ಬಳ್ಳಾರಿ: ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಚಿವ ಶಿವರಾಜ ತಂಗಡಗಿ ಮೇ 15 ರಂದು ಜಿಲ್ಲೆಯಲ್ಲಿ ಪ್ರವಾಸ ಕೈಗೊಳ್ಳುವರು.
ಮಧ್ಯಾಹ್ನ 01 ಗಂಟೆಗೆ ಸಂಡೂರು ತಾಪಂ ಸಭಾಂಗಣದಲ್ಲಿ ಮೇ 20 ರಂದು ಹೊಸಪೇಟೆಯಲ್ಲಿ ನಡೆಯುವ ಬೃಹತ್ ಕಾರ್ಯಕ್ರಮದಲ್ಲಿ 1 ಲಕ್ಷ ಫಲಾನುಭವಿಗಳಿಗೆ ಹಕ್ಕುಪತ್ರ ನೀಡುವ ಸಮಾರಂಭದ ಪ್ರಯುಕ್ತ ಅಧಿಕಾರಿಗಳೊಂದಿಗೆ ಪೂರ್ವಭಾವಿ ಸಭೆ ನಡೆಸುವರು. ಮಧ್ಯಾಹ್ನ 02 ಗಂಟೆಗೆ ಕಾರಟಗಿಗೆ ಪ್ರಯಾಣಿಸುವರು ಎಂದು ಸಚಿವರ ಆಪ್ತ ಕಾರ್ಯದರ್ಶಿ ತಿಳಿಸಿದ್ದಾರೆ.
————
