More

    ಅಪ್ರಾಪ್ತೆಗೆ ಲೈಂಗಿಕ ಕಿರುಕುಳ, ಯುವಕನಿಗೆ 20 ವರ್ಷ ಜೈಲು

    ಶಿವಮೊಗ್ಗ: ಹೊಳೆಹೊನ್ನೂರು ಠಾಣಾ ವ್ಯಾಪ್ತಿಯಲ್ಲಿ ಅಪ್ರಾಪ್ತೆಗೆ ಲೈಂಗಿಕ ದೌರ್ಜನ್ಯವೆಸಗಿದ್ದ ಯುವಕನಿಗೆ ಶುಕ್ರವಾರ ಶಿವಮೊಗ್ಗದ ಹೆಚ್ಚುವರಿ ಜಿಲ್ಲಾ ಮತ್ತು ಪ್ರಧಾನ ನ್ಯಾಯಾಲಯದ ಎಫ್‌ಟಿಎಸ್‌ಸಿ(ತ್ವರಿತ ವಿಶೇಷ ನ್ಯಾಯಾಲಯ)-2(ಪೋಕ್ಸೊ)ರ ನ್ಯಾಯಾಧೀಶರು 20 ವರ್ಷ ಕಠಿಣ ಕಾರಾಗೃಹ ಶಿಕ್ಷೆ ಮತ್ತು ಒಂದು ಲಕ್ಷ ರೂ. ದಂಡ ವಿಧಿಸಿದ್ದಾರೆ.
    19 ವರ್ಷದ ಯುವಕ ಶಿಕ್ಷೆಗೆ ಒಳಗಾದವ. ಈತ 6 ವರ್ಷದ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ್ದ. ಈ ಬಗ್ಗೆ ಹೊಳೆಹೊನ್ನೂರು ಠಾಣೆಯ ಇನ್‌ಸ್ಪೆಕ್ಟರ್ ಲಕ್ಷ್ಮೀಪತಿ ಅವರು ಆರೋಪಿಯನ್ನು ಬಂಧಿಸಿ ನ್ಯಾಯಾಲಯಕ್ಕೆ ದೋಷಾರೋಪಣ ಪಟ್ಟಿ ಸಲ್ಲಿಸಿದ್ದರು.
    ಈ ಬಗ್ಗೆ ವಿಚಾರಣೆ ನಡೆಸಿದ ನ್ಯಾಯಾಧೀಶ ಜೆ.ಎಸ್.ಮೋಹನ್ ಅವರು ಆರೋಪ ಸಾಬೀತಾದ ಹಿನ್ನಲೆಯಲ್ಲಿ ಯುವಕನಿಗೆ ಕಠಿಣ ಕಾರಾಗೃಹ ಶಿಕ್ಷೆ ಮತ್ತು ದಂಡ ವಿಧಿಸಿದರು. ದಂಡ ಪಾವತಿಸಲು ವಿಫಲನಾದರೆ 6 ತಿಂಗಳು ಹೆಚ್ಚುವರಿ ಕಾರಾಗೃಹ ಶಿಕ್ಷೆ ನೀಡಿ ಆದೇಶಿಸಿದ್ದಾರೆ. ಸರ್ಕಾರದ ಪರವಾಗಿ ಸರ್ಕಾರಿ ಅಭಿಯೋಜಕ ಹರಿಪ್ರಸಾದ್ ಅವರು ವಾದ ಮಂಡಿಸಿದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts