More

    ರಾಷ್ಟ್ರವ್ಯಾಪಿ ಎನ್​ಆರ್​ಸಿ ಜಾರಿ ಮಾಡುವ ಬಗ್ಗೆ ಇನ್ನೂ ನಿರ್ಧಾರ ಮಾಡಿಲ್ಲ: ಲೋಕಸಭೆಯಲ್ಲಿ ಲಿಖಿತವಾಗಿ ಸ್ಪಷ್ಟ ಪಡಿಸಿದ ಕೇಂದ್ರ ಗೃಹಸಚಿವಾಲಯ

    ನವದೆಹಲಿ: ರಾಷ್ಟ್ರೀಯ ಪೌರತ್ವ ನೋಂದಣಿ ಕಾಯ್ದೆ (ಎನ್​ಆರ್​ಸಿ)ಯನ್ನು ರಾಷ್ಟ್ರವ್ಯಾಪಿ ಜಾರಿಗೊಳಿಸುವ ಬಗ್ಗೆ ಇನ್ನೂ ಯಾವುದೇ ಸ್ಪಷ್ಟ ನಿರ್ಧಾರ ಕೈಗೊಂಡಿಲ್ಲ ಎಂದು ಇಂದು ಗೃಹ ಸಚಿವಾಲಯ ಲೋಕಸಭೆಯಲ್ಲಿ ಲಿಖಿತವಾಗಿ ಪ್ರತಿಕ್ರಿಯೆ ನೀಡಿದೆ.

    ದೇಶದೆಲ್ಲೆಡೆ ಎನ್​ಆರ್​ಸಿ ಅನುಷ್ಠಾನಕ್ಕೆ ಕೇಂದ್ರ ಸರ್ಕಾರ ನಿರ್ಧಾರ ಮಾಡಿದೆಯಾ ಎಂದು ಲೋಕಸಭೆಯಲ್ಲಿ ಕೇಳಲಾದ ಪ್ರಶ್ನೆಗೆ ಬರವಣಿಗೆಯ ಮೂಲಕ ಉತ್ತರಿಸಿದ ಕೇಂದ್ರ ಗೃಹಸಚಿವಾಲಯದ ರಾಜ್ಯ ಖಾತೆ ಸಚಿವ ನಿತ್ಯಾನಂದ ರೈ, ಈ ಕ್ಷಣದವರೆಗೆ ಸರ್ಕಾರ ಆ ಬಗ್ಗೆ ನಿರ್ಧಾರ ಮಾಡಿಲ್ಲ ಎಂದಿದ್ದಾರೆ.

    ಸೋಮವಾರದಿಂದ ಸಂಸತ್ತಿನಲ್ಲಿ ಬಜೆಟ್​ ಅಧಿವೇಶನ ಪ್ರಾರಂಭವಾಗಿದೆ. ಅಧಿವೇಶನದಲ್ಲಿ ರಾಜ್ಯ ಹಾಗೂ ಲೋಕಸಭೆ ಎರಡರಲ್ಲೂ ಪ್ರತಿಪಕ್ಷಗಳು ಹೆಚ್ಚಾಗಿ ​ ಪೌರತ್ವ ತಿದ್ದುಪಡಿ ಕಾಯ್ದೆ (ಸಿಎಎ) ಎನ್​ಆರ್​ಸಿ ಮತ್ತು ರಾಷ್ಟ್ರೀಯ ಜನಸಂಖ್ಯಾ ನೋಂದಣಿ(ಎನ್​ಪಿಆರ್​) ಬಗ್ಗೆಯೇ ಹೆಚ್ಚಾಗಿ ಚರ್ಚೆ ನಡೆಸಿದ್ದಾರೆ. ಹಲವು ಪ್ರಶ್ನೆಗಳನ್ನು ಕೇಳಿದ್ದಾರೆ.
    ಪೌರತ್ವ ತಿದ್ದುಪಡಿ ಕಾಯ್ದೆ, ಎನ್​ಆರ್​ಸಿಗಳು ಮುನ್ನೆಲೆಗೆ ಬಂದಾಗಿನಿಂದಲೂ ರಾಷ್ಟ್ರದ ಬಹುತೇಕ ಜನರು ರಸ್ತೆಗಿಳಿದು ಹೋರಾಟ ಮಾಡುತ್ತಿದ್ದಾರೆ.

    ಎನ್​ಪಿಆರ್​ನ್ನು ಹಿಂದೆಯೂ ಮಾಡಲಾಗಿತ್ತು. ಆದರೆ ಆಗ ಅದರಲ್ಲಿದ್ದ ಪ್ರಶ್ನೆಗಳು ತೀರ ಸರಳವಾಗಿದ್ದವು. ಆದರೆ ಈಗಿನ ಕೇಂದ್ರ ಸರ್ಕಾರದ ಎನ್​ಪಿಆರ್​ನಲ್ಲಿ ತಂದೆಯ ಹುಟ್ಟಿದ ದಿನಾಂಕದಂತಹ ಕ್ಲಿಷ್ಟ ಪ್ರಶ್ನೆಗಳನ್ನು ಇಡಲಾಗಿದೆ ಎಂದು ರಾಜ್ಯಸಭಾ ಪ್ರತಿಪಕ್ಷ ನಾಯಕ, ಕಾಂಗ್ರೆಸ್​ನ ಗುಲಾಬ್​ ನಭಿ ಆಜಾದ್​ ಆರೋಪಿಸಿದರು.

    ಸಿಎಎ, ಎನ್​ಪಿಆರ್​, ಎನ್​ಆರ್​ಸಿ ವಿಚಾರಗಳನ್ನು ಮುಂದಿಟ್ಟುಕೊಂಡು ತನ್ನೆಲ್ಲ ವಿಫಲತೆಗಳನ್ನೂ ಮುಚ್ಚಿಕೊಳ್ಳಲು ಕೇಂದ್ರ ಸರ್ಕಾರ ಪ್ರಯತ್ನಿಸುತ್ತಿದೆ. ಜನರ ಗಮನವನ್ನು ಬೇರೆಡೆಗೆ ಸೆಳೆಯುತ್ತಿದೆ ಎಂದು ಹೇಳಿದರು.

    ದೇಶದಲ್ಲಿ ಮೊದಲು ಪೌರತ್ವ ತಿದ್ದುಪಡಿ ಕಾಯ್ದೆಯನ್ನು ಅನುಷ್ಠಾನಕ್ಕೆ ತರಲಾಗುತ್ತದೆ. ಅದಾದ ಬಳಿಕ ಎನ್​ಆರ್​ಸಿ ಬಗ್ಗೆ ನಿರ್ಧಾರ ಮಾಡಲಾಗುವುದು ಎಂದು ಗೃಹ ಸಚಿವ ಅಮಿತ್​ ಷಾ ಅವರು ಬಿಲ್​ ಮಂಡನೆ ಮಾಡುವಾಗಲೇ ಹೇಳಿದ್ದರು.

    ಸಿಎಎ ಕಾಯ್ದೆಯಾದಾಗಿನಿಂದಲೂ ದೇಶದ ವಿವಿಧ ಯೂನಿವರ್ಸಿಟಿಗಳು ಸೇರಿ ಹಲವು ಕಡೆ ವಿರೋಧಿ ಪ್ರತಿಭಟನೆಗಳು ನಡೆಯುತ್ತಲೇ ಇವೆ. (ಏಜೆನ್ಸೀಸ್​)

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts