More

    ಮುಂಬೈನಲ್ಲಿ ರಾಮ ಯಾತ್ರೆ ಮೇಲೆ ದಾಳಿ ನಡೆದ ಮರು ದಿನವೇ ಮೀರಾ,ಮೊಹಮ್ಮದ್ ರಸ್ತೆಯ 40 ಕಟ್ಟಡ ನೆಲಸಮ!

    ಮುಂಬೈ: ಆಯೋಧ್ಯೆ ರಾಮ ಮಂದಿರ ಲೋಕಾರ್ಪಣೆ ಹಾಗೂ ಬಾಲರಾಮದೇವರ ಪ್ರಾಣಪ್ರತಿಷ್ಠೆ ನಡೆದ ಜ.22ರಂದು ಇಲ್ಲಿನ ಮೀರಾ ರಸ್ತೆಯಲ್ಲಿ ಸಾಗುತ್ತಿದ್ದ ಶ್ರೀರಾಮ ಶೋಭಯಾತ್ರೆ ಮೇಲೆ ಮುಸ್ಲಿಂರು ಭೀಕರ ದಾಳಿ ನಡೆಸಿದ ಹಿನ್ನೆಲೆಯಲ್ಲಿ ಮರುದಿನವೇ ಕಾರ್ಯಪ್ರವೃತ್ತಗೊಂಡ ಸರ್ಕಾರ 12ಕ್ಕೂ ಹೆಚ್ಚು ದುಷ್ಕರ್ಮಿಗಳನ್ನು ಬಂಧಿಸಿದ್ದು, ಇದೀಗ ಮೊಹಮ್ಮದ್ ಅಲಿ ರಸ್ತೆಯ 40ಕ್ಕೂ ಹೆಚ್ಚು ಅಕ್ರಮ ಕಟ್ಟಡಗಳನ್ನು ಮಹಾನಗರಪಾಲಿಕೆ ನೆಲಸಮಗೊಳಿಸಿದೆ.

    ಇದನ್ನೂ ಓದಿ: ‘ಬಿಜೆಪಿ ಪ್ರಣಾಳಿಕೆಗೆ ಸಲಹೆ ನೀಡಿ..’ಯುವಜನತೆಗೆ ಪ್ರಧಾನಿ ಮೋದಿ ಸಲಹೆ

    ಮೀರಾ ರಸ್ತೆಯಲ್ಲಿ ಶ್ರೀರಾಮ ಶೋಭಯಾತ್ರೆ ಮೇಲೆ ನಡೆದ ಭೀಕರ ದಾಳಿಯಲ್ಲಿ ಬಂಧಿಸಲ್ಪಟ್ಟ ಆರೋಪಿಗಳ ವಿಚಾರಣೆ ನಡೆಯುತ್ತಿದೆ. ಈ ವೇಳೆ ಆರೋಪಿಗಳು ಪೂರ್ವನಿಯೋಜಿತವಾಗಿ ದಾಳಿಗೆ ಸಜ್ಜಾಗಿರುವ ಮಾಹಿತಿಗಳು ಬಹರಂಗವಾಗಿದೆ. ಮೀರಾ ರಸ್ತೆ ಹಾಗೂ ಮೊಹಮ್ಮದ್ ಅಲಿ ರಸ್ತೆಯ ಮುಸ್ಲಿಮರ ಗುಂಪು ಈ ದಾಳಿಯಲ್ಲಿ ಪಾಲ್ಗೊಂಡ ಮಾಹಿತಿ ಬಹಿರಂಗವಾಗಿದೆ. ಹೀಗಾಗಿ ಸರ್ಕಾರ ಮತ್ತು ಮಹಾನಗರಪಾಲಿಕೆ ಕ್ಷಿಪ್ರ ಕಾರ್ಯಾಚರಣೆ ನಡೆಸಿ ಮೀರಾ ರಸ್ತೆ ಮತ್ತು ಮೊಹಮ್ಮದ್ ಅಲಿ ರಸ್ತೆಯಲ್ಲಿ ಬುಲ್ಡೋಜರ್ ಬಳಸಿ ಅಕ್ರಮ ಕಟ್ಟಡಗಳನ್ನು ದ್ವಂಸಗೊಳಿಸಲಾಗಿದೆ.

    ಮೊಹಮ್ಮದ್ ಅಲಿ ರಸ್ತೆಯಲ್ಲಿ ಪಾದಾಚಾರಿ ಮಾರ್ಗ ಒತ್ತುವರಿ ಮಾಡಿ ಕಟ್ಟಡ, ಅಂಗಡಿ ಮುಂಗಟ್ಟು ಕಟ್ಟಲಾಗಿತ್ತು. ಹೀಗಾಗಿ ಅಕ್ರಮವಾಗಿ ಕಟ್ಟಿರುವ 40ಕ್ಕೂ ಹೆಚ್ಚು ಕಟ್ಟಡಗಳನ್ನು ನೆಲಸಮಗೊಳಿಸಲಾಗಿದೆ. ಅಕ್ರಮ ಕಟ್ಟಡಗಳ ತೆರವಿಗೆ ಡಿಸೆಂಬರ್‌ ಆರಂಭದಿಂದಲೇ ಮುನ್ಸಿಪಲ್ ಪ್ರಯತ್ನ ನಡೆಸುತ್ತಿತ್ತು. ಎಲ್ಲಾ ಅಕ್ರಮ ಕಟ್ಟಡ ಮಾಲೀಕರಿಗೆ, ಅಂಗಡಿ ಮುಂಗಟ್ಟುಗಳಿಗೆ ನೋಟಿಸ್ ನೀಡಲಾಗಿದೆ. ಇದರಲ್ಲಿ ಧರ್ಮವನ್ನು ತರುವ ಅಗತ್ಯವಿಲ್ಲ ಎಂದು ಮುನ್ಸಿಪಲ್ ಕಾರ್ಪೋರೇಶನ್ ಸ್ಪಷ್ಟಪಡಿಸಿದೆ.

    ಮುನ್ಸಿಪಲ್ ಕಾರ್ಪೋರೇಶನ್ ಹಾಗೂ ಮಹಾರಾಷ್ಟ್ರ ಸರ್ಕಾರದ ನಡೆಯನ್ನು ವಿಪಕ್ಷಗಳು ತೀವ್ರವಾಗಿ ಖಂಡಿಸಿದೆ. ಬಲ್ಡೋಜರ್ ಕ್ರಮದಲ್ಲಿ ಸರ್ಕಾರ ಹಿತಾಸಕ್ತಿ ಎದ್ದುಕಾಣುತ್ತಿದೆ. ಅಲ್ಪಸಂಖ್ಯಾತ ಸಮುದಾಯ ಟಾರ್ಗೆಟ್ ಮಾಡಲಾಗಿದೆ ಎಂದು ಕಾಂಗ್ರೆಸ್ ವಕ್ತಾರ ಅತುಲ್ ಲೊಂಧೆ ಹೇಳಿದ್ದಾರೆ.
    ಕಾನೂನಿನಂತೆ ನೋಟಿಸ್ ನೀಡಿ ಇಂತಿಷ್ಟು ಸಮಯ ನೀಡಬೇಕು. ಕಟ್ಟಡ ಮಾಲೀಕರಿಗೆ ಕಾನೂನು ಅವಕಾಶಗಳನ್ನು ಬಳಸಿಕೊಳ್ಳುವ ಹಕ್ಕಿದೆ.ಆದರೆ ಸರ್ಕಾರ ಇದ್ಯಾವುದನ್ನು ಪರಿಗಣಿಸದೆ ದಾಳಿ ಮಾಡಿದೆ ಎಂದು ಅವರು ಆರೋಪಿಸಿದ್ದಾರೆ.

    ‘ನನಗೆ ಹಿಂದಿ ಗೊತ್ತಿಲ್ಲ’: ತಮಿಳುನಾಡು ಜಡ್ಜ್

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts