More

    ಸಚಿವೆ ಶಶಿಕಲಾ ಕಾರ್ಯ ಸ್ಮರಣೀಯ

    ನಿಪ್ಪಾಣಿ: ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಶಶಿಕಲಾ ಜೊಲ್ಲೆಯ ಅವರ 51ನೇ ಜನ್ಮದಿನದ ಅಂಗವಾಗಿ ಶುಕ್ರವಾರ ತಾಲೂಕಿನ ವಿವಿಧೆಡೆ ವಿವಿಧ ಕಾರ್ಯಕ್ರಮ ಜರುಗಿದವು. ನಗರದಲ್ಲಿ ಸ್ಥಳೀಯ ಹಾಲಸಿದ್ಧನಾಥ ಸಹಕಾರಿ ಸಕ್ಕರೆ ಕಾರ್ಖಾನೆ ಚೇರ್ಮನ್ ಚಂದ್ರಕಾಂತ ಕೋಠಿವಾಲೆ ಅಧ್ಯಕ್ಷತೆಯಲ್ಲಿ ಸ್ವಚ್ಛತಾ ಅಭಿಯಾನ, ಸಸಿ ನೆಡುವ ಕಾರ್ಯಕ್ರಮ ಹಾಗೂ ರೋಗಿಗಳಿಗೆ ಹಣ್ಣು ವಿತರಿಸುವ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು.

    ರೇಣುಕಾ ಮಂದಿರದ ಹತ್ತಿರವಿರುವ ಶಿವಾಜಿ ಉದ್ಯಾನದಲ್ಲಿ ಬೆಳಗ್ಗೆ ನಗರಸಭೆ ಅಧ್ಯಕ್ಷ ಜಯವಂತ ಭಾಟಲೆ, ಉಪಾಧ್ಯಕ್ಷೆ ನೀತಾ ಬಾಗಡಿ, ಸದಸ್ಯರು, ಅಧಿಕಾರಿಗಳು, ಸಿಬ್ಬಂದಿ ಹಾಗೂ ಬಿಜೆಪಿ ಪಕ್ಷದ ಕಾರ್ಯಕರ್ತರು, ಅಭಿಮಾನಿಗಳು ಸೇರಿ ಪರಿಸರವನ್ನು ಸ್ವಚ್ಛಗೊಳಿಸಿದರು. ಬಳಿಕ ಹಾಲಶುಗರ್ ಚೇರ್ಮನ್ ಚಂದ್ರಕಾಂತ ಕೋಠಿವಾಲೆ ಅವರು ಸಸಿಗೆ ನೀರುಣಿಸುವ ಮೂಲಕ ಸಸಿ ನೆಡುವ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದ ಅವರು, ಸಚಿವೆ ಶಶಿಕಲಾ ಜೊಲ್ಲೆ ಅವರ ಅವಿರತ ಹಾಗೂ ಪ್ರಾಮಾಣಿಕ ಸೇವೆಯಿಂದ ಮತಕ್ಷೇತ್ರ ಅಭಿವೃದ್ಧಿಯತ್ತ ಸಾಗುತ್ತಿದೆ.

    ಸಹಕಾರಿ ರಂಗದ ಮೂಲಕ ಈಗಾಗಲೇ ನೂರಾರು ಯುವಕ ಹಾಗೂ ಮಹಿಳೆಯರಿಗೆ ಉದ್ಯೋಗ ನೀಡಿ ಮಾದರಿ ಎನಿಸಿಕೊಂಡಿದ್ದಾರೆ. ಅವರಿಂದ ಹೆಚ್ಚಿನ ಜನಪರ ಹಾಗೂ ಸಮಾಜಮುಖಿ ಕಾರ್ಯಗಳಾಗಲಿ ಎಂದು ಆಶಯ ವ್ಯಕ್ತಪಡಿಸಿದರು.

    ಸ್ಥಳೀಯ ಸಮುದಾಯ ಆರೋಗ್ಯ ಕೇಂದ್ರದಲ್ಲಿ ರೋಗಿಗಳಿಗೆ ಹಣ್ಣು, ಬಿಸ್ಕೀಟ್‌ಗಳನ್ನು ವಿತರಿಸಿದರು. ಚಂದ್ರಕಾಂತ ಕೋಠಿವಾಲೆ, ಜಯವಂತ ಭಾಟಲೆ, ಎಪಿಎಂಸಿ ಸದಸ್ಯ ಬಂಡಾ ಘೋರ್ಪಡೆ ಮಾತನಾಡಿದರು. ಇದೇ ಸಂದರ್ಭದಲ್ಲಿ ಯುವಕರು ಸಚಿವೆ ಜೊಲ್ಲೆಯವರಿಗೆ ಹುಟ್ಟುಹಬ್ಬದ ಅಭಿನಂದನೆಗಳನ್ನು ಸಲ್ಲಿಸಿದರು. ರಾಜು ಗುಂಡೇಶಾ, ದೀಪಕ ಪಾಟೀಲ, ಸೋನಾಲಿ ಉಪಾಧ್ಯೆ, ತಾತ್ಯಾಸಾಹೇಬ ನಾಯಿಕ, ಪಕ್ಷದ ನಗರ ಘಟಕದ ಅಧ್ಯಕ್ಷ ಪ್ರಣವ ಮಾನವಿ, ಮಹಿಳಾ ಮೋರ್ಚಾ ಸ್ಥಳೀಯ ಘಟಕದ ಅಧ್ಯಕ್ಷೆ ವಿಭಾವರಿ ಖಾಂಡಕೆ, ಎಸ್.ಕೆ.ಖಜ್ಜಣ್ಣವರ, ಮಹಾದೇವ ಬರಗಾಲೆ, ನಗರಸಭೆ ಸದಸ್ಯರು, ಪಕ್ಷದ ಕಾರ್ಯಕರ್ತರು ಉಪಸ್ಥಿತರಿದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts