More

    ಹೊಟ್ಟೆ ನೋವೆಂದು ಆಸ್ಪತ್ರೆಗೆ ದಾಖಲಾದ ಬಾಲಕಿ ಗಂಡು ಮಗುವಿಗೆ ಜನ್ಮ ಕೊಟ್ಟಳು

    ಚಿಕ್ಕಬಳ್ಳಾಪುರ: ಹೊಟ್ಟೆ ನೋವೆಂದು ಆಸ್ಪತ್ರೆಗೆ ದಾಖಲಾಗಿದ್ದ ಅಪ್ರಾಪ್ತ ವಯಸ್ಕಳೋರ್ವಳು ಗಂಡು ಮಗುವಿಗೆ ಜನ್ಮ ನೀಡಿರುವ ಆಘಾತಕಾರಿ ಘಟನೆ ಚಿಕ್ಕಬಳ್ಳಾಪುರ ಜಿಲ್ಲೆ ಬಾಗೇಪಲ್ಲಿ ತಾಲ್ಲೂಕಿನಲ್ಲಿ ನಡೆದಿದೆ.

    ತುಮಕೂರು ಜಿಲ್ಲೆ ಮಧುಗಿರಿ ತಾಲ್ಲೂಕಿನಲ್ಲಿರುವ ಸಮಾಜ ಕಲ್ಯಾಣ ಇಲಾಖೆ ಹಾಸ್ಟೆಲಿನಲ್ಲಿ ಇದ್ದುಕೊಂಡು ಬಾಲಕಿ 9ನೇ ತರಗತಿ ವ್ಯಾಸಂಗ ಮಾಡುತ್ತಿದ್ದಳು. ಇದೀಗ ಈ ಘಟನೆ ವ್ಯಾಪಕ ಚರ್ಚೆಗೆ ಕಾರಣವಾಗಿದ್ದು, ಪೋಕ್ಸೋ ಕಾಯ್ದೆಯಡಿ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.

    ಇದನ್ನೂ ಓದಿ: ಶ್ರೀರಾಮ ವನವಾಸದಲ್ಲಿ ಮಾಂಸ ಸೇವಿಸಿದ್ದ; ಒಟಿಟಿ ಫ್ಲಾಟ್​ಫಾರ್ಮ್​ ಬಹಿಷ್ಕರಿಸುವಂತೆ ಆಗ್ರಹ

    ಘಟನೆ ಕುರಿತು ಪ್ರತಿಕ್ರಿಯಿಸಿರುವ ಹಿರಿಯ ಪೊಲೀಸ್​ ಅಧಿಕಾರಿಯೊಬ್ಬರು, ಮಧುಗಿರಿಯಲ್ಲಿ ವಿದ್ಯಾಭ್ಯಾಸ ಮಾಡುತ್ತಿದ್ದ ಬಾಲಕಿ ಕಳೆದ ಮೂರು ದಿನಗಳ ಹಿಂದೆ ಊರಿಗೆ ಬಂದು ತನ್ನ ತಂದೆತಾಯಿಗೆ ಹೊಟ್ಟೆನೋವು ಎಂದು ತಿಳಿಸಿದ್ದಾಳೆ. ಕುಡಲೇ ಪೋಷಕರು ಆಕೆಯನ್ನು ಆಸ್ಪತ್ರೆಗೆ ದಾಖಲಿಸಿದ್ದು, ಪರೀಕ್ಷಿಸಿದ ವೈದ್ಯರು ಇದು ಹೊಟ್ಟೆ ನೋವಲ್ಲ ಹೆರಿಗೆ ನೋವೆಂದು ಪೋಷಕರಿಗೆ ತಿಳಿಸಿದ್ದಾರೆ.

    ಇದಾದ ಕೆಲವೇ ಕ್ಷಣಗಳಲ್ಲಿ ಭಾಲಕಿ ಗಂಡು ಮಗುವಿಗೆ ಜನ್ಮ ನೀಡಿದ್ದು, ತಾಯಿ ಹಾಗೂ ಮಗು ಇಬ್ಬರು ಆರೋಗ್ಯವಾಗಿದ್ದಾರೆ. ತಾಯಿ ಮಗುವನ್ನು ಹೆಚ್ಚಿನ ಆರೈಕೆಗಾಗಿ ಜಿಲ್ಲಾಸ್ಪತ್ರಗೆ ರವಾನಿಸಿದ್ದಾರೆ. ಘಟನೆಗೆ ಸಂಬಂಧಿಸಿದಂತೆ ಪೋಕ್ಸೋ ಕಾಯ್ದೆಯಡಿ ಸ್ವಯಂ ದೂರು ದಾಖಲಿಸಿಕೊಂಡಿರುವ ಬಾಗೇಪಲ್ಲಿ ಪೊಲೀಸರು ತನಿಖೆ ಆರಂಭಿಸಿದ್ದಾರೆ.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts