More

    ವ್ಯಾಪ್ತಿ ಮೀರಿ ಕರ್ತವ್ಯ ನಿರ್ವಹಣೆ ಸಲ್ಲ: ಸಚಿವ ಸುನೀಲ್ ಕುಮಾರ್

    ಕೋಟ: ಕೋಟತಟ್ಟು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕೊರಗ ಕಾಲನಿಯಲ್ಲಿ ಪೊಲೀಸ್ ದೌರ್ಜನ್ಯಕ್ಕೊಳಗಾದ ಕುಟುಂಬವನ್ನು ಭಾನುವಾರ ಇಂಧನ, ಕನ್ನಡ ಸಂಸ್ಕೃತಿ ಇಲಾಖೆ ಸಚಿವ ಸುನೀಲ್ ಕುಮಾರ್ ಭೇಟಿ ಮಾಡಿದರು.
    ಸ್ಥಳೀಯರಿಂದ, ದೌರ್ಜನ್ಯಕ್ಕೊಳಗಾದ ಜನರಿಂದ ಮಾಹಿತಿ ಪಡೆದುಕೊಂಡ ಸಚಿವರು, ಘಟನೆಯನ್ನು ಖಂಡಿಸಿ ಬಡ ಕುಟುಂಬದ ಮೇಲಿನ ಸುಳ್ಳು ಮೊಕದ್ದಮೆ ಹಾಗೂ ಪೊಲೀಸ್ ಇಲಾಖೆಯ ಅನಾಗರಿಕ ರ್ದೌಜನ್ಯದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.
    ಸರ್ಕಾರಿ ಅಧಿಕಾರಿಗಳು ಕರ್ತವ್ಯ ನಿರ್ವಹಿಸುವಾಗ ತಮ್ಮ ವ್ಯಾಪ್ತಿ ಮೀರಿ ವರ್ತಿಸಬಾರದು. ಮೊನ್ನೆಯ ಘಟನೆಯನ್ನು ಸಮರ್ಥಿಸಲು ಸಾಧ್ಯವಿಲ್ಲ. ಜಿಲ್ಲಾಡಳಿತ ಈ ಕುಟುಂಬಕ್ಕೆ ನ್ಯಾಯ ಒದಗಿಸಲಿದೆ ಎಂದರು.
    ಜಿಪಂ ಮಾಜಿ ಅಧ್ಯಕ್ಷ ದಿನಕರಬಾಬು, ಉಡುಪಿ ಜಿಲ್ಲಾ ಪೊಲೀಸ್ ಉಪ ಅಧೀಕ್ಷಕ ಕುಮಾರಚಂದ್ರ, ಡಿವೈಎಸ್‌ಪಿ ಸುಧಾಕರ್ ನಾಯ್ಕ, ಬ್ರಹ್ಮಾವರ ವೃತ್ತ ನಿರೀಕ್ಷಕ ಅನಂತಪದ್ಮನಾಭ, ಕೋಟ ಎಸ್‌ಐ ತಿಮ್ಮೇಶ್, ಬ್ರಹ್ಮಾವರ ತಹಸೀಲ್ದಾರ್ ರಾಜಶೇಖರ್‌ಮೂರ್ತಿ, ಕೋಟ ಕಂದಾಯ ಅಧಿಕಾರಿ ರಾಜು, ಕೋಟ ಗ್ರಾಮಪಂಚಾಯಿತಿ ಉಪಾಧ್ಯಕ್ಷ ವಾಸು ಪೂಜಾರಿ ಹಾಗೂ ಸದಸ್ಯರಾದ ಸತೀಶ್ ಕುಂದರ್, ವಿದ್ಯಾ ಸಾಲಿಯಾನ್, ಪೂಜಾ ಪೂಜಾರಿ, ಪ್ರಮೋದ್ ಹಂದೆ, ಸ್ಥಳೀಯರಾದ ರಂಜಿತ್ ಕುಮಾರ್, ರತ್ನಾಕರ ಬಾರಿಕೆರೆ, ರಮೇಶ್ ಹಂದೆ, ಕೊರಗ ಮುಖಂಡರಾದ ಗಣೇಶ್ ಬಾರ್ಕೂರು, ರಾಜೇಶ್ ಮತ್ತಿತರರು ಉಪಸ್ಥಿತರಿದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts