More

    ಇನ್ನೆರಡು ದಿನದಲ್ಲಿ ಖಾತೆ ಹಂಚಿಕೆ: ಕುಂಭಾಶಿಯಲ್ಲಿ ಸಿಎಂ ಬಿಎಸ್‌ವೈ ಹೇಳಿಕೆ

    ಕುಂದಾಪುರ: ವಿಧಾನ ಮಂಡಲ ಅಧಿವೇಶನ ಆರಂಭವಾಗುವ ಹಿನ್ನೆಲೆಯಲ್ಲಿ ನೂತನ ಸಚಿವರಿಗೆ ಇನ್ನೆರಡು ದಿನದಲ್ಲಿ ಖಾತೆ ಹಂಚಿಕೆ ಮಾಡಲಾಗುವುದು. ಕರೊನಾ ಲಾಕ್‌ಡೌನ್, ಆರ್ಥಿಕ ಹಿನ್ನಡೆ ಮತ್ತಿತರ ಕಾರಣಗಳಿಂದ ಇತಿಮಿತಿಯಲ್ಲಿ ಮಾರ್ಚ್ ಮೊದಲ ವಾರದಲ್ಲಿ ಬಜೆಟ್ ಮಂಡನೆ ಮಾಡುತ್ತೇನೆ ಎಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಹೇಳಿದ್ದಾರೆ.

    ಆನೆಗುಡ್ಡೆ ಶ್ರೀ ವಿನಾಯಕ ದೇವಸ್ಥಾನಕ್ಕೆ ಮಂಗಳವಾರ ಭೇಟಿ ನೀಡಿ 1008 ಕಾಯಿ ಗಣಹೋಮದಲ್ಲಿ ಪಾಲ್ಗೊಂಡು ಸುದ್ದಿಗಾರರ ಜತೆ ಮಾತನಾಡಿದರು.

    ಕಳೆದ ಎರಡು ದಿನದಿಂದ ಲೋಕಕಲ್ಯಾಣ ಹಾಗೂ ರಾಜ್ಯದ ಮಳೆ, ಬೆಳೆ ಸಮೃದ್ಧಿಗಾಗಿ ಉಡುಪಿ ಜಿಲ್ಲೆಯಲ್ಲಿ ಧಾರ್ಮಿಕ ಪ್ರವಾಸ ಮಾಡಿದ್ದೇನೆ, ಎಲ್ಲರಿಗೂ ಒಳ್ಳೆಯದಾಗಲಿ. ರಾಜ್ಯಕ್ಕೆ ಸಮೃದ್ಧಿ ಸಿಗಲಿ ಎಂದು ದೇವರಲ್ಲಿ ಪ್ರಾರ್ಥಿಸಿದ್ದೇನೆ. ರಾಜ್ಯ ಬಿಜೆಪಿ ಸರ್ಕಾರ ರಾಜ್ಯದ ಸರ್ವಾಂಗೀಣ ಅಭಿವೃದ್ಧಿಗೆ ಶ್ರಮಿಸುತ್ತಿದೆ. ಹಣಕಾಸಿನ ಇತಿಮಿತಿಯಲ್ಲಿ ಬಜೆಟ್ ಘೋಷಣೆ ಮಾಡಬೇಕಾಗಿದೆ. ರಾಜ್ಯಕ್ಕೆ ಹಾಗೂ ಎಲ್ಲರಿಗೂ ಹಿತವಾಗುವ ಬಜೆಟ್ ಮಂಡನೆ ಮಾಡುತ್ತೇನೆ ಎಂದರು.

    1008 ಕಾಯಿ ಗಣಹೋಮ: ಸಿಎಂ ಸ್ನೇಹಿತ ಬೀಜಾಡಿ ರಾಘವೇಂದ್ರ ರಾವ್ ಹಾಸನ ಅವರು ಲೋಕಕಲ್ಯಾಣಾರ್ಥ ಕೈಗೊಂಡ 1008 ಕಾಯಿ ಗಣಹೋಮದಲ್ಲಿ ಸಿಎಂ ಬಿ.ಎಸ್. ಯಡಿಯೂರಪ್ಪ ಕುಟುಂಬಿಕರ ಜತೆ ಪಾಲ್ಗೊಂಡರು. ಮುಖ್ಯಮಂತ್ರಿ ಅವರನ್ನು ದೇವಸ್ಥಾನದ ಮೊಕ್ತೇಸರ ಶ್ರೀರಮಣ ಉಪಾಧ್ಯಾಯ ಹಾಗೂ ಹಿಂದಿನ ಮೊಕ್ತೇಸರ ಸೂರ್ಯನಾರಾಯಣ ಉಪಾಧ್ಯಾಯ ಬರಮಾಡಿಕೊಂಡರು. ದೇವಸ್ಥಾನ ವತಿಯಿಂದ ಮುಖ್ಯಮಂತ್ರಿಯನ್ನು ಗೌರವಿಸಲಾಯತು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts