ಪ್ರೀತಿಸಲು ನಿರಾಕರಿಸಿದ್ದಕ್ಕೆ ಹುಡುಗಿ ಸೇರಿದಂತೆ ಮೂವರ ಹತ್ಯೆ; ಆಘಾತಕಾರಿ ವಿಡಿಯೋ ವೈರಲ್

Bihar Murder

ಪಟ್ನಾ: ಇಡೀ ದೇಶವನ್ನೇ ಬೆಚ್ಚಿಬೀಳಿಸಿದ್ದ ಹುಬ್ಬಳ್ಳಿಯ ಅಂಜಲಿ ಅಂಬಿಗೇರ ಹಾಗೂ ನೇಹಾ ಹಿರೇಮಠ ಹತ್ಯೆ ಪ್ರಕರಣ ಮಾಸುವ ಮುನ್ನವೇ ಪ್ರೀತಿಯನ್ನು ನಿರಾಕರಿಸಿದರು ಎಂಬ ಕಾರಣಕ್ಕೆ ಇಬ್ಬರು ಯುವಕರು ಅಪ್ರಾಪ್ತ ವಯಸ್ಕ ಹುಡುಗಿಯರನ್ನು ಹಾಗೂ ಆಕೆಯ ತಂದೆಯನ್ನು ಕೊಂದಿರುವ ಘಟನೆಯೊಂದು ಬಿಹಾರದ ಸರನ್​ನಲ್ಲಿ ನಡೆದಿದೆ.

ಘಟನೆ ಸಂಬಂಧ ಪೊಲೀಸರು ರಸುಲ್​ಪುರ ಮೂಲದ ಸುಧಾಂಶು ಕುಮಾರ್ ಅಲಿಯಾಸ್ ರೋಷನ್ ಮತ್ತು ಅಂಕಿತ್ ಕುಮಾರ್ ಎಂಬಾತನನ್ನು ವಶಕ್ಕೆ ಪಡೆದಿದ್ದಾರೆ. ಘಟನೆಯಲ್ಲಿ ಇಬ್ಬರು ಬಾಲಕಿಯರು ಹಾಗೂ ಅವರ ತಂದೆ ಮೃತಪಟ್ಟಿದ್ದು, ಅವರ ತಾಯಿ ಗಂಭೀರವಾಗಿ ಗಾಯಗೊಂಡಿದ್ದಾರೆ. ತಾಯಿಯ ಹೇಳಿಕೆ ಆಧರಿಸಿ ಆರೋಪಿಗಳನ್ನು ವಶಕ್ಕೆ ಪಡೆಯಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಇದನ್ನೂ ಓದಿ: WCL ಟ್ರೋಫಿ ಗೆದ್ದು ವಿಚಿತ್ರವಾಗಿ ಸಂಭ್ರಮಿಸಿದ ಯುವಿ, ಭಜ್ಜಿ, ರೈನಾ ವಿರುದ್ಧ ದೂರು ದಾಖಲು; ಕಾರಣ ಹೀಗಿದೆ

ಈ ಕುರಿತು ಪ್ರತಿಕ್ರಿಯಿಸಿರುವ ಹಿರಿಯ ಪೊಲೀಸ್​ ಅಧಿಕಾರಿಯೊಬ್ಬರು, ಮಂಗಳವಾರ ರಾತ್ರಿ ಘಟನೆ ನಡೆದಿದ್ದು, ಧನದಿಹ್ ಗ್ರಾಮದ ತಾರಕೇಶ್ವರ್ ಸಿಂಗ್ ಅಲಿಯಾಸ್ ಜಬರ್ ಸಿಂಗ್ ಎಂಬುವವರ ಮನೆಯ ಮೇಲೆ ಇಬ್ಬರು ದಾಳಿ ಮಾಡಿದ್ದಾರೆ ಎಂದು ಪೊಲೀಸ್​ ಕಂಟ್ರೋಲ್​ ರೂಮ್​ಗೆ ಕರೆ ಬಂತು. ಸ್ಥಳಕ್ಕೆ ತೆರಳುವಷ್ಟರಲ್ಲಿ ಆರೋಪಿಗಳಿಬ್ಬರು ಮನೆಯಲ್ಲಿದ್ದವರಿಗೆ ಚಾಕುವಿನಿಂದ ಇರಿದು ಕೊಲೆ ಮಾಡಿದ್ದರು. ಗಂಭೀರವಾಗಿ ಗಾಯಗೊಂಡಿದ್ದ ಮಹಿಳೆಯನ್ನು ಕೂಡಲೇ ಆಸ್ಪತ್ರೆಗೆ ದಾಖಲಿಸಲಾಯಿತು.

ಮೃತರ ಪೈಕಿ ಓರ್ವಳನ್ನು ಆರೋಪಿ ಸುಧಾಂಶು ಕುಮಾರ್​ ಪ್ರೀತಿಸುತ್ತಿದ್ದ ಎಂದು ತನಿಖೆ ವೇಳೆ ಬೆಳಕಿಗೆ ಬಂದಿದೆ. ಪ್ರೀತಿ ನಿರಾಕರಿಸಿದರು ಎಂಬ ಕಾರಣಕ್ಕೆ ತ್ರಿವಳಿ ಕೊಲೆ ನಡೆದಿದೆ ಎಂದು ತಿಳಿದು ಬಂದಿದೆ. ಕೃತ್ಯಕ್ಕೆ ಬಳಸಲಾಗಿದ್ದ ಆಯುಧವನ್ನು ವಶಪಡಿಸಿಕೊಳ್ಳಲಾಗಿದ್ದು, ಗಾಯಾಳು ಮಹಿಳೆ ಹೇಳಿಕೆ ಆಧರಿಸಿ ಆರೋಪಿಗಳನ್ನು ವಶಕ್ಕೆ ಪಡೆಯಲಾಗಿದೆ. ವಿಚಾರಣೆ ನಡೆಯುತ್ತಿದ್ದು, ಶೀಘ್ರದಲ್ಲೇ ನ್ಯಾಯಾಲಯಕ್ಕೆ ಚಾರ್ಜ್​ಶೀಟ್​ ಸಲ್ಲಿಸಲಾಗುವುದು ಎಂದು ಹಿರಿಯ ಪೊಲೀಸ್​ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

Share This Article

A. P. J. Abdul Kalam ಅವರ ಈ ಟ್ರಿಕ್ಸ್​​ಗಳನ್ನು ವಿದ್ಯಾರ್ಥಿಗಳು ಓದುವಾಗ ಮಿಸ್​ ಮಾಡ್ದೆ ಅನುಸರಿಸಿ

ಮಿಸೈಲ್ ಮ್ಯಾನ್ ಎಂದೇ ಖ್ಯಾತರಾಗಿರುವ ಭಾರತದ ಮಹಾನ್ ವಿಜ್ಞಾನಿ ಹಾಗೂ ಮಾಜಿ ರಾಷ್ಟ್ರಪತಿ ಡಾ.ಎಪಿಜೆ ಅಬ್ದುಲ್…

ಹೊಳೆಯುವ ಮುತ್ತಿನಂತಹ ಹಲ್ಲುಗಳಿಗೆ ಈ ಟಿಪ್ಸ್ ಫಾಲೋ ಮಾಡಿ..! Home Remedies

ಬೆಂಗಳೂರು: ಪ್ರತಿಯೊಬ್ಬರೂ ತಮ್ಮ ಹಲ್ಲುಗಳು ಮುತ್ತಿನಂತೆ ಬಿಳಿ ಮತ್ತು ಹೊಳೆಯುವಂತೆ ಕಾಣಬೇಕೆಂದು ಬಯಸುತ್ತಾರೆ. ಏಕೆಂದರೆ.. ನಮ್ಮ…

ಮೊದಲು ತಲೆಗೆ ನೀರು ಹಾಕ್ತೀರಾ? ಸ್ನಾನ ಮಾಡುವ ಸರಿಯಾದ ವಿಧಾನ ಯಾವುದು? ಇಲ್ಲಿದೆ ಉಪಯುಕ್ತ ಮಾಹಿತಿ | Bathing

Bathing: ದೈಹಿಕ ನೈರ್ಮಲ್ಯ ಮತ್ತು ಆರೋಗ್ಯವನ್ನು ಕಾಪಾಡಿಕೊಳ್ಳಲು ಪ್ರತಿದಿನ ಸ್ನಾನ ಮಾಡಲು ಆರೋಗ್ಯ ತಜ್ಞರು ಶಿಫಾರಸು…