ಚಿಂಚೋಳಿಗೆ ಆಗಮಿಸಿದ ಸಚಿವ ಪ್ರಿಯಾಂಕ್ ಖರ್ಗೆ : ಸರ್ಕಾರಿ ಯೋಜನೆಗಳ ಮಾಹಿತಿ ನೀಡುವ ಮಳಿಗೆಗಳ ಉದ್ಘಾಟನೆ

IMG-20230925-WA0008
Published on

ವಿಜಯವಾಣಿ ಸುದ್ದಿಜಾಲ ಚಿಂಚೋಳಿ

ಸಾರ್ವಜನಿಕರ ಕುಂದುಕೊರತೆ ಆಲಿಸುವ ಚೊಚ್ಚಲ ಜನತಾ ದರ್ಶನ ಕಾರ್ಯಕ್ರಮದಲ್ಲಿ ಭಾಗವಹಿಸಲು ಜಿಲ್ಲೆಯ ಗಡಿ ತಾಲೂಕು ಚಿಂಚೋಳಿಗೆ ಸೋಮವಾರ ಹೈದರಾಬಾದಿನಿಂದ ನೇರವಾಗಿ ಆಗಮಿಸಿದ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್, ಐ.ಟಿ-ಬಿ.ಟಿ ಹಾಗೂ ಕಲಬುರಗಿ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ್ ಖರ್ಗೆ ಅವರು ವಿವಿಧ ಇಲಾಖೆಗಳಿಂದ ಸರ್ಕಾರಿ ಯೋಜನೆಗಳ ಕುರಿತು ಅರಿವು ಮೂಡಿಸಲು ತೆರೆಯಲಾದ ಮಳಿಗೆಗಳನ್ನು ಉದ್ಘಾಟಿಸಿದರು.

ಸಾರ್ವಜನಿಕರಿಗೆ ಸರ್ಕಾರಿ ಯೋಜನೆಗಳ ಬಗ್ಗೆ ಅರಿವು ಮೂಡಿಸಲು ಆಹಾರ, ಕೃಷಿ‌, ಮಹಿಳಾ ಮತ್ತು ಮಕ್ಕಳ ಕಲ್ಯಾಣ, ಗ್ರಾಮೀಣಾಭಿವೃದ್ದಿ ಮತ್ತು ಪಂಚಾಯತ್ ರಾಜ್, ರೇಷ್ಮೆ , ತೋಟಗಾರಿಕೆ, ಪಶುಸಂಗೋಪನೆ, ಅರಣ್ಯ, ಚಿಂಚೋಳಿ ಪುರಸಭೆ, ಕಾರ್ಮಿಕ, ಪೊಲೀಸ್, ಕಂದಾಯ, ವಿಕಲಚೇತನ ಮತ್ತು ಹಿರಿಯ ನಾಗರಿಕರ ಕಲ್ಯಾಣ ಇಲಾಖೆ, ಆರೋಗ್ಯ ಇಲಾಖೆ ಹೀಗೆ ಪ್ರಮುಖ ಇಲಾಖೆಯ ಮಳಿಗೆ ಹಾಕಲಾಗಿದೆ.

ಪಡಿತರ ಚೀಟಿ ತಿದ್ದುಪಡಿ, ಆಧಾರ್, ಕೆ.ವೈ.ಸಿ., ವೋಟರ್ ಐ.ಡಿ ಸೇರಿ ಇನ್ನಿತರ ಯೋಜನೆಗಳ ತಾಂತ್ರಿಕ‌ ಸಮಸ್ಯೆ ಬಗೆಹರಿಸಲು ಸಿಬ್ಬಂದಿಗಳು ಸ್ಥಳದಲ್ಲಿ ಇದ್ದು ಸಾರ್ವಜನಿಕರ‌ ಸಮಸ್ಯೆಗೆ ಸ್ಪಂದಿಸಿದರು. ಕುಂದುಕೊರತೆ ಅರ್ಜಿ ಸ್ವೀಕಾರಕ್ಕೆ 10-15 ಕೌಂಟರ್ ತೆರೆಯಲಾಗಿದೆ. ಅರ್ಜಿ ಸ್ವೀಕಾರ ಕೌಂಟರ್ ಗಳಿಗೆ ಸಚಿವರು ತೆರಳಿ‌ ವೀಕ್ಷಿಸಿದರು. ಇದಕ್ಕೂ ಮುನ್ನ ಸಚಿವರು, ಕ್ರೀಡಾಂಗಣ ಅವರಣದಲ್ಲಿ ಸಸಿ‌ ನೆಟ್ಟು ನೀರುಣಿಸಿದರು.

ಚಿಂಚೋಳಿ ಶಾಸಕ ಡಾ.ಅವಿನಾಶ ಜಾಧವ, ಎಂ.ಎಲ್.ಸಿ. ತಿಪ್ಪಣಪ್ಪ ಕಮಕನೂರ, ಕರ್ನಾಟಕ ವಿದ್ಯುತ್ ಪ್ರಸರಣ ನಿಗಮದ ವ್ಯವಸ್ಥಾಪಕ ನಿರ್ದೇಶಕ ಮತ್ತು ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಪಂಕಜ್ ಕುಮಾರ ಪಾಂಡೆ, ಡಿ.ಸಿ. ಬಿ.ಫೌಜಿಯಾ ತರನ್ನುಮ್, ಜಿಲ್ಲಾ ಪಂಚಾಯತ್ ಸಿ.ಇ.ಓಈ ಭಂವರ್ ಸಿಂಗ್ ಮೀನಾ, ಎಸ್.ಪಿ.ಅಡ್ಡೂರು ಶ್ರೀನಿವಾಸಲು,‌ ಡಿ.ಎಫ್.ಓ. ಸುಮಿತ್ ಕುಮಾರ್, ಕೆ.ಕೆ.ಆರ್.ಟಿ.ಸಿ. ಎಂ.ಡಿ. ಎಂ.ರಾಚಪ್ಪ, ಅಪರ ಜಿಲ್ಲಾಧಿಕಾರಿ ರಾಯಪ್ಪ ಹುಣಸಗಿ, ಸಹಾಯಕ ಅಯುಕ್ತ‌ ಆಶಪ್ಪ ಪೂಜಾರಿ, ಚಿಂಚೋಳಿ ತಹಶೀಲ್ದಾರ ಸುಬ್ಬಣ್ಣ ಜಮಖಂಡಿ, ತಾಲೂಕ್ ಪಂಚಾಯತ್ ಇ.ಓ. ಶಂಕರ ರಾಠೋಡ ಸೇರಿದಂತೆ ಇತರೆ ಜಿಲ್ಲಾ ಮತ್ತು ತಾಲೂಕು ಮಟ್ಟದ ಅಧಿಕಾರಿಗಳು ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net