More

    ಜೂನ್ ಅಂತ್ಯಕ್ಕೆ ಪ್ರವಾಸೋದ್ಯಮ ನೀತಿ ರಚನೆ

    ಚಿಕ್ಕಮಗಳೂರು: ಕೇಂದ್ರ ಹಾಗೂ ರಾಜ್ಯ ಸರ್ಕಾರದ ಕಾಯ್ದೆ ವ್ಯಾಪ್ತಿಯಲ್ಲಿ ಪ್ರಾದೇಶಿಕ ವೈವಿಧ್ಯತೆಗೆ ಪೂರಕವಾಗಿ ಜೂನ್ ಅಂತ್ಯದೊಳಗೆ ಪ್ರವಾಸೋದ್ಯಮ ನೀತಿ ರೂಪಿಸಲಾಗುವುದು ಎಂದು ಪ್ರವಾಸೋದ್ಯಮ ಸಚಿವ ಸಿ.ಟಿ.ರವಿ ತಿಳಿಸಿದರು.

    ಜಿಪಂ ಸಭಾಂಗಣದಲ್ಲಿ ಜಿಲ್ಲಾ ಪ್ರವಾಸೋದ್ಯಮ ನೀತಿ ರೂಪಿಸಲು ಮಂಗಳವಾರ ಆಯೋಜಿಸಿದ್ದ ಸಭೆಯಲ್ಲಿ ಮಾತನಾಡಿದ ಅವರು, ಪ್ರವಾಸಿಗರು ಜಿಲ್ಲೆಗೆ ಬರುವುದು ಇಲ್ಲಿನ ಪ್ರಕೃತಿ ಸೊಬಗನ್ನು ಆಸ್ವಾದಿಸಲು. ಈ ಹಿನ್ನೆಲೆಯಲ್ಲಿ ಅವುಗಳ ರಕ್ಷಣೆಗೆ ಹೆಚ್ಚಿನ ಒತ್ತು ನೀಡಬೇಕು. ಪ್ರಕೃತಿ ಸೊಬಗನ್ನು ಉಳಿಸಿಕೊಂಡು ಪ್ರವಾಸಿಗರನ್ನು ಆಕರ್ಷಿಸಬೇಕು. ಪರಿಸರ ಸೂಕ್ಷ್ಮ ಪ್ರದೇಶದ ಸಂರಕ್ಷಣೆ ಹಾಗೂ ಜಲಮೂಲಗಳ ರಕ್ಷಣೆಗೆ ಆದ್ಯತೆ ನೀಡುವ ನೀತಿ ರೂಪಿಸಬೇಕಿದೆ ಎಂದು ಅಭಿಪ್ರಾಯಪಟ್ಟರು.

    ಕರೊನಾ ಭೀತಿ ಹಿನ್ನೆಲೆಯಲ್ಲಿ ಪ್ರವಾಸೋದ್ಯಮ ಚುರುಕು ಪಡೆಯಲು ಸಾಕಷ್ಟು ಸಮಯ ಬೇಕು. ನಮ್ಮ ಸುತ್ತಮುತ್ತಲಿನ ತಾಣಗಳನ್ನು ನಾವು ವೀಕ್ಷಿಸಿ ಹೊರಗಿನವರಿಗೆ ನೋಡಬನ್ನಿ ನಮ್ಮೂರ ಎಂದು ಆಹ್ವಾನಿಸಬೇಕು. ನಂತರ ಅಂತಾರಾಷ್ಟ್ರೀಯ ಪ್ರವಾಸಿಗರಿಗೆ ಪ್ರವಾಸಿ ತಾಣಗಳು ಮುಕ್ತಗೊಳ್ಳಬೇಕು ಎಂದರು.

    ಈಗಾಗಲೇ ರಚಿಸಲಾಗಿರುವ ಕರಡು ನೀತಿಯಲ್ಲಿ ಸುಸ್ಥಿರ ಪ್ರವಾಸೋದ್ಯಮಕ್ಕೆ ಆದ್ಯತೆ ನೀಡಲಾಗಿದೆ. ಇಲ್ಲಿನ ನಿಸರ್ಗ ಸಂಪತ್ತು ಉಳಿಯುವ ಜತೆಗೆ ಪ್ರವಾಸೋದ್ಯಮವೂ ಬೆಳೆಯಬೇಕು. ನಮ್ಮ ನಿಸರ್ಗ ಸಂಪತ್ತು ಉಳಿಸಿಕೊಳ್ಳದಿದ್ದರೆ ಆದಾಯವೂ ಬಾರದು. ಉದ್ಯೋಗ ಸಹ ಸೃಷ್ಟಿಯಾಗದು ಎಂದು ಅಭಿಪ್ರಾಯಪಟ್ಟರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts