More

    ಸಿದ್ದರಾಮಯ್ಯ ಬಳಿಕ ಪರಮೇಶ್ವರ್​ ಸಿಎಂ; ತಮ್ಮ ಹೇಳಿಕೆಯನ್ನು ಸಮರ್ಥಿಸಿಕೊಂಡ ಸಚಿವ ಕೆ.ಎನ್. ರಾಜಣ್ಣ

    ತುಮಕೂರು: ಸದ್ಯ ನಾನು ಮುಖ್ಯಮಂತ್ರಿಯಾಗಿದ್ದೇನೆ. ನಾನೇ ಹುದ್ದೆಯಲ್ಲಿ ಮುಂದುವರಿಯಲಿದ್ದೇನೆ ಎಮದು ಸಿಎಂ ಸಿದ್ದರಾಮಯ್ಯ ಹೇಳಿಕೆ ಕಾಂಗ್ರೆಸ್​ ಪಾಳಯದಲ್ಲಿ ತಲ್ಲಣವನ್ನುಂಟು ಮಾಡಿದ್ದು, ಇದಕ್ಕೆ ಪುಷ್ಠಿ ನೀಡುವಂತೆ ಸಹಕಾರ ಸಚಿವ ರಾಜಣ್ಣ ಹೇಳಿಕೆ ನೀಡಿ ಸಿಎಂ ಬದಲಾವಣೆ ಬಗ್ಗೆ ಮತ್ತಷ್ಟು ಕುತೂಹಲ ಹುಟ್ಟುಹಾಕಿದರು.

    ಇದೀಗ ತಾವು ನೀಡಿರುವ ಹೇಳಿಕೆ ಕುರಿತು ಪ್ರತಿಕ್ರಿಯಿಸಿರುವ ಸಚಿವ ರಾಜಣ್ಣ ರಾಜಣ್ಣ, ನನ್ನ ಜೀವಮಾನದಲ್ಲಿ ಏನು ಹೇಳಿದ್ದೇನೋ ಅದ್ಯಾವುದು ಸುಳ್ಳಾಗಿಲ್ಲ ಎಂದು ಹೇಳುವ ಮೂಲಕ ತಮ್ಮ ಹೇಳಿಕೆಯನ್ನು ಸಮರ್ಥಿಸಿಕೊಂಡಿದ್ದಾರೆ.

    K N Rajanna

    ಇದನ್ನೂ ಓದಿ: ಮರಾಠ ಮೀಸಲಾತಿ ಕಿಚ್ಚು; ಭರವಸೆ ಬೆನ್ನಲ್ಲೇ ಉಪವಾಸ ಸತ್ಯಾಗ್ರಹ ಅಂತ್ಯಗೊಳಿಸಿದ ಮನೋಜ್​ ಜಾರಂಗೆ

    ಈ ಕುರಿತು ತುಮಕೂರಿನಲ್ಲಿ ಮಾತನಾಡಿದ ಸಚಿವ ರಾಜಣ್ಣ, ನನ್ನ ಜೀವಮಾನದಲ್ಲಿ ಏನು ಹೇಳಿದ್ದೇನೋ ಅದ್ಯಾವುದು ಸುಳ್ಳಾಗಿಲ್ಲ. ನಾನು ಹೇಳಿದ ಯಾವ ವಿಚಾರವೂ ಅಸತ್ಯವಾಗಿಲ್ಲ. ಡಾ.ಪರಮೇಶ್ವರ್ ಸಿಎಂ ಆಗ್ತಾರೆ ಅನ್ನೋ ವಿಚಾರವೂ ಅಸತ್ಯವಾಗಲ್ಲ. ಈ ಅವಧಿಯಲ್ಲೇ ಪರಮೇಶ್ವರ್ ಸಿಎಂ ಆಗ್ತಾರಾ ಎಂಬ ಪ್ರಶ್ನೆಗೆ ಪ್ರತಿಕ್ರಿಯಿಸಿ, ಹೌದು ಸಿಎಂ ಆಗುತ್ತಾರೆ ಎಂದು ಹೇಳಿದ್ದಾರೆ. ನಾನು ಸಚಿವನಾಗಿರೋದೆ ಸಾಕು, ನನಗೆ ಡಿಸಿಎಂ ಹುದ್ದೆ ಬೇಡ ಎಂದು ಸಚಿವ ರಾಜಣ್ಣ ಹೇಳಿದ್ದಾರೆ.

    ಕಾಂಗ್ರೆಸ್​ನಲ್ಲಿ ತಲ್ಲಣ

    ಬುಧವಾರವಷ್ಟೇ ಬೆಂಗಳೂರಿನ ಕೆಪಿಸಿಸಿ ಕಚೇರಿಯಲ್ಲಿ ಕಾಂಗ್ರೆಸ್ ಹೈಕಮಾಂಡ್ ರಾಜ್ಯ ನಾಯಕರ ಜತೆ ಸಭೆ ನಡೆಸಿತ್ತು. ಬಳಿಕ, ಪಕ್ಷದ ಆಂತರಿಕ ವಿಚಾರಗಳ ಬಗ್ಗೆ ಬಹಿರಂಗ ಚರ್ಚೆ ಮಾಡಬಾರದು. ಏನಿದ್ದರೂ ಸಿಎಂ, ಡಿಸಿಎಂ ಬಳಿ ಅಥವಾ ನಮ್ಮ ಬಳಿ ಚರ್ಚಿಸಿ ಎಂದು ನಾಯಕರಿಗೆ ಹೈಕಮಾಂಡ್ ಸೂಚಿಸಿತ್ತು. ಇದಾದ ಮರುದಿನವೇ ಸಿಎಂ ಸಿದ್ದರಾಮಯ್ಯ ಕಾಂಗ್ರೆಸ್​ ಪಾಳಯದಲ್ಲಿ ತಲ್ಲಣವನ್ನುಂಟು ಮಾಡಿದೆ.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts