More

    ಮೈಸೂರಿನ ಡಾ.ಎಚ್.ಸಿ. ಮಹದೇವಪ್ಪ, ಕೆ. ವೆಂಕಟೇಶ್‌ಗೆ ಒಲಿದ ಸಚಿವ ಸ್ಥಾನ

    ಮೈಸೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಸಚಿವ ಸಂಪುಟದಲ್ಲಿ ತಿ.ನರಸೀಪುರ ಕ್ಷೇತ್ರದ ಡಾ.ಎಚ್.ಸಿ. ಮಹದೇವಪ್ಪ ಹಾಗೂ ಪಿರಿಯಾಪಟ್ಟಣ ಕ್ಷೇತ್ರದ ಕೆ. ವೆಂಕಟೇಶ್ ಅವರಿಗೆ ಸಚಿವ ಸ್ಥಾನ ಒಲಿದಿದ್ದು, ಹಿರಿಯ ಶಾಸಕ ತನ್ವೀರ್ ಸೇಠ್‌ಗೆ ಸಚಿವ ಸ್ಥಾನ ಕೈತಪ್ಪಿದೆ.

    ಸಚಿವ ಸ್ಥಾನದ ರೇಸ್‌ನಲ್ಲಿ ಡಾ.ಎಚ್.ಸಿ. ಮಹದೇವಪ್ಪ, ಕೆ. ವೆಂಕಟೇಶ್ ಹಾಗೂ ನರಸಿಂಹರಾಜ ಕ್ಷೇತ್ರದ ತನ್ವೀರ್ ಸೇಠ್ ಕಾಣಿಸಿಕೊ ಂಡಿದ್ದರು. ಸಿದ್ದರಾಮಯ್ಯ ಆಪ್ತ ಬಳಗದಲ್ಲಿ ಗುರುತಿಸಿಕೊಂಡಿರುವ ಮಹದೇವಪ್ಪ ಹಾಗೂ ವೆಂಕಟೇಶ್ ಸಚಿವ ಸ್ಥಾನ ಪಡೆಯುವಲ್ಲಿ ಯಶಸ್ವಿಯಾಗಿದ್ದಾರೆ. ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಬಣದಲ್ಲಿ ಗುರುತಿಸಿಕೊಂಡಿರುವ ತನ್ವೀರ್ ಸೇಠ್ ನಿರಾಶೆ ಅನುಭವಿಸಿ ದ್ದಾರೆ.

    ಉಸ್ತುವಾರಿ ಯಾರು?

    ಖಾತೆ ಹಂಚಿಕೆಯ ಕುತೂಹಲ ಮುಗಿದಿದ್ದು, ಜಿಲ್ಲೆಯ ಉಸ್ತುವಾರಿ ಜವಾಬ್ದಾರಿ ಯಾರಿಗೆ ನೀಡುತ್ತಾರೆ ಎಂಬ ಕುತೂಹಲ ಮೂಡಿ ದೆ. ಕಳೆದ ಬಾರಿ ಸಿದ್ದರಾಮಯ್ಯ ಮುಖ್ಯಮಂತ್ರಿಯಾಗಿದ್ದ ಸಂದರ್ಭ ವಿ.ಶ್ರೀನಿವಾಸ ಪ್ರಸಾದ್ ಹಾಗೂ ಡಾ.ಎಚ್.ಸಿ. ಮಹದೇವಪ್ಪ ಜಿಲ್ಲಾ ಉಸ್ತುವಾರಿ ಸಚಿವ ಸ್ಥಾನದ ಜವಾಬ್ದಾರಿ ನಿಭಾಯಿಸಿದ್ದರು. ವಿ. ಶ್ರೀನಿವಾಸ ಪ್ರಸಾದ್ ಜಿಲ್ಲಾ ಉಸ್ತುವಾರಿ ಸಚಿವರಾಗಿದ್ದ ಸಂದರ್ಭ ಡಾ. ಎಚ್.ಸಿ. ಮಹದೇವಪ್ಪ ಕೊಡಗು ಹಾಗೂ ಹಾಸನ ಜಿಲ್ಲಾ ಉಸ್ತುವಾರಿ ಸಚಿವರಾಗಿ ಕಾರ್ಯನಿರ್ವಹಿಸಿದ್ದರು. ಈ ಬಾರಿ ಮಹದೇವಪ್ಪ ಅಥವಾ ವೆಂಕಟೇಶ್ ಇಬ್ಬರಲ್ಲಿ ಯಾರಿಗೆ ಜಿಲ್ಲಾ ಉಸ್ತುವಾರಿ ಸಚಿವ ಸ್ಥಾನ ಒಲಿಯುತ್ತದೆ ಎಂಬುದು ಕಾದು ನೋಡಬೇ ಕಾಗಿದೆ.

    ಸಿದ್ದರಾಮಯ್ಯ ಪ್ರಥಮ ಬಾರಿಗೆ ಮುಖ್ಯಮಂತ್ರಿಯಾದ ಸಂದರ್ಭ ವೆಂಕಟೇಶ್ ಸಚಿವ ಸ್ಥಾನ ಪಡೆಯಲು ಸಾಕಷ್ಟು ಪ್ರಯತ್ನ ನಡೆಸಿದ್ದರು. ಆ ಸಂದರ್ಭ ಜಿಲ್ಲೆಯವರಾದ ವಿ.ಶ್ರೀನಿವಾಸ ಪ್ರಸಾದ್, ಡಾ.ಎಚ್.ಸಿ. ಮಹದೇವಪ್ಪ ಹಾಗೂ ತನ್ವೀರ್ ಸೇಠ್ ಅವರಿಗೆ ಸಚಿವ ಸ್ಥಾನ ಒಲಿದಿತ್ತು. ವೆಂಕಟೇಶ್ ಅವರನ್ನು ಸಮಾಧಾನ ಪಡಿಸಲು ಆ ಸಂದರ್ಭ ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದ (ಬಿಡಿಎ) ಅಧ್ಯಕ್ಷ ಸ್ಥಾನದ ಜವಾಬ್ದಾರಿ ನೀಡಲಾಗಿತ್ತು.

    ಜಿಲ್ಲೆಯ 11 ಕ್ಷೇತ್ರಗಳ ಪೈಕಿ 8 ಕ್ಷೇತ್ರಗಳಲ್ಲಿ ಕಾಂಗ್ರೆಸ್, 2 ಕ್ಷೇತ್ರದಲ್ಲಿ ಜೆಡಿಎಸ್ ಹಾಗೂ 1 ಕ್ಷೇತ್ರದಲ್ಲಿ ಬಿಜೆಪಿ ಗೆಲುವು ಸಾಧಿಸಿದೆ. ಡಾ.ಎಚ್.ಸಿ. ಮಹದೇವಪ್ಪ, ಕೆ. ವೆಂಕಟೇಶ್ ಹಾಗೂ ತನ್ವೀರ್ ಸೇಠ್ ತಲಾ 6 ಬಾರಿ ಗೆಲುವು ಸಾಧಿಸಿದ್ದಾರೆ. ಎಚ್.ಡಿ. ಕೋಟೆ ಕ್ಷೇತ್ರದ ಅನಿಲ್ ಚಿಕ್ಕಮಾದು 2 ಬಾರಿ ಗೆಲುವು ಸಾಧಿಸಿದ್ದಾರೆ. ಚಾಮರಾಜದ ಕೆ. ಹರೀಶ್ ಗೌಡ, ನಂಜನಗೂಡಿನ ದರ್ಶನ್ ಧ್ರುವನಾರಾಯಣ, ಕೆ.ಆರ್.ನಗರದ ಡಿ. ರವಿಶಂಕರ್ ಪ್ರಥಮ ಬಾರಿಗೆ ಗೆಲುವು ಸಾಧಿಸಿ ವಿಧಾನಸಭೆ ಪ್ರವೇಶಿಸಿದ್ದಾರೆ.

    ಹಿರಿತನದ ಆಧಾರದ ಮೇಲೆ ಸಚಿವ ಸ್ಥಾನ ದೊರೆಯುವ ನಿರೀಕ್ಷೆಯನ್ನು ತನ್ವೀರ್ ಸೇಠ್ ಹೊಂದಿದ್ದರು. ಕೆಲವು ದಿನಗಳ ಹಿಂದೆ ಡಿ.ಕೆ. ಶಿವಕುಮಾರ್ ಅವರ ಪಟ್ಟಿಯಲ್ಲಿ ತನ್ವೀರ್ ಸೇಠ್ ಹೆಸರು ಕಾಣಿಸಿಕೊಂಡಿತ್ತು. ಆದರೆ, ಅಂತಿಮ ಕ್ಷಣದಲ್ಲಿ ಅವರಿಗೆ ಸಚಿವ ಸ್ಥಾನ ಕೈತಪ್ಪಿದೆ. ತನ್ವೀರ್ ಸೇಠ್ ಅವರು ಧರ್ಮಸಿಂಗ್ ಸಂಪುಟದಲ್ಲಿ ಕಾರ್ಮಿಕ ಸಚಿವ ಹಾಗೂ ಕೊಡಗು ಜಿಲ್ಲಾ ಉಸ್ತುವಾರಿ ಸಚಿವರಾಗಿ ಕಾರ್ಯನಿರ್ವಹಿಸಿದ್ದರು. ಸಿದ್ದರಾಮಯ್ಯ ಮೊದಲ ಬಾರಿ ಮುಖ್ಯಮಂತ್ರಿಯಾದ ಸಂದರ್ಭ ತನ್ವೀರ್ ಸೇಠ್ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ, ಅಲ್ಪಸಂಖ್ಯಾತರ ಕಲ್ಯಾಣ ಮತ್ತು ವಕ್ಫ್ ಸಚಿವ ಹಾಗೂ ಕೋಲಾರ ಜಿಲ್ಲಾ ಉಸ್ತುವಾರಿ ಸಚಿವರಾಗಿ ಕಾರ್ಯನಿರ್ವಹಿಸಿದ್ದರು.

    ಸಚಿವ ಸ್ಥಾನಕ್ಕೆ ಪ್ರತಿಭಟನೆ

    ಶಾಸಕ ತನ್ವೀರ್ ಸೇಠ್ ಅವರಿಗೆ ಸಚಿವ ಸ್ಥಾನ ಕೈತಪ್ಪಿದ ಹಿನ್ನೆಲೆಯಲ್ಲಿ ಅವರ ಬೆಂಬಲಿಗರು ಶನಿವಾರ ನಗರದ ಗಾಂಧಿ ಚೌಕದಲ್ಲಿ ಪ್ರತಿಭಟನೆ ನಡೆಸಿದರು. ಸತತ 6 ಬಾರಿ ತನ್ವೀರ್ ಸೇಠ್ ಗೆಲುವು ಸಾಧಿಸಿದ್ದು, ಅವರಿಗೆ ಸಚಿವ ಸ್ಥಾನ ನೀಡಬೇಕು. ಈ ಹಿಂದೆ ಸಚಿವರಾಗಿ ಉತ್ತಮವಾಗಿ ಕಾರ್ಯನಿರ್ವಹಿಸಿದ್ದಾರೆ. ತನ್ವೀರ್ ಸೇಠ್‌ಗೆ ಸಚಿವ ಸ್ಥಾನ ನೀಡದೆ ಹೋದಲ್ಲಿ ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಪಕ್ಷದ ಮೇಲೆ ವ್ಯತಿರಕ್ತ ಪರಿಣಾಮ ಉಂಟಾಗುವ ಸಾಧ್ಯತೆ ಇದೆ ಎಂದು ಬೆಂಬಲಿಗರು ಎಚ್ಚರಿಸಿದ್ದಾರೆ.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts