17.8 C
Bengaluru
Wednesday, January 22, 2020

ಗ್ರಾಮೀಣ ಶುದ್ಧ ನೀರಿನ ಘಟಕದಲ್ಲಿ ಅವ್ಯವಹಾರ, ಶೀಘ್ರವೇ ನನ್ನ ಕೈಸೇರುವ ತನಿಖಾ ವರದಿ

Latest News

ಕರ್ನಾಟಕ ಕುಸ್ತಿ ಹಬ್ಬಫೆ. 15ರಿಂದ

ಧಾರವಾಡ: ಫೆ. 15ರಿಂದ 18ರವರೆಗೆ ನಗರದಲ್ಲಿ ಕರ್ನಾಟಕ ಕುಸ್ತಿ ಹಬ್ಬ ಆಯೋಜಿಸಲಾಗುವುದು. ಅಂತಾರಾಷ್ಟ್ರೀಯ ಕುಸ್ತಿಪಟುಗಳು ಸೇರಿ ಸುಮಾರು 2,000ಕ್ಕೂ ಹೆಚ್ಚು ಕುಸ್ತಿಪಟುಗಳು, ತರಬೇತಿದಾರರು...

ಊರೆಲ್ಲ ಕೊಳ್ಳೆ ಹೊಡೆದ ಮೇಲೆ…

ಲಕ್ಷ್ಮೇಶ್ವರ: ‘ಊರೆಲ್ಲ ಕೊಳ್ಳೆ ಹೊಡೆದ ಮೇಲೆ ದಿಡ್ಡಿ ಬಾಗಿಲು ಮುಚ್ಚಿದರು’ ಎಂಬಂತೆ ರೈತರೆಲ್ಲ ಮುಕ್ತ ಮಾರುಕಟ್ಟೆಯಲ್ಲಿ ಕಡಿಮೆ ಬೆಲೆಗೆ ಶೇಂಗಾ ಮಾರಾಟ ಮಾಡಿದ...

ಮುರುಘಾಮಠದ ಕಾರ್ಯ ನಾಡಿಗೆ ಮಾದರಿ

ಧಾರವಾಡ: ಜ್ಞಾನ, ದಾಸೋಹ ಸೇವೆಯಲ್ಲಿ ಮುರುಘಾಮಠದ ಮೃತ್ಯುಂಜಯ ಅಪ್ಪಗಳ ಹಾಗೂ ಮಹಾಂತಪ್ಪಗಳ ಕೊಡುಗೆ ಸ್ಮರಣೀಯ. ಅವರ ಆಶಯದಂತೆ ಶ್ರೀ ಮಲ್ಲಿಕಾರ್ಜುನ ಸ್ವಾಮೀಜಿ ಶ್ರೀಮಠವನ್ನು...

ಶರಣರಿಂದ ಸಾಮಾಜಿಕ ನ್ಯಾಯ

ಬ್ಯಾಡಗಿ: 12ನೇ ಶತಮಾನದಿಂದಲೂ ಶಿವಶರಣರು ಸಾಮಾಜಿಕ ಮೌಢ್ಯತೆ ಹಾಗೂ ಧೋರಣೆಗಳ ವಿರುದ್ಧ ಹೋರಾಟ ನಡೆಸಿದ ಪರಿಣಾಮ ಸರ್ವರಿಗೂ ಸಾಮಾಜಿಕ ನ್ಯಾಯ ಸಿಕ್ಕಿದೆ ಎಂದು...

ಗಾಳಿಪಟ ಉತ್ಸವಕ್ಕೆ ತೆರೆ

ಹುಬ್ಬಳ್ಳಿ: ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಪೋಷಿತ ಕ್ಷಮತಾ ಸೇವಾ ಸಂಸ್ಥೆ ಆಶ್ರಯದಲ್ಲಿ ನಗರದ ಕುಸುಗಲ್ಲ ರಸ್ತೆಯಲ್ಲಿ ಆಯೋಜಿಸಿದ್ದ ಎರಡು ದಿನಗಳ...

ಶಿವಮೊಗ್ಗ: ಹಿಂದಿನ ಸರ್ಕಾರಗಳ ಅವಧಿಯಲ್ಲಿ ಅನುಷ್ಠಾನವಾದ ಗ್ರಾಮೀಣ ಶುದ್ಧ ಕುಡಿಯುವ ನೀರಿನ ಘಟಕ ಯೋಜನೆಯಲ್ಲಿ ನಡೆದಿದೆ ಎನ್ನಲಾದ ಅವ್ಯವಹಾರ ಕುರಿತು ತನಿಖೆ ನಡೆಸಿ ವರದಿ ನೀಡುವಂತೆ ಜಿಪಂ ಸಿಇಒಗಳಿಗೆ ಸೂಚಿಸಿದ್ದೇನೆ ಎಂದು ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್​ರಾಜ್ ಸಚಿವ ಕೆ.ಎಸ್.ಈಶ್ವರಪ್ಪ ತಿಳಿಸಿದರು.

ಶಿವಮೊಗ್ಗ ಪ್ರೆಸ್​ಟ್ರಸ್ಟ್​ನಲ್ಲಿ ಶನಿವಾರ ಏರ್ಪಡಿಸಿದ್ದ ಮಾಧ್ಯಮ ಸಂವಾದದಲ್ಲಿ ಮಾತನಾಡಿದ ಅವರು, ಶೀಘ್ರವೇ ಇಡೀ ರಾಜ್ಯದ ವರದಿ ನನ್ನ ಕೈಸೇರಲಿದೆ. ಬಳಿಕ ಸೂಕ್ತ ಕ್ರಮ ಕೈಗೊಳ್ಳಲಾಗುವುದು. ಅದುವರೆಗೂ ಯಾವುದೇ ಶುದ್ಧ ಕುಡಿಯುವ ನೀರಿನ ಘಟಕಗಳ ಕಾಮಗಾರಿ ಕೈಗೊಳ್ಳುವುದಿಲ್ಲ ಎಂದರು.

ರಸ್ತೆ ರಿಪೇರಿಗೆ 1,500 ಕೋಟಿ ರೂ:

ಅತಿವೃಷ್ಟಿಯಿಂದ 104 ವಿಧಾನಸಭಾ ಕ್ಷೇತ್ರಗಳ ವ್ಯಾಪ್ತಿಯಲ್ಲಿ ಹಾಳಾಗಿರುವ ರಸ್ತೆಗಳ ರಿಪೇರಿಗೆ 1,500 ಕೋಟಿ ರೂ. ಮೊತ್ತದ ಕಾಮಗಾರಿಗೆ ಕಾರ್ಯಾದೇಶ ನೀಡಲಾಗಿದೆ. ಶೀಘ್ರ ಕಾಮಗಾರಿ ಆರಂಭವಾಗಲಿದೆ ಎಂದು ಸಚಿವ ಕೆ.ಎಸ್.ಈಶ್ವರಪ್ಪ ತಿಳಿಸಿದರು.

ಹಿಂದಿನ ಸರ್ಕಾರಗಳ ಅವಧಿಯಲ್ಲಿ ಪಕ್ಷ ನೋಡಿ ವಿಧಾನಸಭಾ ಕ್ಷೇತ್ರಗಳಿಗೆ ಅನುದಾನ ನೀಡುವ ಪರಂಪರೆಯಿತ್ತು. ಆದರೆ ನಮ್ಮ ಸರ್ಕಾರದಲ್ಲಿ ಯಾವ ಕ್ಷೇತ್ರದಲ್ಲಿ ಹೆಚ್ಚು ಹಾನಿಯಾಗಿದೆಯೋ ಅಲ್ಲಿಗೆ ಹೆಚ್ಚಿನ ಅನುದಾನ ನೀಡುತ್ತಿದ್ದೇವೆ. ಇನ್ನು ಮೂರು ತಿಂಗಳಲ್ಲಿ ರಸ್ತೆ ರಿಪೇರಿ ಪೂರ್ಣವಾಗಲಿದೆ ಎಂದರು.

ಗ್ರಾಪಂ ಮಟ್ಟದಲ್ಲಿ ತ್ಯಾಜ್ಯ ವಿಲೇವಾರಿ, ಸೋಲಾರ್ ದೀಪ ಅಳವಡಿಕೆಗೆ ಕ್ರಮ ಕೈಗೊಂಡಿದ್ದೇನೆ. ರಾಜ್ಯದ 6,071 ಗ್ರಾಪಂಗಳಿಗೆ ತಲಾ 20 ಲಕ್ಷ ರೂ. ಅನುದಾನ ನೀಡಲಾಗಿದೆ. ಇದರೊಂದಿಗೆ ಸ್ಥಳೀಯ ಅನುದಾನ ಬಳಸಿಕೊಂಡು ತ್ಯಾಜ್ಯ ವಿಲೇವಾರಿ ಮಾಡಲು ಸೂಚಿಸಲಾಗಿದೆ ಎಂದು ಹೇಳಿದರು.

ವಿಡಿಯೋ ನ್ಯೂಸ್

VIDEO| ಬೇಲಿಯೇ ಎದ್ದು ಹೊಲ ಮೇಯ್ದಂತೆ ಎಂಬ ಗಾದೆ ಮಾತಿಗೆ...

ಲಖನೌ: ಬೇಲಿಯೇ ಎದ್ದು ಹೊಲ ಮೇಯ್ದಂತೆ ಎಂಬ ಗಾದೆ ಮಾತಿಗೆ ಪೂರಕವಾದ ಘಟನೆ ಇದಾಗಿದೆ. ಉತ್ತರ ಪ್ರದೇಶದ ನೋಯ್ಡಾದಲ್ಲಿ ನಡೆದ ಘಟನೆ ಸಿಸಿಟಿವಿಯಲ್ಲಿ ಸೆರೆಯಾಗಿದೆ. ನೋಯ್ಡಾದಲ್ಲಿ ಅಂಗಡಿ ಹೊರಭಾಗದಲ್ಲಿ ಇಟ್ಟಿದ್ದ ಬಾಕ್ಸ್​ನಿಂದ...

VIDEO| ನಟಿಯಾಗಿರೋ ಆಲಿಯಾ ಇದೀಗ ಶೆಫ್​: ಬಾಲಿವುಡ್​ ಬ್ಯೂಟಿಯ ಅಡುಗೆ...

ಮುಂಬೈ: ಬಾಲಿವುಡ್​ ಬ್ಯೂಟಿ ಆಲಿಯಾ ಭಟ್ ನಟನೆ ಜತೆಗೆ ಹೊಸ ಸಾಹಸಕ್ಕೆ ಕೈಹಾಕಿದ್ದಾರೆ. ನಟಿಯಾಗಿರುವ ಆಲಿಯಾ ಇದೀಗ ಶೆಫ್ ಆಗಿದ್ದು, ಹೊಸ ಬಗೆಯ ಅಡುಗೆ ಪರಿಚಯಿಸಲು ಮುಂದಾಗಿದ್ದಾರೆ. ಯೂಟ್ಯೂಬ್​ನಲ್ಲಿ ಆಲಿಯಾ ಭಟ್...

VIDEO| ಅತಿವೇಗದ ಎಸೆತ, ಮಥೀಶಾ ಪಥಿರಣ ವಿಶ್ವದಾಖಲೆ!

ಬ್ಲೂಮ್​ಫಾಂಟೆನ್: ಶ್ರೀಲಂಕಾ ವಿರುದ್ಧ ಭಾನುವಾರ ನಡೆದ 19 ವಯೋಮಿತಿ ಏಕದಿನ ವಿಶ್ವಕಪ್ ಟೂರ್ನಿಯ ಮುಖಾಮುಖಿಯಲ್ಲಿ ಭಾರತ ತಂಡ 90 ರನ್​ಗಳಿಂದ ಗೆಲುವು ಸಾಧಿಸಿತು. ಆದರೆ, ಲಂಕಾ ಕಡೆಯಿಂದಲೂ ಸ್ಮರಣೀಯ ದಾಖಲೆಯೊಂದು...

VIDEO| ತಮಿಳಿನ ಕೌನ್​ ಬನೇಗಾ ಕರೋಡ್​ಪತಿ ಶೋನಲ್ಲಿ 1 ಕೋಟಿ...

ಚೆನ್ನೈ: ತಮಿಳು ಆವೃತ್ತಿಯ ಕೌನ್​ ಬನೇಗಾ ಕರೋಡ್​ಪತಿ(ಕೊಡೀಶ್ವರಿ) ರಿಯಾಲಿಟಿ ಶೋನಲ್ಲಿ ವಿಕಲಾಂಗ ಮಹಿಳೆಯೊಬ್ಬಳು ಬರೋಬ್ಬರಿ 1 ಕೋಟಿ ರೂ. ಬಹುಮಾನ ಮೊತ್ತವನ್ನು ಗೆದ್ದು ಎಲ್ಲರ ಗಮನ ಸೆಳೆದಿದ್ದಾಳೆ.ಮದುರೈ ನಿವಾಸಿಯಾಗಿರುವ ಕೌಶಲ್ಯ...

VIDEO| ಮಂಗಳೂರು ವಿಮಾನ ನಿಲ್ದಾಣ ಬಾಂಬ್​ ಪತ್ತೆ ಪ್ರಕರಣ: ಬಾಂಬ್​...

ಮಂಗಳೂರು: ಮಂಗಳೂರು ವಿಮಾನ ನಿಲ್ದಾಣದಲ್ಲಿ ಸಜೀವ ಬಾಂಬ್​ ಪತ್ತೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕೆಂಜಾರು ಮೈದಾನದಲ್ಲಿ ಬಾಂಬ್​ ನಿಷ್ಕ್ರಿಯೆ ದಳದಿಂದ ನಡೆದ ಬಾಂಬ್​ ಸ್ಫೋಟ ಪ್ರಕ್ರಿಯೆ ಯಶಸ್ವಿಯಾಗಿದೆ. ಇಂದು ಬೆಳಗ್ಗೆ ಮಂಗಳೂರು ವಿಮಾನ...

VIDEO| ಮಂಡ್ಯದಲ್ಲಿ ಮತ್ತೆ ಜೋಡೆತ್ತು ಸದ್ದು: ಚುನಾವಣೆ ಮುಗಿದ ನಂತರ...

ಮಂಡ್ಯ: ಲೋಕಸಭಾ ಚುನಾವಣೆಯಲ್ಲಿ ರಾಜಕೀಯವಾಗಿ ಸದ್ದು ಮಾಡಿದ್ದ ಜೋಡೆತ್ತು ಎಂದು ಕರೆಸಿಕೊಂಡಿದ್ದ ನಟರಾದ ದರ್ಶನ್​ ಮತ್ತು ಯಶ್​ ಅವರು ಮತ್ತೆ ಸುದ್ದಿಯಲ್ಲಿದ್ದಾರೆ. ಮಾನವೀಯತೆ ಮೆರೆದ ಅವರು, ಚೈತ್ರಾ ಗೋಶಾಲೆಗೆ ಬೆಳಕಾಗಿದ್ದಾರೆ. ಗೋಮಾತೆ ಸೇವೆಗೆ ರಾಕಿಂಗ್...