More

    ಪುಟ್ಟರಂಗಶೆಟ್ಟಿಗೆ ಸಚಿವ ಸ್ಥಾನ ನೀಡದಿದ್ದರೆ ತೀವ್ರ ಸ್ವರೂಪದ ಹೋರಾಟ

    ಚಿತ್ರದುರ್ಗ: ಚಾಮರಾಜನಗರ ವಿಧಾನಸಭಾ ಕ್ಷೇತ್ರದ ಶಾಸಕ ಪುಟ್ಟರಂಗಶೆಟ್ಟಿ ಅವರಿಗೆ ಸಚಿವ ಸ್ಥಾನ ನೀಡದ ಕಾರಣಕ್ಕೆ ಬೇಸರ ವ್ಯಕ್ತಪಡಿಸಿರುವ ಉಪ್ಪಾರ ಸಮುದಾಯದವರು ಕಾಂಗ್ರೆಸ್ ಜಿಲ್ಲಾ ಘಟಕದ ಕಚೇರಿ ಮುಂದೆ ಸೋಮವಾರ ಪ್ರತಿಭಟನೆ ನಡೆಸಿದರು.

    ನೀಲಕಂಠೇಶ್ವರ ಸ್ವಾಮಿ ದೇಗುಲದಿಂದ ಜಿಲ್ಲಾಧಿಕಾರಿ ಕಚೇರಿವರೆಗೂ ಮೆರವಣಿಗೆ ನಡೆಸಿದರು. ಸಮುದಾಯವನ್ನು ಕಡೆಗಣಿಸಲಾಗಿದೆ ಎಂದು ಕಾಂಗ್ರೆಸ್ ವಿರುದ್ಧ ಧಿಕ್ಕಾರ ಕೂಗಿ ಆಕ್ರೋಶ ಹೊರಹಾಕಿದರು.

    ಸಚಿವ ಸ್ಥಾನ ನೀಡಲೇಬೇಕೆಂದು ಸರ್ಕಾರಕ್ಕೆ ಒತ್ತಾಯಿಸಿ ಡಿಸಿಸಿ ಮೂಲಕ ಮನವಿ ರವಾನಿಸಿದರು.

    ರಾಜ್ಯದಲ್ಲಿ ಉಪ್ಪಾರ ಸಮುದಾಯದ ಏಕೈಕ ಶಾಸಕರಾಗಿರುವ ಪುಟ್ಟರಂಗಶೆಟ್ಟಿ ಸತತ 4ಬಾರಿ ಎಂಎಲ್ಎ ಆಗಿ ಹಿರಿತನ ಹೊಂದಿದ್ದಾರೆ.

    ಈ ಬಾರಿಯ ಚುನಾವಣೆಯಲ್ಲಿ ಬಿಜೆಪಿ ನಾಯಕ ವಿ.ಸೋಮಣ್ಣ ಅವರಿಗೆ ಸೋಲುಣಿಸಿದ್ದಾರೆ. ಆದ್ದರಿಂದ ಸಚಿವ ಸ್ಥಾನ ನೀಡಬೇಕು ಎಂದು ಆಗ್ರಹಿಸಿದರು.

    ರಾಜ್ಯದ ನೂತನ ಸಚಿವ ಸಂಪುಟದಲ್ಲಿ ಇವರಿಗೆ ಮಂತ್ರಿಗಿರಿ ಗ್ಯಾರಂಟಿಯಾಗಿತ್ತು. ಪಕ್ಷದ ವರಿಷ್ಠರಿಂದಲೂ ಹಸಿರು ನಿಶಾನೆ ಸಿಕ್ಕಿತ್ತು. ಆದರೂ ಕೊನೆ ಗಳಿಗೆಯಲ್ಲಿ ಕೈತಪ್ಪಿದೆ.

    ಯಾವುದೇ ಖಾತೆ ನೀಡಿದರೂ ಸಮರ್ಥವಾಗಿ ನಿಭಾಯಿಸುವ ಶಕ್ತಿ ಹೊಂದಿದ್ದಾರೆ. ಒಂದು ವೇಳೆ ಸಚಿವ ಸ್ಥಾನ ನೀಡದಿದ್ದರೆ ಪ್ರತಿಭಟನಾ ಸ್ವರೂಪ ತೀವ್ರಗೊಳ್ಳಲಿದೆ ಎಂದು ಎಚ್ಚರಿಸಿದರು.

    ಸಮುದಾಯದ ಜಿಲ್ಲಾಧ್ಯಕ್ಷ ವೀರೇಶ್, ಗೌರವಾಧ್ಯಕ್ಷ ಎಸ್.ನಾಗರಾಜ, ಪ್ರಧಾನ ಕಾರ್ಯದರ್ಶಿ ಮಹೇಶ್, ಖಂಜಾಚಿ ಅಜ್ಜಪ್ಪ, ತಾಲೂಕು ಅಧ್ಯಕ್ಷರಾದ ಸಿದ್ದಪ್ಪ, ರವಿ ಇತರರಿದ್ದರು.


    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts