ರಾಸಲೀಲೆ ವಿಡಿಯೋ ಬಹಿರಂಗ: ಸಚಿವ ರಮೇಶ್ ಜಾರಕಿಹೊಳಿ ಮೊದಲ ಪ್ರತಿಕ್ರಿಯೆ

Ramesh Jarakiholi (FILEminimizer)
Ramesh Jarakiholi
Published on

ಬೆಂಗಳೂರು: ಜಲಸಂಪನ್ಮೂಲ ಸಚಿವ ಹಾಗೂ ಉತ್ತರ ಕರ್ನಾಟಕದ ಪ್ರಭಾವಿ ರಾಜಕಾರಣಿ ರಮೇಶ್ ಜಾರಕಿಹೊಳಿ ಅವರದ್ದು ಎನ್ನಲಾದ ರಾಸಲೀಲೆ ವಿಡಿಯೋ ಬಹಿರಂಗವಾಗಿರುವುದರಿಂದ ರಾಜ್ಯ ರಾಜಕೀಯದಲ್ಲಿ ತೀವ್ರ ಸಂಚಲನ ಮೂಡಿದೆ.

ಈ ಕುರಿತು ಬೆಂಗಳೂರಿನಲ್ಲಿ ರಾತ್ರಿ ಮಾಧ್ಯಮಗಳೊಂದಿಗೆ ಮಾತನಾಡಿದ ರಮೇಶ್ ಜಾರಕಿಹೊಳಿ ಅವರು, ನಾನೇಕೆ ರಾಜೀನಾಮೆ ನೀಡಲಿ ಎಂದು ಮಾಧ್ಯಮದವರನ್ನೇ ಪ್ರಶ್ನಿಸಿದ್ದಾರೆ.

ನಾನು ಯಾವ ತಪ್ಪೂ ಮಾಡಿಲ್ಲ. ತಪ್ಪಿತಸ್ಥ ಎಂದು ದೃಢಪಟ್ಟರೆ ಆಗ ರಾಜೀನಾಮೆಯ ಪ್ರಶ್ನೆ ಉದ್ಭವಿಸುತ್ತದೆ ಎಂದಿದ್ದಾರೆ. ರಾಸಲೀಲೆ ವಿಡಿಯೋ ಬಗ್ಗೆ ಸಮಗ್ರ ತನಿಖೆಯಾಗಲಿ ಎಂದು ಸಿಎಂಗೆ ಮನವಿ ಮಾಡುತ್ತೇನೆ. ಈ ಸುದ್ದಿ ಬಿತ್ತರವಾಗುವಾಗ ನಾನು ಮೈಸೂರಿನಲ್ಲಿದ್ದೆ. ನೋಡಿ ಆಶ್ಚರ್ಯವಾಯಿತು. ಪಾಪ, ಆ ದೃಶ್ಯಗಳಲ್ಲಿ ಇರುವ ಯುವತಿ ಯಾರು ಅಂತ ನನಗೆ ಗೊತ್ತಿಲ್ಲ. ದಿನೇಶ್ ಕಲ್ಲಹಳ್ಳಿ ಯಾರು ಅಂತಲೂ ಗೊತ್ತಿಲ್ಲ ಎಂದರು.

ನನ್ನ ವಿರುದ್ಧ ಯಾರೋ ಈ ಷಡ್ಯಂತ್ರ ಮಾಡಿದ್ದಾರೆ ಎಂಬುದರ ಬಗ್ಗೆಯೂ ನಾನು ಆರೋಪ ಮಾಡುವುದಿಲ್ಲ. ಯಾರ ಮೇಲೆಯೂ ನನಗೆ ಅನುಮಾನವೂ ಇಲ್ಲ. ಕಳೆದ 21 ವರ್ಷಗಳಿಂದ ನಾನು ಶಾಸಕನಾಗಿ ಸಾರ್ವಜನಿಕರ ಸೇವೆ ಮಾಡುತ್ತಿದ್ದೇನೆ. ಅತ್ಯಂತ ಸೂಕ್ಷ್ಮ ಮನಸ್ಥಿತಿಯ ಮನುಷ್ಯ ನಾನು ಎಂದು ರಮೇಶ್ ಜಾರಕಿಹೊಳಿ ಹೇಳಿದ್ದಾರೆ.

ವಿಡಿಯೋ ವಿಚಾರವಾಗಿ ಆರ್​​ಟಿ ನಗರ ಮೂಲದ ಯುವತಿಗೆ ರಮೇಶ್ ಜಾರಕಿಹೊಳಿ ಜೀವ ಬೆದರಿಕೆ ಹಾಕಿದ್ದಾರೆ, ಯುವತಿಯನ್ನು ದುರ್ಬಳಕೆ ಮಾಡಿಕೊಂಡಿದ್ದಾರೆ ಎಂದು ಆರೋಪಿಸಿ ಸಾಮಾಜಿಕ ಕಾರ್ಯಕರ್ತ ದಿನೇಶ್ ಕಲ್ಲಹಳ್ಳಿ ಎನ್ನುವರು ಕಬ್ಬನ್ ಪಾರ್ಕ್ ಪೊಲೀಸ್ ಠಾಣೆಯಲ್ಲಿ ಸಚಿವರ ವಿರುದ್ಧ ದೂರು ದಾಖಲಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net