More

    ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ, ವ್ಯಕ್ತಿಗೆ 20 ವರ್ಷ ಜೈಲು

    ಶಿವಮೊಗ್ಗ: ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯವೆಸಗಿದ್ದ ವ್ಯಕ್ತಿಗೆ ಶಿವಮೊಗ್ಗದ ಹೆಚ್ಚುವರಿ ಜಿಲ್ಲಾ ಮತ್ತು ಪ್ರಧಾನ ನ್ಯಾಯಾಲಯದ ಎಫ್‌ಟಿಎಸ್‌ಸಿ(ತ್ವರಿತ ವಿಶೇಷ ನ್ಯಾಯಾಲಯ)-2(ಪೋಕ್ಸೊ)ರ ನ್ಯಾಯಾಧೀಶರು 20 ವರ್ಷ ಕಠಿಣ ಕಾರಾಗೃಹ ಶಿಕ್ಷೆ ಮತ್ತು ಒಂದು ಲಕ್ಷ ರೂ. ದಂಡ ವಿಧಿಸಿ ಆದೇಶಿಸಿದ್ದಾರೆ.
    ಭದ್ರಾವತಿ ತಾಲೂಕಿನ ರಾಘವೇಂದ್ರ (27) ಶಿಕ್ಷೆಗೆ ಒಳಗಾದ ವ್ಯಕ್ತಿ. ಈತ 3 ವರ್ಷ ನಾಲ್ಕು ತಿಂಗಳ ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯವೆಸಗಿದ್ದ. ಈ ಬಗ್ಗೆ ಸಂತ್ರಸ್ತೆ ತಾಯಿ ಭದ್ರಾವತಿ ಗ್ರಾಮಾಂತರ ಠಾಣೆ ಪೊಲೀಸರಿಗೆ ದೂರು ನೀಡಿದ್ದರು. ರಾಘವೇಂದ್ರನನ್ನು ಬಂಧಿಸಿದ್ದ ಭದ್ರಾವತಿ ವೃತ್ತ ನಿರೀಕ್ಷಕ ಇ.ಒ.ಮಂಜುನಾಥ ನ್ಯಾಯಾಲಯಕ್ಕೆ ದೋಷಾರೋಪಣಾ ಪಟ್ಟಿ ಸಲ್ಲಿಸಿದ್ದರು.
    ಸೋಮವಾರ ಪ್ರಕರಣದ ವಿಚಾರಣೆ ನಡೆಸಿದ ನ್ಯಾಯಾಧೀಶ ಜೆ.ಎಸ್.ಮೋಹನ್ ಅವರು ರಾಘವೇಂದ್ರನ ಮೇಲೆ ಪೋಕ್ಸೋದಡಿಯಲ್ಲಿ ಆರೋಪ ದೃಢಪಟ್ಟ ಹಿನ್ನೆಲೆಯಲ್ಲಿ 20 ವರ್ಷ ಜೈಲು, ಒಂದು ಲಕ್ಷ ರೂ. ದಂಡ ವಿಧಿಸಿದ್ದಾರೆ. ದಂಡ ಪಾವತಿಸಲು ವಿಫಲನಾದರೆ ಹೆಚ್ಚುವರಿಯಾಗಿ 6 ತಿಂಗಳ ಸಾದಾ ಕಾರಾಗೃಹ ಶಿಕ್ಷೆ ನೀಡಿ ಆದೇಶಿಸಿದ್ದಾರೆ. ಸರ್ಕಾರದ ಪರವಾಗಿ ಸರ್ಕಾರಿ ಅಭಿಯೋಜಕ ಹರಿಪ್ರಸಾದ್ ವಾದ ಮಂಡಿಸಿದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts