More

    ಉದ್ಯೋಗ ಖಾತ್ರಿ ಕಾಮಗಾರಿ:ಸಾಮಾಜಿಕ ಪರಿಶೋಧನೆಗೆ ಸೂಚನೆ

    ಬೆಂಗಳೂರು: ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆಯ ಸಾಮಾಜಿಕ ಪರಿಶೋಧನೆಗೆ ಗ್ರಾಮೀಣಾಭಿವೃದ್ಧಿ ಸಚಿವ ಪ್ರಿಯಾಂಕ್ ಖರ್ಗೆ ಸೂಚಿಸಿದ್ದಾರೆ.

    ಯೋಜನೆಯ ಅನುಷ್ಠಾನದಲ್ಲಿ ಪಾರದರ್ಶಕತೆ, ಉತ್ತರದಾಯಿತ್ವ ತರುವ ಹಿನ್ನೆಲೆಯಲ್ಲಿ ಸಾಮಾಜಿಕ ಪರಿಶೋಧನೆ ಅಸವಾಗಿದೆ. ಈ ಹಿನ್ನೆಲೆಯಲ್ಲಿ ಕಟ್ಟುನಿಟ್ಟಾಗಿ ಪರಿಶೋಧನೆ ನಡೆಸುವಂತೆ ತಿಳಿಸಿದ್ದಾರೆ. ಉದ್ಯೋಗ ಖಾತ್ರಿ ಯೋಜನೆಯಡಿ ಕೈಗೊಂಡ ಕಾಮಗಾರಿಗಳ ಗುಣಮಟ್ಟ ಪರಿಶೋಧನೆಯನ್ನು ಜಿಲ್ಲಾ ಪಂಚಾಯಿತಿ ಸಿಇಒಗಳು ಕೈಗೊಳ್ಳಬೇಕು. ಈ ಉದ್ದೇಶಕ್ಕಾಗಿ ಜಿಪಂ ಸಿಇಒ ಅಧ್ಯಕ್ಷತೆಯಲ್ಲಿ ಜಿಲ್ಲಾ ಮಟ್ಟದ ಸಮಿತಿ ಕೂಡ ರಚಿಸಲಾಗಿದೆ.

    ಸಾಮಾಜಿಕ ಪರಿಶೋಧನೆಗೆ ನೂರಕ್ಕೆ ನೂರರಷ್ಟು ಕಡತಗಳನ್ನು ಒದಗಿಸಲು ಪಿಡಿಒಗಳು ಹಾಗೂ ಅನುಷ್ಠಾನಾಧಿಕಾರಿಗಳಿಗೆ ತಾಕೀತು ಮಾಡಬೇಕು. ಕಡತ ಒದಗಿಸದೇ ಇರುವ ಪಿಡಿಒ ಹಾಗೂ ಅನುಷ್ಠಾನಾಧಿಕಾರಿಗಳ ಮೇಲೆ ಶಿಸ್ತು ಕ್ರಮ ಜರುಗಿಸಬೇಕು ಎಂದು ನಿರ್ದೇಶಿಸಿದ್ದಾರೆ.

    ಸಾಮಾಜಿಕ ಪರಿಶೋಧನೆ ಸಂದರ್ಭದಲ್ಲಿ ಹಣಕಾಸಿನ ದುರುಪಯೋಗ ಕಂಡುಬಂದಲ್ಲಿ ಸಂಬಂಧಿಸಿದ ಅಧಿಕಾರಿಗಳ ಮೇಲೆ ಕಟ್ಟುನಿಟ್ಟಿನ ಕ್ರಮ ಜರುಗಿಸಬೇಕು ಎಂದು ತಿಳಿಸಿದ್ದಾರೆ.

    ಸಾಮಾಜಿಕ ಪರಿಶೋಧನಾ ಗ್ರಾಮ ಸಭೆಗಳನ್ನು ಗ್ರಾಮ ಪಂಚಾಯಿತಿಗಳು ಆಯೋಜಿಸುವಂತೆ ಹಾಗೂ ಹೆಚ್ಚಿನ ಜನರು ಭಾಗವಹಿಸವಂತೆ ನೋಡಿಕೊಳ್ಳಬೇಕು ಎಂದು ತಿಳಿಸಿದ್ದಾರೆ.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts