More

    ಪಶ್ಚಿಮ ಬಂಗಾಳದ ಹೂಗ್ಲಿಯಲ್ಲಿ ಬಾಂಬ್ ಸ್ಪೋಟ: 7 ವರ್ಷದ ಬಾಲಕ ಸಾವು

    ಕೋಲ್ಕತ್ತಾ: ಬಾಂಬ್ ಸ್ಪೋಟಗೊಂಡು ಏಳು ವರ್ಷದ ಬಾಲಕ ಮೃತಪಟ್ಟಿದ್ದು, ಇಬ್ಬರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಪಶ್ಚಿಮ ಬಂಗಾಳದ ಹೂಗ್ಲಿ ಜಿಲ್ಲೆಯಲ್ಲಿ ನಡೆದಿದೆ.

    ಇದನ್ನೂ ಓದಿ: ಕರ್ನಾಲ್ ಉಪಚುನಾವಣೆ ನಾಮಪತ್ರ ಸಲ್ಲಿಸಿದ ಹರಿಯಾಣ ನಯಾಬ್ ಸಿಂಗ್ ಸೈನಿ!

    ಹೂಗ್ಲಿ ಜಿಲ್ಲೆಯ ಪಾಂಡುವಾದಲ್ಲಿ ಕೊಳದ ಬಳಿ ಮಕ್ಕಳು ಆಟವಾಡುತ್ತಿದ್ದಾಗ ಸ್ಫೋಟ ಸಂಭವಿಸಿದೆ. ಗಾಯಳುಗಳನ್ನು ಸ್ಥಳೀಯ ಆರೋಗ್ಯ ಆಸ್ಪತ್ರೆಯಲ್ಲಿ ಮಾಡಿದ್ದಾರೆ. ಈ ಸಂಬಂಧ ಹೂಗ್ಲಿ ಗ್ರಾಮಾಂತರ ಪೊಲೀಸರು ಹೆಚ್ಚಿನ ತನಿಖೆ ನಡೆಸುತ್ತಿದ್ದಾರೆ.

    ಪಶ್ಚಿಮ ಬಂಗಾಳದ ಹೂಗ್ಲಿಯಲ್ಲಿ ಬಾಂಬ್ ಸ್ಪೋಟ: 7 ವರ್ಷದ ಬಾಲಕ ಸಾವು

    ಘಟನೆ ವಿವರ: ಪಾಂಡುವಾ ನೇತಾಜಿಪಲ್ಲಿ ಕಾಲೋನಿಯ ಕೊಳದ ಪಕ್ಕದಲ್ಲಿ ಮಕ್ಕಳು ಆಟವಾಡುತ್ತಿದ್ದ ಸಂದರ್ಭ ಸ್ಫೋಟ ಸಂಭವಿಸಿದೆ. ಏಕಾಏಕಿ ಆ ಪ್ರದೇಶದಲ್ಲಿ ಭಾರೀ ಶಬ್ದ ಕೇಳಿಬಂದಿದೆ. ತಕ್ಷಣವೇ ಸ್ಥಳೀಯರು ಘಟನಾ ಸ್ಥಳಕ್ಕೆ ಧಾವಿಸಿ ನೋಡಿದಾಗ ಮಕ್ಕಳು ಪ್ರಜ್ಞಾಹೀನ ಸ್ಥಿತಿಯಲ್ಲಿರುವುದು ಗಮನಿಸಿದ್ದಾರೆ. ಬಾಂಬ್ ಸ್ಫೋಟದಲ್ಲಿ ಮೃತಪಟ್ಟ ಬಾಲಕನನ್ನು ರಾಜ್ ಬಿಸ್ವಾಸ್ ಎಂದು ಗುರುತಿಸಲಾಗಿದ್ದು, ರೂಪಮ್ ಬಲ್ಲವ್ (13) ಮತ್ತು ಸೌರವ್ ಚೌಧರಿ (8) ಘಟನೆಯಲ್ಲಿ ಗಂಭೀರ ಗಾಯಗೊಂಡಿದ್ದಾರೆ.

    ಸ್ಥಳೀಯ ಸಂಸದೆ ಲಾಕೆಟ್​ ಚಟರ್ಜಿ ಬಾಂಬ್​ ಸ್ಫೋಟದಲ್ಲಿ ಟಿಎಂಸಿ ಕೈವಾಡವಿದೆ ಎಂದು ಆರೋಪಿಸಿದ್ದಾರೆ. ಪಾಂಡುವಾದಲ್ಲಿ ಟಿಎಂಸಿ ನಾಯಕ ಅಭಿಷೇಕ್​ ಬ್ಯಾನರ್ಜಿ ಸಮಾವೇಶಕ್ಕೂ ಮುನ್ನ ಜನರಲ್ಲಿ ಭಯ ಹುಟ್ಟಿಸಲು ಈ ಸ್ಫೋಟ ನಡೆಸಲಾಗಿದೆ ಎಂದು ಅವರು ಟೀಕೆ ಮಾಡಿದ್ದಾರೆ.

    ಪಶ್ಚಿಮ ಬಂಗಾಳದಲ್ಲಿ ಮಂಗಳವಾರ ಲೋಕಸಭೆ ಚುನಾವಣೆಯ ಮೂರನೇ ಹಂತದ ಮತದಾನಕ್ಕೆ ಒಂದು ದಿನ ಮುಂಚಿತವಾಗಿ ಈ ಘಟನೆ ನಡೆದಿದೆ. ರಾಜ್ಯದಲ್ಲಿ ನಾಲ್ಕು ಕ್ಷೇತ್ರಗಳಿಗೆ ಚುನಾವಣೆ ನಡೆಯಲಿದೆ.

    ವಾರಣಾಸಿಯಿಂದ ಪ್ರಧಾನಿ ಮೋದಿ ನಾಮಪತ್ರ ಸಲ್ಲಿಕೆಗೆ ಮುಹೂರ್ತ ಫಿಕ್ಸ್!

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts