ಸಚಿವ ಪ್ರಿಯಾಂಕ್ ಖರ್ಗೆ ಮನೆ ಮುತ್ತಿಗೆ ಯತ್ನ: ಆರ್ ಅಶೋಕ, ಛಲವಾದಿ, ಸಿ.ಟಿ ರವಿ ಬಿ.ಜಿ.ಪಾಟೀಲ್ ಸೇರಿ ಶಾಸಕರು,ಚಂದು ಪಾಟೀಲ್ ಸೇರಿ BJP ನೂರಾರು ಮುಖಂಡರ ಬಂಧನ

ಕಲಬುರಗಿ: ಗುತ್ತಿಗೆದಾರ ಸಚಿನ್ ಪಾಂಚಾಳ ಆತ್ಮಹತ್ಯೆ ಸಿಬಿಐಗೆ ವಹಿಸುವಂತೆ, ಸಚಿವ ಪ್ರಿಯಾಂಕ  ಖರ್ಗೆ ರಾಜೀನಾಮೆಗೆ ಆಗ್ರಹಿಸಿ ಬಿಜೆಪಿ ಮುಖಂಡರು ಸಚಿವರ ಮನೆಗೆ ಮುತ್ತಿಗೆ ಹಾಕಲು ಮುಂದಾದಾಗ ಪೊಲೀಸರು ನೂರಕ್ಕೂ ಹೆಚ್ಚು  ಬಿಜೆಪಿ ಮುಖಂಡರನ್ನು ಪೊಲೀಸರು ವಶಕ್ಕೆ ಪಡೆದರು.
ನಗರದ ಜಗತ್ ವೃತ್ತದಲ್ಲಿ ಬೃಹತ್ ಪ್ರತಿಭಟನಾ ಸಭೆ ನಡೆಸಿ, ಅಲ್ಲಿಂದ ಪಾದಯಾತ್ರೆ ಮೂಲಕ ಸಚಿವರ ಮನೆಗೆ ಮುತ್ತಿಗೆ ಹಾಕಲು ಬರುತ್ತಿರುವಾಗ ಜಿಲ್ಲಾಧಿಕಾರಿ ಕಚೇರಿ ಎದುರುಗಡೆಯೇ ಮುಖಂಡರನ್ನು ತಡೆದು ವಶಕ್ಕೆ ಪಡೆದು ಬಸ್ ನ ಮೂಲಕ ಪೊಲೀಸ್ ಮೈದಾನಕ್ಕೆ ಕರೆದುಕೊಂಡು ಹೋಗಲಾಯಿತು.
ವಿಧಾನ ಸಭೆಯ ವಿರೋಧ ಪಕ್ಷದ ನಾಯಕ ಆರ್. ಅಶೋಕ, ವಿಧಾನ ಪರಿಷತ್ ನ ವಿರೋಧ ಪಕ್ಷದ ನಾಯಕ ಛಲವಾದಿ ನಾರಾಯಣ ಸ್ವಾಮಿ, ಶಾಸಕರುಗಳಾದ ಸಿ.ಟಿ. ರವಿ, ಎನ್ ರವಿಕುಮಾರ, ಬಸವರಾಜ ಮತ್ತಿಮಡು, ಡಾ. ಅವಿನಾಶ ಜಾಧವ್, ಬಿ.ಜಿ. ಪಾಟೀಲ್, ಶಶೀಲ್ ನಮೋಶಿ, ಸುನೀಲ್ ವಲ್ಲಾಪುರೆ, ಶರಣು ಸಲಗರ, ಡಾ.ಶೈಲೇಂದ್ರ ಬೆಲ್ದಾಳೆ,  ಮಾಜಿ ಸಂಸದ ಡಾ. ಉಮೇಶ ಜಾಧವ್,  ಮಾಜಿ ಶಾಸಕರಾದ ದತ್ತಾತ್ರೇಯ ಪಾಟೀಲ್, ರಾಜಕುಮಾರ ಪಾಟೀಲ್ ತೇಲ್ಕೂರ, ಮುಖಂಡರಾದ ನಿತೀನ ವಿ. ಗುತ್ತೇದಾರ, ಶಿವರಾಜ ಪಾಟೀಲ್ ರದ್ದೇವಾಡಗಿ, ಚಂದು ಪಾಟೀಲ್ ಸೇರಿದಂತೆ ಮುಂತಾದವರನ್ನು ಪೊಲೀಸರು ವಶಕ್ಕೆ ಪಡೆದುಕೊಂಡರು.
ಪ್ರತಿಭಟನೆ ಹಾಗೂ ಸಚಿವರ ಮನೆ ಮುತ್ತಿಗೆ ಹಿನ್ನೆಲೆಯಲ್ಲಿ ವ್ಯಾಪಕ ಪೊಲೀಸ್ ಬಂದೋಬಸ್ತ್ ಕಲ್ಪಿಸಲಾಗಿತ್ತು. ನಾಲ್ವರು ಐಪಿಎಸ್, 13 ಡಿವೈಎಸ್ಪಿ, 23 ಇನ್ಸ್ಪೆಕ್ಟರ್ ಸೇರಿ ಕೆಎಸ್ ಆರ್ಪಿ, ಡಿಎಆರ್ ತುಕಡಿ ಸೇರಿ 12000 ಕ್ಕೂ ಹೆಚ್ಚು ಪೊಲೀಸ್ ಸಿಬ್ಬಂದಿಯನ್ನು ನಿಯೋಜಿಸಲಾಗಿತ್ತು. ಅತ್ತ ಸಚಿವರ ಮನೆ ಮುಂದೆ ಟೀ, ಎಳೆನೀರು ವ್ಯವಸ್ಥೆ ಮಾಡಲಾಗಿತ್ತು.
Share This Article

ಬಿರು ಬೇಸಿಗೆಯಲ್ಲಿ ನೆಲ್ಲಿಕಾಯಿ ಸೇವಿಸಿ, ಈ ಅದ್ಭುತ ಪ್ರಯೋಜನ ಪಡೆಯಿರಿ; ಇಲ್ಲಿದೆ ಉಪಯುಕ್ತ ಮಾಹಿತಿ | Amla

Amla Benefits: ಸಾಮಾನ್ಯವಾಗಿ ಭಾರತೀಯ ನೆಲ್ಲಿಕಾಯಿಯನ್ನು ಆಂಗ್ಲ ಭಾಷೆಯಲ್ಲಿ ಆಮ್ಲಾ/ ಗೂಸ್​ಬೆರಿ ಎಂದು ಕರೆಯಲಾಗುತ್ತದೆ. ಇದು…

ಮನೆಯಲ್ಲಿ ಈ 4 ವಸ್ತುಗಳಿದ್ದರೆ ಲಕ್ಷ್ಮಿ ಒಲಿಯುವುದಿಲ್ಲ! ಇದನ್ನು ಗಮನಿಸದೆ ಹೋದ್ರೆ ಕೈಯಲ್ಲಿ 1 ಪೈಸೆಯೂ ಉಳಿಯಲ್ಲ | Vastu Tips

Vastu Tips: ಇಂದು ಯಾರಿಗೆ ತಾನೇ ಧನಲಕ್ಷ್ಮಿ ಬೇಡ? ವಿದ್ಯೆ ಇಲ್ಲದೇ ಹೋದ್ರೂ ಪರವಾಗಿಲ್ಲ ಹಣವೇ…

ರಾತ್ರಿ 11 ಗಂಟೆ ಮೇಲೆ ನಿದ್ದೆ ಮಾಡುತ್ತಿದ್ದೀರಾ.. ಕಾದಿದೆ ನಿಮಗೆ ಅಪಾಯ; ತಜ್ಞರ ಕೊಟ್ಟ ಏಚ್ಚರಿಕೆ ಏನು ಗೊತ್ತೆ! | Sleep

Sleep:ಇಂದಿನ ಕಾಲದ ಜನರ ಜೀವನ ಶೈಲಿಯಲ್ಲಿ ಹಲವು ಬದಲಾವಣೆಯಾಗಿವೆ. ಈ ಬದಲಾವಣೆಯಲ್ಲಿ ಒಂದು ರಾತ್ರಿ ಬೇಗ…