More

    ಸಚಿವ ಜಮೀರ್ ಮೇಲ್ಮನವಿ ಸುಪ್ರೀಂಕೋರ್ಟ್ ನಿರಾಕರಣೆ

    ಬೆಂಗಳೂರು:
    ತಮ್ಮ ಮೇಲಿನ ಅಕ್ರಮ ಆಸ್ತಿ ಗಳಿಕೆ ಪ್ರಕರಣ ರದ್ದುಪಡಿಸಬೇಕು ಎಂದು ಕೋರಿ ಸಚಿವ ಜಮೀರ್ ಅಹ್ಮದ್ ಖಾನ್ ಸಲ್ಲಿಸಿದ್ದ ಮೇಲ್ಮನವಿಯನ್ನು ಸುಪ್ರೀಂಕೋರ್ಟ್ ನಿರಾಕರಿಸಿದ್ದು, ಇದನ್ನು ಹೈಕೋರ್ಟ್‌ನಲ್ಲೇ ಇತ್ಯರ್ಥಪಡಿಸಿಕೊಳ್ಳುವಂತೆ ಸಲಹೆ ನೀಡಿದೆ.
    ತನಿಖೆ ರದ್ದುಪಡಿಸಲು ಕರ್ನಾಟಕ ಹೈಕೋರ್ಟ್ ಹಿಂದೇಟು ಹಾಕಿದ್ದನ್ನು ಪ್ತಶ್ನಿಸಿ ಜಮೀರ್ ಅಹ್ಮದ್ ಸುಪ್ರೀಂಕೋರ್ಟ್‌ಗೆ ಮೇಲ್ಮನವಿ ಸಲ್ಲಿಸಿದ್ದರು.
    ಈ ಮೇಲ್ಮನವಿ ಅರ್ಜಿ ವಿಚಾರಣೆ ನಡೆಸಿದ ನ್ಯಾ.ಸಂಜೀವ್ ಖನ್ನಾ ನೇತೃತ್ವದ ದ್ವಿ ಸದಸ್ಯ ಪೀಠ, ಹೈಕೋರ್ಟ್ ಆದೇಶದಲ್ಲಿ ಮಧ್ಯಪ್ರವೇಶ ಮಾಡಲು ಸಾಧ್ಯವಿಲ್ಲ. ಅಲ್ಲಿಗೇ ಹೋಗಿ ಇತ್ಯರ್ಥ ಮಾಡಿಕೊಳ್ಳಿ ಎಂದು ತಿಳಿಸಿತು. ಕಳೆದ ನವೆಂಬರ್‌ನಲ್ಲಿ ಪ್ರಕರಣದ ರದ್ದಿಗೆ ಹೈಕೋರ್ಟ್ ನಿರಾಕರಿಸಿತ್ತು.
    2022ರಲ್ಲಿ ಜಮೀರ್ ಅಹ್ಮದ್ ಖಾನ್ ನಿವಾಸದ ಮೇಲೆ ಎಸಿಬಿ ದಾಳಿ ಮಾಡಿತ್ತು. ಇಡಿ ನೀಡಿದ್ದ ದಾಖಲೆಗಳ ಆಧಾರದ ಮೇಲೆ ದಾಳಿಯಾಗಿತ್ತು. ಜಮೀರ್ ಆದಾಯದಲ್ಲಿ ಶೇ.2000 ಕ್ಕಿಂತ ಹೆಚ್ಚಿದೆ ಎಂದು ಆರೋಪಿಸಲಾಗಿತ್ತು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts