More

    ಯಶವಂತಪುರ ನಂ.1 ಕ್ಷೇತ್ರವಾಗಿಸುವೆ: ಬಿಜೆಪಿ ಅಭ್ಯರ್ಥಿ ಎಸ್.ಟಿ. ಸೋಮಶೇಖರ್ ಹೇಳಿಕೆ

    ಬೆಂಗಳೂರು: ಯಶವಂತಪುರ ಕ್ಷೇತ್ರದಲ್ಲಿ ರಸ್ತೆ, ಕುಡಿಯುವ ನೀರು, ಒಳಚರಂಡಿ ಸೇರಿ ಮೂಲಸೌಕರ್ಯಕ್ಕೆ ಆದ್ಯತೆ ನೀಡಲಾಗಿದ್ದು, ಅಭಿವೃದ್ಧಿ ಪರ್ವ ಶುರುವಾಗಿದೆ. ಮುಂದಿನ ದಿನಗಳಲ್ಲಿ ಈ ಕ್ಷೇತ್ರ ಅಭಿವೃದ್ಧಿಯಲ್ಲಿ ನಂ. 1 ಆಗಲಿದೆ ಎಂದು ಬಿಜೆಪಿ ಅಭ್ಯರ್ಥಿ ಎಸ್.ಟಿ. ಸೋಮಶೇಖರ್ ಹೇಳಿದ್ದಾರೆ.

    ಅಗರ, ಕಗ್ಗಲಿಪುರ, ತರಳು, ಸೋಮನಹಳ್ಳಿ, ಎಸ್.ಟಿ. ನೆಲಗುಳಿ ಗ್ರಾಪಂ ವ್ಯಾಪ್ತಿಯಲ್ಲಿ ಚುನಾವಣಾ ಪ್ರಚಾರದಲ್ಲಿ ತೊಡಗಿದ್ದ ವೇಳೆ ಮಾತನಾಡಿದರು. 17 ಗ್ರಾಪಂ, 7 ಬಿಬಿಎಂಪಿ ವಾರ್ಡ್‌ಗಳಿರುವ ಈ ಕ್ಷೇತ್ರ ಗ್ರಾಮೀಣ ಮತ್ತು ನಗರ ಪ್ರದೇಶವನ್ನು ಒಳಗೊಂಡಿದೆ. ಶರವೇಗದಲ್ಲಿ ಬೆಳೆಯುತ್ತಿರುವ ಕ್ಷೇತ್ರದಲ್ಲಿ ಈಗಾಗಲೆ ಮೂಲಸೌಕರ್ಯ ಕಲ್ಪಿಸಲಾಗಿದೆ. ಮುಂದಿನ ದಿನಗಳಲ್ಲಿ ಈ ಭಾಗದ ಶಾಲೆ, ಆಸ್ಪತ್ರೆಗಳಿಗೆ ಹೈಟೆಕ್ ಸ್ಪರ್ಶ ನೀಡಲಾಗುವುದು ಎಂದರು.

    ಇದನ್ನೂ ಓದಿ: ಭಾನುವಾರ ನೀಟ್ ಪರೀಕ್ಷೆ ಹಿನ್ನೆಲೆ: ಪ್ರಧಾನಿ ಮೋದಿ ಬೆಂಗಳೂರು ರೋಡ್ ಶೋದಲ್ಲಿ ಮತ್ತೆ ಬದಲಾವಣೆ

    ಕೋವಿಡ್‌ನಿಂದಾಗಿ ಅಭಿವೃದ್ಧಿ ಕಾಮಗಾರಿಗಳಿಗೆ ಕೊಂಚ ಹಿನ್ನಡೆಯಾಯಿತು. ಆದರೆ, ಕ್ಷೇತ್ರದ ಜನತೆಯ ಜೀವ ಉಳಿಸುವುದರ ಜೊತೆಗೆ ಜೀವನ ನಡೆಸಲು ಕೆಲವು ಕಾರ್ಯಕ್ರಮಗಳನ್ನು ಆಯೋಜಿಸಿ ನೆರವು ನೀಡಲಾಗಿದೆ. ಕ್ಷೇತ್ರದಲ್ಲಿ ಕಾನೂನು ಸುವ್ಯವಸ್ಥೆ ಚೆನ್ನಾಗಿದೆ, ಭೂಮಾಫಿಯಾಗೆ ಕಡಿವಾಣ ಹಾಕಲಾಗಿದೆ ಎಂದು ಹೇಳಿದರು.

    ಅಭಿವೃದ್ಧಿ ವಿಚಾರ ಮುಂದಿಟ್ಟುಕೊಂಡು ಮತ ಪ್ರತಿಕ್ರಿಯೆ ವ್ಯಕ್ತವಾಗುತ್ತಿದೆ ಎಂಬುದಕ್ಕೆ ಇಲ್ಲಿ ಸೇರಿರುವ ಜನಸ್ತೋಮವೇ ಸಾಕ್ಷಿ ಎಂದರು. ಪ್ರಧಾನಿ ನರೇಂದ್ರ ಮೋದಿ, ಕೇಂದ್ರ ಗೃಹ ಸಚಿವ ಅಮಿತ್ ಷಾ ಕ್ಷೇತ್ರಕ್ಕೆ ಆಗಮಿಸಿದ್ದಾರೆ. ಯಾರು ಏನೇ ಅಪಪ್ರಚಾರ ಮಾಡಿದರೂ ಕ್ಷೇತ್ರದ ಜನತೆ ನಂಬುವುದಿಲ್ಲ. ಸೋಮಶೇಖರ್ ಏನೆಂಬುದು ಎಲ್ಲರಿಗೂ ಗೊತ್ತಿದೆ. ಅಭಿವೃದ್ಧಿ ಕಾರ್ಯ ನೋಡಿ ಮತ ನೀಡಲಿದ್ದಾರೆ ಎಂದು ಹೇಳಿದರು.

    ಯಶವಂತಪುರ ಕ್ಷೇತ್ರದಲ್ಲಿ ಅಭಿವೃದ್ಧಿ ಪರ್ವ ಶುರುವಾಗಿದೆ; ಎಸ್​.ಟಿ. ಸೋಮಶೇಖರ್​ ವಿಶ್ವಾಸ

    ಭಾನುವಾರ ನೀಟ್ ಪರೀಕ್ಷೆ ಹಿನ್ನೆಲೆ: ಪ್ರಧಾನಿ ಮೋದಿ ಬೆಂಗಳೂರು ರೋಡ್ ಶೋದಲ್ಲಿ ಮತ್ತೆ ಬದಲಾವಣೆ

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts