರದೇಶಗಳನ್ನು ಗುರುತಿಸಿ ಒತ್ತುವರಿ ತೆರವುಗೊಳಿಸಿ ಪುನಶ್ಚೇತನಗೊಳಿಸಲಾಗುತ್ತಿದೆ ಎಂದರು.

    ಸಾರ್ವಜನಿಕರಿಗೆ ಅನುಕೂಲವಾಗುವಂತಹ ಯಾವುದೇ ಪ್ರದೇಶಗಳು ಒತ್ತುವರಿಯಾಗಿದ್ದಲ್ಲಿ ತೆರವಿಗೆ ಕ್ರಮ ಕೈಗೊಳ್ಳಲಾಗುವುದು. ಈ ಭಾಗದ ರೈತರ ಜಮೀನು ಭೂದಾಖಲೆಯಂತೆ ಕೆರೆ ಪ್ರದೇಶದಲ್ಲಿದ್ದು ಆ ಭಾಗವನ್ನು ಬಿಟ್ಟುಕೊಡುವಂತೆ ತಿಳಿಸಲಾಗಿದೆ. ಇಲ್ಲಿ ಯಾವುದೇ ರೈತರಿಗೆ ತೊಂದರೆ ನೀಡುವ ಉದ್ದೇಶವಿಲ್ಲ. ಆ ಜಮೀನಿನ ಬದಲಾಗಿ ಬೇರೆಡೆ ಜಾಗ ಒದಗಿಸಲಾಗುವುದು ಎಂದರು.

    ಉಪವಿಭಾಗಾಧಿಕಾರಿ ಡಾ. ಎಚ್.ಎಲ್.ನಾಗರಾಜ್ ಮಾತನಾಡಿ, ಬಯಲು ಸೀಮೆ ಪ್ರದೇಶ ಲಕ್ಯಾದಲ್ಲಿ ರೈತರ ಹಿತದೃಷ್ಟಿಯಿಂದ ಭೂ ದಾಖಲೆಗಳಲ್ಲಿ ನಮೂದಾಗಿರುವ ಕೆರೆ-ಕಟ್ಟೆ ಪ್ರದೇಶಗಳನ್ನು ಗುರ್ತಿಸಲಾಗಿದ್ದು, ಕೆರೆ ಜಮೀನು ಒತ್ತುವರಿ ತೆರವುಗೊಳಿಸಿ ಕೆರೆಗಳನ್ನು ಪುನಶ್ಚೇತನಗೊಳಿಸಲಾಗುತ್ತಿದೆ ಎಂದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts