More

    ನನ್ನ ಹೆಸರು ಹಾಳು ಮಾಡಲು ಕೆಲವರ ಹುನ್ನಾರ: ಸಚಿವ ವಿ.ಸೋಮಣ್ಣ ಆಕ್ರೋಶ

    ಬೆಂಗಳೂರು: ರಾಜ್ಯದಲ್ಲಿಯೇ ಗೋವಿಂದರಾಜನಗರ ಕ್ಷೇತ್ರವನ್ನು ಮಾದರಿ ಕ್ಷೇತ್ರವನ್ನಾಗಿ ಅಭಿವೃದ್ಧಿಪಡಿಸುತ್ತಿದ್ದರೂ ಕೆಲವರು ನನ್ನ ಹೆಸರನ್ನು ಹಾಳು ಮಾಡುವುದಕ್ಕೆ ಹುನ್ನಾರ ನಡೆಸುತ್ತಿದ್ದಾರೆ ಎಂದು ವಸತಿ ಸಚಿವ ವಿ.ಸೋಮಣ್ಣ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಮಂಗಳವಾರ ಗೋವಿಂದರಾಜನಗರ ಕ್ಷೇತ್ರದಲ್ಲಿ ನಡೆದ ಸಂಗೊಳ್ಳಿ ರಾಯಣ್ಣ ಡಯಾಲಿಸಿಸ್ ಕೇಂದ್ರದ ವಾರ್ಷಿಕೋತ್ಸವ ಕಾರ್ಯಕ್ರಮದಲ್ಲಿ ಮಾತನಾಡಿದರು.

    ಜೀವನದಲ್ಲಿ ಅನೇಕ ಏರುಪೇರುಗಳನ್ನು ನೋಡಿದ್ದೇನೆ. ಅಭಿವೃದ್ಧಿ ಕಾರ್ಯ ಮಾಡುವ ನನ್ನಂತಹ ಜನಪ್ರತಿನಿಧಿಗೆ ಅನ್ಯಾಯ ಮಾಡಬಾರದು. ಮಾನವೀಯತೆ ದೃಷ್ಟಿ ಇಟ್ಟುಕೊಂಡು ಕೆಲಸ ಮಾಡುತ್ತಿದ್ದೇನೆ. ಕ್ಷೇತ್ರದ 64 ಭಾಗಗಳಲ್ಲಿ ಜೀವದ ಹಂಗು ತೊರೆದು ವಿವಿಧ ಜನಪ್ರಿಯ ಅಭಿವೃದ್ಧಿ ಕಾರ್ಯ ಮಾಡಿದ್ದಾನೆ. ಇದರಿಂದ ಸಾವಿರಾರು ಜನರಿಗೂ ಅನುಕೂಲವಾಗಿದೆ. ರಾಜಕಾರಣ ಶಾಶ್ವತವಲ್ಲ, ಇಂದು ಬರುತ್ತದೆ ನಾಳೆ ಹೋಗುತ್ತದೆ. ಆದರೆ, ನಾವು ಮಾಡಿರುವ ಕೆಲಸಗಳು ಶಾಶ್ವತವಾಗಿ ಹೆಜ್ಜೆಗುರುತುಗಳಾಗಿ ಉಳಿಯಲಿವೆ. ಆದರೆ, ನಮ್ಮಂತಹವರ ಮೇಲೆ ದಬ್ಬಾಳಿಕೆ ಮಾಡುತ್ತಿದ್ದಾರೆ. ಹಣ ಮತ್ತು ಜಾತಿಯಿಂದ ನನ್ನನ್ನು ತೇಜೋವಧೆ ಮಾಡಲಾಗುತ್ತಿದೆ ಎಂದು ಸೋಮಣ್ಣ ಬೇಸರ ವ್ಯಕ್ತಪಡಿಸಿದರು.

    ಇದನ್ನೂ ಓದಿ: ಬೆರಳ ತುದಿಯಲ್ಲೇ ಇದೆ ಬದಲಿಸುವ ಶಕ್ತಿ; ಚುನಾವಣೆ ಸುಧಾರಣೆಗೆ ಆಗಲಿ ಬದಲಾವಣೆ..

    ಖಾಸಗಿ ಆಸ್ಪತ್ರೆಯಲ್ಲಿ ಒಂದು ಬಾರಿ ಡಯಾಲಿಸಿಸ್‌ಗೆ 4-5 ಸಾವಿರ ರೂ. ನೀಡಬೇಕಾಗುತ್ತದೆ. ಬಡ ಮತ್ತು ಮಧ್ಯಮದವರಿಗೆ ಉಚಿತವಾಗಿ ಸೇವೆ ನೀಡಬೇಕೆಂಬ ಉದ್ದೇಶದಿಂದ ನಮ್ಮ ಕ್ಷೇತ್ರದಲ್ಲಿ ಸುಸಜ್ಜಿತ ಸಂಗೊಳ್ಳಿ ರಾಯಣ್ಣ ಡಯಾಲಿಸಿಸ್ ಕೇಂದ್ರ ಆರಂಭಿಲಾಗಿದೆ. ಡಯಾಲಿಸಿಸ್ ಕೇಂದ್ರದಲ್ಲಿ 68 ಡಯಾಲಿಸಿಸ್ ಉಪಕರಣ ಅಳವಡಿಸಲು ಜಾಗದ ವ್ಯವಸ್ಥೆ ಇದೆ. ಎರಡು ಉಪಕರಣಗಳಿಂದ ಪ್ರಾರಂಭವಾಗಿದ್ದ ಈ ಕೇಂದ್ರದಲ್ಲಿ ಈಗ 42 ಉಪಕರಣಗಳನ್ನು ಅಳವಡಿಸಲಾಗಿದೆ. ಬಿಪಿಎಲ್ ಕಾರ್ಡ್ ಹೊಂದಿರುವವರಿಗೆ ಉಚಿತ ಚಿಕಿತ್ಸೆ ಇದೆ. ಎಪಿಎಲ್ ಕಾರ್ಡ್ ಇರುವವರಿಗೆ 700 ರೂ. ಪಾವತಿಸಿದರೆ ಚಿಕಿತ್ಸೆ ಲಭ್ಯವಿದೆ. ಇದುವರೆಗೆ 20,100 ಮಂದಿ ಮೂತ್ರಪಿಂಡ ವೈಫಲ್ಯದಿಂದ ಬಳಲುತ್ತಿರುವ ರೋಗಿಗಳು ಡಯಾಲಿಸಿಸ್ ಸೇವೆ ಪಡೆದಿದ್ದಾರೆ ಎಂದು ಸೋಮಣ್ಣ ವಿವರಿಸಿದರು.

    ಬಿಬಿಎಂಪಿ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್, ವಲಯ ಜಂಟಿ ಆಯುಕ್ತ ಲೋಕನಾಥ್, ಕ್ಲಿನಿಕಲ್ ವಿಭಾಗದ ಮುಖ್ಯ ಆರೋಗ್ಯಾಧಿಕಾರಿ ಡಾ.ನಿರ್ಮಲ ಬುಗ್ಗಿ, ವಲಯ ಆರೋಗ್ಯಾಧಿಕಾರಿ ಡಾ. ಮನೋರಂಜನ್ ಹೆಗ್ಡೆ ಮತ್ತಿತರರಿದ್ದರು.

    ಇಬ್ರಿಗೂ ಒಬ್ನೇ ಪತಿ, ಶಿಫ್ಟ್​ನಲ್ಲಿ ಸಂಸಾರ: ವಾರದಲ್ಲಿ 3 ದಿನ ಆ ಪತ್ನಿಗೆ, ಇನ್ನು 3 ದಿನ ಈ ಪತ್ನಿಗೆ; ಭಾನುವಾರ ಮಾತ್ರ ಗಂಡ ಫ್ರೀ!

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts