More

  ಐಚನಹಳ್ಳಿ ಏತನೀರಾವರಿಗೆ ಸಚಿವ ಚಾಲನೆ

  ಕೆ.ಆರ್.ಪೇಟೆ: ಸಣ್ಣ ನೀರಾವರಿ ಮತ್ತು ಅಂತರ್ಜಲ ಅಭಿವೃದ್ಧಿ ಇಲಾಖೆಯಿಂದ ತಾಲೂಕು ಐಚನಹಳ್ಳಿ 1ನೇ ಹಂತದಲ್ಲಿ 46 ಕೆರೆ-ಕಟ್ಟೆಗಳಿಗೆ ನೀರು ತುಂಬಿಸುವ ಏತನೀರಾವರಿ ಯೋಜನೆಗೆ ಭಾನುವಾರ ಜಿಲ್ಲಾ ಉಸ್ತುವಾರಿ ಸಚಿವ ಎನ್.ಚಲುವರಾಯಸ್ವಾಮಿ ಚಾಲನೆ ನೀಡಿದರು.

  ನಂತರ ಮಾತನಾಡಿ, ಈ ಏತನೀರಾವರಿ ಯೋಜನೆಯು ಸುಮಾರು 265 ಕೋಟಿ ರೂ. ಅಂದಾಜು ವೆಚ್ಚದ ಕಾಮಗಾರಿಯಾಗಿದೆ. ಕೆಆರ್‌ಎಸ್ ಜಲಾಶಯದ ಮೇಲ್ಭಾಗದ ಕಟ್ಟೆಹಳ್ಳಿಯ ಸೇತುವೆಯ ಬಳಿ ಹಾಗೂ ಹೇಮಾವತಿ ನದಿ ಬಳಿ ಜಾಕ್‌ವೆಲ್ ಮತ್ತು ಪಂಪ್ ಹೌಸ್ ನಿರ್ಮಿಸಿ ಏತ ನೀರಾವರಿ ಮೂಲಕ ಮೂರು ಹಂತದಲ್ಲಿ 67.76 ಕ್ಯೂಸೆಕ್ ನೀರನ್ನು ಎತ್ತಿ ಬೂಕನಕೆರೆ ಹಾಗೂ ಶೀಳನೆರೆ ಹೋಬಳಿಯ 89 ಕೆರೆ-ಕಟ್ಟೆಗಳ ಪೈಕಿ ಮೊದಲ ಹಂತದಲ್ಲಿ 46 ಕೆರೆ, ಎರಡನೇ ಹಂತದಲ್ಲಿ 22, ಮೂರನೇ ಹಂತದಲ್ಲಿ 21 ಕೆರೆಗೆ ನೀರು ತುಂಬಿಸುವ ಕಾಮಗಾರಿಯು ಮುಗಿದಿದೆ. ಈ ಯೋಜನೆಯಿಂದ ಸುತ್ತಮುತ್ತಲಿನ ಗ್ರಾಮಗಳ ಜನಜಾನುವಾರುಗಳಿಗೆ ನೀರು ಪೂರೈಸುವ ಜತೆಗೆ ಅಂತರ್ಜಲ ಅಭಿವೃದ್ಧಿಗೊಳಿಸುವ ಉದ್ದೇಶ ಹೊಂದಿದೆ ಎಂದು ಸಚಿವರು ಹೇಳಿದರು.

  ಶಾಸಕ ಎಚ್.ಟಿ.ಮಂಜು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಮಾಜಿ ಶಾಸಕ ಕೆ.ಬಿ.ಚಂದ್ರಶೇಖರ್, ಬಿ.ಪ್ರಕಾಶ್, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಐಪನಹಳ್ಳಿ ನಾಗೇಂದ್ರಕುಮಾರ್, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ವಿಶ್ವನಾಥ್, ಟಿಎಪಿಸಿಎಂಎಸ್ ಅಧ್ಯಕ್ಷ ಬಿ.ಎಲ್.ದೇವರಾಜು, ರಾಜ್ಯ ಸಹಕಾರ ಮಾರಾಟ ಮಹಾಮಂಡಳ ನಿರ್ದೇಶಕ ಶೀಳನೆರೆ ಮೋಹನ್, ಟಿಎಪಿಸಿಎಂಎಸ್ ನಿರ್ದೇಶಕ ತೆರ್ನೇನಹಳ್ಳಿ ಬಲದೇವ್, ಪುರಸಭಾ ಸದಸ್ಯ ಕೆ.ಸಿ.ಮಂಜುನಾಥ್, ತಾಪಂ ಮಾಜಿ ಸದಸ್ಯ ಮೋಹನ್, ಕಾಂಗ್ರೆಸ್ ಮುಖಂಡ ಸುರೇಶ್, ಡಿ.ಪ್ರೇಮಕುಮಾರ್ ಇದ್ದರು.

  ಸಿನಿಮಾ

  ಲೈಫ್‌ಸ್ಟೈಲ್

  ಟೆಕ್ನಾಲಜಿ

  Latest Posts