More

    ಈ ನಾಲ್ಕು ಜಿಲ್ಲೆಗಳ ಶಾಸಕರಿಗೆ ಮಂತ್ರಿಗಿರಿ ಮರೀಚಿಕೆ

    ವಾದಿರಾಜ ವ್ಯಾಸಮುದ್ರ ಕಲಬುರಗಿ
    ಮಂತ್ರಿಗಿರಿಯಿಂದ ಮತ್ತೇ ಕಲ್ಯಾಣ ಕರ್ನಾಟಕದ ಶಾಸಕರನ್ನು ದೂರವಿರಿಸಲಾಗಿದೆ. ಕಲ್ಯಾಣ ಕರ್ನಾಟಕದಲ್ಲಿ ಬಿಜೆಪಿಗೆ ವರಿಷ್ಠರು ನೀಡಿದ ಸಂಕ್ರಾಂತಿ ಕೊಡುಗೆ ಇದಾಗಿದೆ. ಯಡಿಯೂರಪ್ಪನವರ ನೇತೃತ್ವದ ಸಚಿವ ಸಂಪುಟ ಮತ್ತೇ ವಿಸ್ತರಣೆಯಾಗಿದ್ದು, ಕಲ್ಯಾಣಕರ್ನಾಟಕದ ಹೆಬ್ಬಾಗಿಲು ಕಲಬುರಗಿ ಸೇರಿ ನಾಲ್ಕು ಜಿಲ್ಲೆಗಳನ್ನು ಕಡೆಗಣಿಸಲಾಗಿದೆ.

    ಜಿಲ್ಲೆ ಇತಿಹಾಸದಲ್ಲೇ ಮೊದಲ ಬಾರಿ ಕಲಬುರಗಿ ಸಂಪುಟದಲ್ಲಿ ಸ್ಥಾನ ಪಡೆಯುವಲ್ಲಿ ವಂಚಿತವಾಗಿದೆ. ಬಿಜೆಪಿ ವರಿಷ್ಠರ ಈ ನಿರ್ಧಾರ ಜನರ ಆಕ್ರೋಶಕ್ಕೆ ಕಾರಣವಾಗಿದೆ. ಈ ಸಲವಾದರೂ ಸಂಪುಟದಲ್ಲಿ ಅವಕಾಶ ಸಿಗಬಹುದೆಂಬ ಕಲಬುರಗಿ, ಯಾದಗಿರಿ, ರಾಯಚೂರು ಮತ್ತು ಕೊಪ್ಪಳ ಜಿಲ್ಲೆಗಳ ನಿರೀಕ್ಷೆ ಹುಸಿಯಾಗಿದೆ. ಕೊಪ್ಪಳ ಜಿಲ್ಲೆಯ ಹಾಲಪ್ಪ ಆಚಾರ್ ಅವರ ಹೆಸರು ಕೊನೆವರೆಗೂ ಬಂದು ನಂತರ ಡಿಲಿಟ್ ಆಯಿತು.

    ಮುಖ್ಯಮಂತ್ರಿ ಯಡಿಯೂರಪ್ಪ ಅವರೇ ಸಿದ್ದಪಡಿಸಿ ದೆಹಲಿಗೆ ತೆಗೆದುಕೊಂಡು ಹೋದ ಪಟ್ಟಿಯಲ್ಲಿ ಈ ನಾಲ್ಕು ಜಿಲ್ಲೆಗಳ ಒಬ್ಬ ಶಾಸಕರ ಹೆಸರೂ ಸೇರ್ಪಡೆಯಾಗಿರಲಿಲ್ಲ. ಹೀಗಾಗಿ ವರಿಷ್ಠರು ಹೇಗೆ ತಾನೆ ಈ ಜಿಲ್ಲೆಗಳನ್ನು ಪರಿಗಣಿಸುತ್ತಾರೆ.
    ಕಳೆದ ಲೋಕಸಭಾ ಚುನಾವಣೆಯಲ್ಲಿ ಬೀದರ್, ಕಲಬುರಗಿ, ರಾಯಚೂರು, ಕೊಪ್ಪಳ ಮತ್ತು ಬಳ್ಳಾರಿ ಹೀಗೆ ಎಲ್ಲ ಐದು ಕ್ಷೇತ್ರಗಳಲ್ಲಿ ಮತದಾರ ಬಿಜೆಪಿ ಅಭ್ಯಥರ್ಿಗಳನ್ನು ಗೆಲ್ಲಿಸಿದ್ದ. ಖಗರ್ೆಯವರಂಥ ಹಿರಿಯ ನಾಯಕರನ್ನು ಸೋಲಿಸಿದ. ಅದಕ್ಕೆ ಪ್ರತಿಫಲವಾಗಿ ಈ ಜಿಲ್ಲೆಗಳನ್ನು ನಿರ್ಲಕ್ಷಿಸುವ ಮೂಲಕ ನಿಮಗೆ ಮಂತ್ರಿಗಳಾಗುವ ಯೋಗ್ಯತೆ ಇಲ್ಲ ಎನ್ನುವುದನ್ನು ಬಿಜೆಪಿ ವರಿಷ್ಠರು ಮತ್ತು ಮುಖ್ಯಮಂತ್ರಿ ತೋರಿಸಿಕೊಟ್ಟಿದ್ದಾರೆ.

    ವಲಸಿಗರಿಂದ ಅಧಿಕಾರಕ್ಕೆ ಬಂದ ಯಡಿಯೂರಪ್ಪ ಬುಧವಾರ ವಿಸ್ತರಿಸಿದ ಸಂಪುಟದಲ್ಲಿ ಮೂಲ ಬಿಜೆಪಿಗರಾದ ಸಿ.ಪಿ. ಯೋಗೇಶ್ವರ, ಅರವಿಂದ ಲಿಂಬಾವಳಿ, ಮುರುಗೇಶ ನಿರಾಣಿ, ಉಮೇಶ ಕತ್ತಿ, ಅಂಗಾರಾ ಅವರನ್ನು ಸಂಪುಟಕ್ಕೆ ಸೇರಿಸಿಕೊಂಡಿದ್ದಾರೆ. ವಲಸಿಗರಾದ ಎಂ.ಟಿ.ಬಿ. ನಾಗರಾಜ್ ಮತ್ತು ಆರ್. ಶಂಕರ್ ಅವರಿಗೂ ಮಂತ್ರಿ ಸ್ಥಾನ ಲಭ್ಯವಾಗಿದೆ.

    ಇವರೆಲ್ಲರಿಗೂ ಸಂಪುಟದಲ್ಲಿ ಸ್ಥಾನ ಕೊಡುವ ಭರದಲ್ಲಿ ಕಲ್ಯಾಣ ಕರ್ನಾಟಕದ ಜಿಲ್ಲೆಗಳು ಯಡಿಯೂರಪ್ಪನವರಿಗೆ ಕಾಣಲೇ ಇಲ್ಲ. ಬಿಜೆಪಿಗೆ ಫುಲ್ ಸಾಥ್ ನೀಡುತ್ತಿರುವ ಕಲ್ಯಾಣ ಕರ್ನಾಟಕದ ಭಾಗದ ಶಾಸಕರಿಗೆ ಮಂತ್ರಿಯಾಗುವ ಯೋಗ್ಯತೆ ಇಲ್ಲವೇ? ಕಲಬುರಗಿಯಂಥ ವಿಭಾಗೀಯ ಕೇಂದ್ರಕ್ಕೂ ಸಂಪುಟದಲ್ಲಿ ಅವಕಾಶ ಕಲ್ಪಿಸದಿರುವುದು ವಿಚಿತ್ರವೆನಿಸಿದೆ. ಬರುವ ದಿನಗಳಲ್ಲಿ ಪಕ್ಷದ ಮೇಲೆ ಇದು ಪ್ರತಿಕೂಲ ಪರಿಣಾಮ ಬೀರಿದರೂ ಅಚ್ಚರಿಪಡುವಂತಿಲ್ಲ.

    ಕಲಬುರಗಿ ದಕ್ಷಿಣ ಕ್ಷೇತ್ರದ ಶಾಸಕ ದತ್ತಾತ್ರೇಯ ಪಾಟೀಲ್ ಅವರಿಗೆ ಕಲ್ಯಾಣ ಕರ್ನಾಟಕ ಪ್ರಾದೇಶಿಕ ಅಭಿವೃದ್ಧಿ ಮಂಡಳಿ ಅಧ್ಯಕ್ಷ ಸ್ಥಾನ, ಸೇಡಂ ಶಾಸಕ ರಾಜಕುಮಾರ ಪಾಟೀಲ್ ತೇಲ್ಕೂರ್ ಅವರಿಗೆ ಈಶಾನ್ಯ ಕರ್ನಾಟಕ ಸಾರಿಗೆ ಸಂಸ್ಥೆ ಅಧ್ಯಕ್ಷ ಸ್ಥಾನ ಮತ್ತು ಯಾದಗಿರಿ ಜಿಲ್ಲೆಯ ಸುರಪುರ ಶಾಸಕ ನರಸಿಂಹ ನಾಯಕ್ ಅವರಿಗೆ ನಗರ ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ ಅಧ್ಯಕ್ಷ ಸ್ಥಾನ ನೀಡಿ ಬಾಯಿ ಮುಚ್ಚಿಸಲಾಗಿದೆ.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts