More

    ಪ್ರತಿಷ್ಠಿತ ವೃತ್ತ ಅಥವಾ ಮೇಲ್ಸೇತುವೆಗೆ ಕವಿ ಡಾ.ಸಿದ್ದಲಿಂಗಯ್ಯ ಹೆಸರಿಡಲು ಮನವಿ

    ಬೆಂಗಳೂರು : ಸಾಮಾಜಿಕ ಸಮಾನತೆಗಾಗಿ ಕಾವ್ಯ, ಸಾಹಿತ್ಯಗಳನ್ನು ರಚಿಸಿ ಪ್ರೇರಣೆ ನೀಡಿ, ಜನಮಾನಸದಲ್ಲಿರುವ ಖ್ಯಾತ ಲೇಖಕ, ಕವಿ ದಿವಂಗತ ಡಾ.ಸಿದ್ದಲಿಂಗಯ್ಯ ಅವರ ಸ್ಮರಣಾರ್ಥ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯ ಪ್ರತಿಷ್ಠಿತ ವೃತ್ತ ಅಥವಾ ಮೇಲ್ಸೇತುವೆಗೆ ಅವರ ನಾಮಕರಣ ಮಾಡುವಂತೆ ಸಮಾಜ ಕಲ್ಯಾಣ ಖಾತೆ ಸಚಿವ ಬಿ.ಶ್ರೀರಾಮುಲು ಮನವಿ ಮಾಡಿದ್ದಾರೆ.

    ಈ ಬಗ್ಗೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರಿಗೆ ಮನವಿ ಪತ್ರ ಸಲ್ಲಿಸಿರುವ ಶ್ರೀರಾಮುಲು, ಸಾಹಿತ್ಯ ಪ್ರೇಮಿಗಳಿಗೆ, ಮುಂದಿನ ಪೀಳಿಗೆಗೆ ಡಾ.ಸಿದ್ದಲಿಂಗಯ್ಯ ಅವರ ಸಿದ್ಧಾಂತ-ಆದರ್ಶಗಳು, ಚಿಂತನೆಗಳು ಪ್ರೇರಣೆ ನೀಡಿ, ಸದಾ ಸ್ಮೃತಿಪಟಲದಲ್ಲಿರುವಂತಹ ಕಾರ್ಯವನ್ನು ಕೈಗೊಳ್ಳಲು ಸಂಬಂಧಿಸಿದ ಅಧಿಕಾರಿಗಳಿಗೆ ನಿರ್ದೇಶನ ನೀಡಬೇಕೆಂದು ಕೋರಿದ್ದಾರೆ.

    ಇದನ್ನೂ ಓದಿ: ಬದುಕಿನ ಪಯಣ ಮುಗಿಸಿದ ಸಂಚಾರಿ ವಿಜಯ್, ಅಂಗಾಂಗ ದಾನಕ್ಕೆ ನಿರ್ಧಾರ

    ಕಾವ್ಯ, ನಾಟಕ, ಪ್ರಬಂಧ, ವಿಮರ್ಶೆ, ಸಂಶೋಧನೆ, ಆತ್ಮಕಥನ ಮುಂತಾದ ಸಾಹಿತ್ಯ ರಚನೆ ಮಾಡಿ ಖ್ಯಾತರಾಗಿದ್ದ ಸಿದ್ಧಲಿಂಗಯ್ಯ ಅವರು, ಎರಡು ಬಾರಿ ವಿಧಾನಪರಿಷತ್ ಸದಸ್ಯರಾಗಿ, ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾಗಿ, ಕನ್ನಡ ಪುಸ್ತಕ ಪ್ರಾಧಿಕಾರದ ಅಧ್ಯಕ್ಷರಾಗಿಯೂ ಅವಿಸ್ಮರಣೀಯವಾಗಿ ಕಾರ್ಯನಿರ್ವಹಿಸಿದ್ದರು. 81ನೇ ಕನ್ನಡ ಸಾಹಿತ್ಯ ಸಮ್ಮೇಳನದ ಅಧ್ಯಕ್ಷರಾಗಿದ್ದರು. ರಾಜ್ಯೋತ್ಸವ ಪ್ರಶಸ್ತಿ, ಡಾ. ಬಿ.ಆರ್.ಅಂಬೇಡ್ಕರ್ ಶತಮಾನೋತ್ಸವ ವಿಶೇಷ ಪ್ರಶಸ್ತಿ, ನಾಡೋಜ ಪ್ರಶಸ್ತಿ, ಕರ್ನಾಟಕ ಸಾಹಿತ್ಯ ಅಕಾಡೆಮಿ ಪ್ರಶಸ್ತಿ, ಡಾ. ಬಾಬು ಜಗಜೀವನರಾಮ್ ಪ್ರಶಸ್ತಿ ಸೇರಿದಂತೆ ಹಲವಾರು ಪ್ರಶಸ್ತಿಗಳಿಗೆ ಭಾಜನರಾಗಿದ್ದರು. ಡಾ.ಸಿದ್ದಲಿಂಗಯ್ಯ ಅವರ ನಿಧನದಿಂದ ಸಾಹಿತ್ಯ ಕ್ಷೇತ್ರಕ್ಕೆ ಮತ್ತು ಇಡೀ ರಾಜ್ಯಕ್ಕೆ ಭರಿಸಲಾರದ ನಷ್ಟ ಉಂಟಾಗಿದೆ. ಅವರ ಸಿದ್ದಾಂತ ಮತ್ತು ಆದರ್ಶಗಳು ಸದಾ ಅನುಕರಣೀಯವಾದವು ಎಂದು ಸಚಿವ ಶ್ರೀರಾಮುಲು ಹೇಳಿದ್ದಾರೆ.

    ಆದಿಶಂಕರಾಚಾರ್ಯರ 12 ಅಡಿ ಪ್ರತಿಮೆ; ಕೆತ್ತನೆ ಮುಗಿಸಿದ ಮೈಸೂರು ಶಿಲ್ಪಿಗಳು

    ಕರೊನಾ ಪರೀಕ್ಷೆ ಮಾಡುವಾಗ ಮೂಗಿನೊಳಗೆ ಮುರಿದ ಸ್ವಾಬ್​ ಸ್ಟಿಕ್! ಇದು ಬಹಳ ನೋವಿನ ಕಥೆ

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts