Friday, 14th December 2018  

Vijayavani

ಚಾಮರಾಜನಗರದಲ್ಲಿ ವಿಷವಾದ ಮಾರಮ್ಮನ ಪ್ರಸಾದ- ನಾಲ್ವರ ಸಾವು-40ಕ್ಕೂ ಹೆಚ್ಚು ಭಕ್ತರು ಅಸ್ವಸ್ಥ, ಜಿಲ್ಲಾಧಿಕಾರಿ ಭೇಟಿ        ರಾಜಸ್ಥಾನ ಸಿಎಂ ಆಗಿ ಆಶೋಕ್ ಗೆಹ್ಲೋಟ್, ಯುವ ನಾಯಕ ಸಚಿನ್ ಪೈಲಟ್​​ಗೆ ಡಿಸಿಎಂ ಪಟ್ಟ- ಕಾಂಗ್ರೆಸ್​ನಿಂದ ಅಧಿಕೃತ ಘೋಷಣೆ        ಚೆನ್ನೈನ ರೇಲಾ ಆಸ್ಪತ್ರೆಗೆ ಭೇಟಿ ನೀಡಿ ಸಿದ್ಧಗಂಗಾ ಶ್ರೀಗಳ ಆರೋಗ್ಯ ವಿಚಾರಿಸಿದ ಬಿಎಸ್​ವೈ- ಸಿಎಂ ಎಚ್​ಡಿಕೆ ಚೆನ್ನೈಗೆ ಪ್ರಯಾಣ        ಭದ್ರತೆಗಾಗಿ ರಫೇಲ್ ಖರೀದಿ-ಸುಪ್ರೀಂಕೋರ್ಟ್ ತೀರ್ಪಿನಿಂದ ಭ್ರಮನಿರಸನ-ರಾಗಾ ವಿರುದ್ಧ ಹಾಲಿ ಮಾಜಿ ರಕ್ಷಣಾ ಸಚಿವರ ಕಿಡಿ        ನಾಲ್ಕು ದಿನದಲ್ಲಿ ಎಲ್ಲ ಸರಿಹೋಗುತ್ತೆ-ಪ್ರಯಾಣಿಕರಿಗೆ ಯಾವುದೇ ಆತಂಕ ಬೇಡ-ಪಿಲ್ಲರ್ ಬಿರುಕಿಗೆ BMRCL ಎಂಡಿ ಸ್ಪಷ್ಟನೆ        ನನಗೂ ಸಚಿವೆಯಾಗುವ ಆಸೆ ಇದೆ- ಅಂತರಂಗ ತೆರೆದಿಟ್ಟ ಲಕ್ಷ್ಮೀ ಹೆಬ್ಬಾಳ್ಕರ್- ಕೈ ಸಚಿವಾಕಾಂಕ್ಷಿಗಳ ಪಟ್ಟಿಗೆ ಈಗ ಹೊಸ ಸೇರ್ಪಡೆ       
Breaking News

ಜನತೆಯ ಸಮಸ್ಯೆಗೆ ಸ್ಪಂದಿಸಿ

Saturday, 11.08.2018, 5:32 AM       No Comments

ಮೇಲುಕೋಟೆ : ಕ್ಷೇತ್ರದ ಜನತೆಯ ಸಮಸ್ಯೆ ಬಗೆಹರಿಸಲು ಅಧಿಕಾರಿಗಳು ಕ್ರಮ ಕೈಗೊಳ್ಳಬೇಕು. ನಿರ್ಲಕ್ಷೃ ವಹಿಸಿದರೆ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಜಿಲ್ಲಾ ಉಸ್ತುವಾರಿ ಸಚಿವ ಸಿ.ಎಸ್.ಪುಟ್ಟರಾಜು ಎಚ್ಚರಿಸಿದರು.

ಮೇಲುಕೋಟೆಯ ಸರ್ಕಾರಿ ಆಸ್ಪತ್ರೆ ಎದುರಿನ ಮೈದಾನದಲ್ಲಿ ಶುಕ್ರವಾರ ಆಯೋಜಿಸಿದ್ದ ಪಿಂಚಣಿ ಅದಾಲತ್ ಮತ್ತು ಜನಸ್ಪಂದನ ಸಭೆ ಉದ್ಘಾಟಿಸಿ ಮಾತನಾಡಿದ ಅವರು, ಸರ್ಕಾರಿ ಇಲಾಖೆ ಅಧಿಕಾರಿಗಳು ಜನರ ಸಮಸ್ಯೆಗೆ ಸ್ಪಂದಿಸದೆ ಅಲೆಸುತ್ತಿದ್ದಾರೆ ಎಂಬ ದೂರುಗಳು ಕೇಳಿ ಬಂದಿವೆ. ಇದು ಮುಂದುವರಿದರೆ ಶಿಸ್ತು ಕ್ರಮ ಅನಿವಾರ್ಯ ಎಂದು ಹೇಳಿದರು.

ಬಳ್ಳಿಘಟ್ಟ ಗ್ರಾಪಂ ವ್ಯಾಪ್ತಿಯ ಕೆರೆ-ಕಟ್ಟೆಗಳಿಗೆ ನೀರು ತುಂಬಿಸುವ ಯೋಜನೆ ರೂಪುಗೊಂಡಿದ್ದು, ಶೀಘ್ರದಲ್ಲಿಯೇ ಕಾರ್ಯರೂಪಕ್ಕೆ ಬರಲಿದೆ. ಮೇಲುಕೋಟೆ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಕಟ್ಟಡ ನಿರ್ಮಾಣಕ್ಕೆ 3 ಕೋಟಿ ರೂ. ಬಿಡುಗಡೆ ಮಾಡಲಾಗಿದೆ. ಸಣ್ಣ ನೀರಾವರಿ ಇಲಾಖೆ ಅಡಿ ಮೇಲುಕೋಟೆಯ ಎಲ್ಲ ಕಲ್ಯಾಣಿಗಳನ್ನು ಅಭಿವೃದ್ಧಿಪಡಿಸಲಾಗುತ್ತಿದೆ ಎಂದರು.

ಮಾಸಾಶನ ಯೋಜನೆ, ಇಂದಿರಾಗಾಂಧಿ ಯೋಜನೆ ಫಲಾನುಭವಿಗಳಿಗೆ ಆದೇಶ ಪತ್ರ ನೀಡಲಾಯಿತು. ಪಾಂಡವಪುರ ತಾಲೂಕಿನ ತಹಸೀಲ್ದಾರ್ ಡಿ.ಹನುಮಂತರಾಯಪ್ಪ, ಜಿಪಂ ಸದಸ್ಯ ಎಚ್.ತ್ಯಾಗರಾಜು, ಮೇಲುಕೋಟೆ ಗ್ರಾಪಂ ಅಧ್ಯಕ್ಷ ನಾರಾಯಣ ಭಟ್, ಉಪವಿಭಾಗಾಧಿಕಾರಿ ಶೈಲಜಾ, ಗ್ರಾಪಂ ಉಪಾಧ್ಯಕ್ಷೆ ಮಮತಾ, ಮಾಣಿಕ್ಯನಹಳ್ಳಿ ಪುಟ್ಟೇಗೌಡ, ಗ್ರಾಪಂ ಸದಸ್ಯ ಅವ್ವ ಗಂಗಾಧರ್ ಇತರರು ಇದ್ದರು.

Leave a Reply

Your email address will not be published. Required fields are marked *

Back To Top