ಯೋಗ ಶಿಬಿರದಲ್ಲಿ ಸಚಿವ ವೆಂಕಟರಾವ ನಾಡಗೌಡ ಭಾಗಿ

ರಾಯಚೂರು: ವಿಜಯವಾಣಿ, ದಿಗ್ವಿಜಯ ನ್ಯೂಸ್ ಹಾಗೂ ಪತಂಜಲಿ ಯೋಗ ಸಮಿತಿ ಆಶ್ರಯದಲ್ಲಿ ನಡೆಯುತ್ತಿರುವ ಉಚಿತ ಯೋಗ ಶಿಬಿರದಲ್ಲಿ ರಾಯಚೂರು ಜಿಲ್ಲಾ ಉಸ್ತುವಾರಿ ಸಚಿವ ಹಾಗೂ ಪಶು ಮತ್ತು ಮೀನುಗಾರಿಕೆ ಸಚಿವ ವೆಂಕಟರಾವ ನಾಡಗೌಡ ಭಾಗವಹಿಸಿದ್ದರು.

ಜಿಲ್ಲೆಯ ಸಿಂಧನೂರಿನ ಶ್ರೀ ಕನಕದಾಸ ಕಲ್ಯಾಣ ಮಂಟಪದಲ್ಲಿ ನಡೆಯುತ್ತಿರುವ ಯೋಗ ತರಭೇತಿ ಶಿಬಿರದಲ್ಲಿ ಬೆಳಗ್ಗೆ ಆಗಮಿಸಿ ತರಬೇತುದಾರರ ಮಾರ್ಗದರ್ಶನದಲ್ಲಿ ವಿವಿಧ ಯೋಗಾಸನಗಳನ್ನು ಮಾಡಿದರು. ಉತ್ಸಾಹದಿಂದಲೇ ಪಾಲ್ಗೊಂಡ ಸಚಿವರನ್ನು ಕಂಡ ಯೋಗ ಶಿಬಿರಾರ್ಥಿಗಳು ಸಚಿವರ ಈ ಪ್ರಯತ್ನವನ್ನು ಶ್ಲಾಘಿಸಿದರು.

ಯೋಗಾಸನದ ನಂತರ ಮಾತನಾಡಿ, ಯೋಗದಿಂದ ಎಲ್ಲ ಸಮಸ್ಯೆಗಳಿಗೆ ಪರಿಹಾರ ಇದೆ. ನಿತ್ಯ ಒಂದು ಗಂಟೆ ಯೋಗ ಮಾಡಿ, ಆರೋಗ್ಯ ಕಾಪಾಡಿಕೊಳ್ಳಬೇಕು. ಮಾಧ್ಯಮ ಸಹಯೋಗದಲ್ಲಿ ನಡೆಯುತ್ತಿರುವ ಈ ಶಿಬಿರದ ಸದುಪಯೋಗವನ್ನು ಸಾರ್ವಜನಿಕರು ಪಡೆದು ಆರೋಗ್ಯಯುತ ಜೀವನ ನಡೆಸಲು ಸಲಹೆ ನೀಡಿದರು.

ಜೂ. 16 ರಿಂದ 21 ರವರೆಗೆ ಸಿಂಧನೂರಿನ ಕುಷ್ಟಗಿ ರಸ್ತೆಯಲ್ಲಿರುವ ಕನಕದಾಸ ಕಲ್ಯಾಣ ಮಂಟಪದಲ್ಲಿ ವಿಜಯವಾಣಿ, ದಿಗ್ವಿಜಯ ಸಹಯೋಗದಲ್ಲಿ ನಡೆಯುತ್ತಿರುವ ಅಂತಾರಾಷ್ಟ್ರೀಯ ಯೋಗ ದಿನಾಚರಣೆ ಪ್ರಯುಕ್ತ ಹಮ್ಮಿಕೊಂಡಿರುವ ಉಚಿತ ಯೋಗ ತರಬೇತಿ ಶಿಬಿರಕ್ಕೆ ನಗರದ ಜನ ಹಾಗೂ ವಿದ್ಯಾರ್ಥಿಗಳಿಂದ ಉತ್ತಮ ಸ್ಪಂದನೆ ಸಿಗುತ್ತಿದೆ.

ಶಿಬಿರದಲ್ಲಿ ಪತಂಜಲಿ ಯೋಗ ಸಮಿತಿ ಪ್ರಭಾರಿ ಎಂ.ಭಾಸ್ಕರ್, ಎಂ.ದೊಡ್ಡ ಬಸವರಾಜ ಸೇರಿದಂತೆ ಹಲವರು ಭಾಗವಹಿಸಿದ್ದರು.

Leave a Reply

Your email address will not be published. Required fields are marked *