More

    ಪ್ರತಿಭೆ ಅನಾವರಣಕ್ಕೆ ಕಾರಂಜಿ ಪೂರಕ

    ಗಂಗಾವತಿ: ವಿದ್ಯಾರ್ಥಿಗಳ ಕಲಿಕಾಸಕ್ತಿ ಅನುಗುಣ ಶಿಕ್ಷಕರು ಪ್ರೋತ್ಸಾಹಿಸಬೇಕಿದ್ದು, ಪ್ರತಿಭೆ ಅನಾವರಣಕ್ಕೆ ಪ್ರತಿಭಾ ಕಾರಂಜಿ ಪೂರಕವಾಗಿದೆ ಎಂದು ಹಿಂದುಳಿದ ವರ್ಗ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಶಿವರಾಜ ತಂಗಡಗಿ ಹೇಳಿದರು.

    ನಗರದ ಐಎಂಎ ಹಾಲ್‌ನಲ್ಲಿ ಶಾಲಾ ಶಿಕ್ಷಣ ಇಲಾಖೆ ಮತ್ತು ಲಯನ್ಸ್ ಶಿಕ್ಷಣ ಸಂಸ್ಥೆ ಸಹಯೋಗದಲ್ಲಿ ಆಯೋಜಿಸಿದ್ದ ಪ್ರಾಥಮಿಕ ಮತ್ತು ಪ್ರೌಢ ಶಾಲೆಗಳ ತಾಲೂಕು ಮಟ್ಟದ ಪ್ರತಿಭಾ ಕಾರಂಜಿ/ಕಲೋತ್ಸವ ಕಾರ್ಯಕ್ರಮ ಉದ್ಘಾಟಿಸಿ ಸೋಮವಾರ ಮಾತನಾಡಿದರು.

    ಕಲ್ಯಾಣ ಕರ್ನಾಟಕ ಭಾಗದಲ್ಲಿ ಸಾಕಷ್ಟು ಪ್ರತಿಭಾವಂತರಿದ್ದು, ಪ್ರೋತ್ಸಾಹಕ್ಕೆ ರಾಜ್ಯ ಸರ್ಕಾರ ಹಲವು ಯೋಜನೆಗಳನ್ನು ರೂಪಿಸಿದೆ. ವಿದ್ಯಾರ್ಥಿಗಳು ಕ್ರೀಯಾಶೀಲತೆ ರೂಢಿಸಿಕೊಳ್ಳಬೇಕಿದ್ದು, ತಾಲೂಕಿನ ಹಿರಿಮೆ ರಾಜ್ಯಮಟ್ಟದಲ್ಲಿ ಗುರುತಿಸುವಂತಾಗಬೇಕು. ಕೀಳರಿಮೆ ಬಿಟ್ಟು ಸ್ಪರ್ಧಾ ಚಟುವಟಿಕೆಗಳಲ್ಲಿ ಭಾಗವಹಿಸಬೇಕು. ಪಠ್ಯ ಮತ್ತು ಪಠ್ಯೇತರ ಚಟುವಟಿಕೆಗಳಿಗೆ ಸಮಾನ ಸಮಯ ಮೀಸಲಿಡುವಂತೆ ಸಲಹೆ ನೀಡಿದರು.

    ಬಿಇಒ ವೆಂಕಟೇಶ ರಾಮಚಂದ್ರಪ್ಪ ಮಾತನಾಡಿ, ಸ್ಪರ್ಧಾತ್ಮಕ ಜಗತ್ತಿನಲ್ಲಿ ವಿದ್ಯಾರ್ಥಿಗಳು ಎಲ್ಲ ಚಟುವಟಿಕೆಗಳಲ್ಲೂ ಸಕ್ರಿಯರಾಗಬೇಕಿದೆ. ಕ್ರಿಯಾಶೀಲತೆ ಹೊಸ ಅವಿಷ್ಕಾರಗಳಿಗೆ ವೇದಿಕೆ ಒದಗಿಸುತ್ತದೆ ಎಂದರು.

    ಶಿಕ್ಷಣ ಸಂಯೋಜಕ ಆನಂದ ನಾಗಮ್ಮನವರ್ ಪ್ರಾಸ್ತಾವಿಕ ನುಡಿಗಳನ್ನಾಡಿದರು. ಪ್ರೌಥಮಿಕ ಮತ್ತು ಪ್ರೌಢ ವಿಭಾಗದಲ್ಲಿ 120 ಶಾಲೆಗಳ 170ಕ್ಕೂ ಹೆಚ್ಚು ವಿದ್ಯಾರ್ಥಿಗಳು ಭಾಗವಹಿಸಿದ್ದರು. ಕಸಾಪ ಜಿಲ್ಲಾಧ್ಯಕ್ಷ ಶರಣೇಗೌಡ ಪೊ.ಪಾಟೀಲ್, ತಾಲೂಕು ದೈಹಿಕ ಪರಿವೀಕ್ಷಕ ಕೆ.ರಂಗಸ್ವಾಮಿ ನಾಯಕ, ಅಕ್ಷರ ದಾಸೋಹ ಅಧಿಕಾರಿ ಸುರೇಶಗೌಡ, ಮಕ್ಕಳ ವೈದ್ಯ ಡಾ.ಕೆ.ಅಮರೇಶ ಪಾಟೀಲ್, ಪ್ರಾಥಮಿಕ ಶಿಕ್ಷಕರ ಸಂಘದ ವಿವಿಧ ತಾಲೂಕಿನ ಪದಾಧಿಕಾರಿಗಳಾದ ಹನುಮಂತಪ್ಪ, ಶಂಶಾದ್ ಬೇಗಂ, ಮಂಜುನಾಥ ದರೋಜಿ ಇತರರಿದ್ದರು. ಶಿಕ್ಷಣ ಸಂಯೋಜಕಿ ಸುಮಂಗಲಾ ಕಾರ್ಯಕ್ರಮ ನಿರೂಪಿಸಿದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts