More

    ರಾಜ್ಯ ಸರ್ಕಾರದಿಂದ ಎಸ್ಸಿ ಅನುದಾನ ದುರ್ಬಳಕೆ

    ಚಿಕ್ಕಮಗಳೂರು: ರಾಜ್ಯಸರ್ಕಾರ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಮೀಸಲು ಅನುದಾನವನ್ನು ದುರ್ಬಳಕೆ ಮಾಡುತ್ತಿದೆ ಎಂದು ಆರೋಪಿಸಿ ಬಿಜೆಪಿ ಎಸ್‌ಸಿ ಮೋರ್ಚಾ ಕಾರ್ಯಕರ್ತರು ಶುಕ್ರವಾರ ನಗರದ ಆಜಾದ್ ಪಾರ್ಕ್ ವೃತ್ತದಲ್ಲಿ ಪ್ರತಿಭಟನೆ ನಡೆಸಿ ರಾಜ್ಯ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.

    ಬಿಜೆಪಿ ಕಚೇರಿಯಿಂದ ಆಜಾದ್ ಪಾರ್ಕ್ ವೃತ್ತದವರೆಗೂ ಪ್ರತಿಭಟನಾ ಮೆರವಣಿಗೆ ನಡೆಸಿದ ಕಾರ್ಯಕರ್ತರು ಆಜಾದ್ ಪಾರ್ಕ್ ವೃತ್ತದಲ್ಲಿ ರಾಜ್ಯ ಸರ್ಕಾರದ ವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು.
    ಈ ವೇಳೆ ಮಾತನಾಡಿದ ಬಿಜೆಪಿ ಎಸ್‌ಸಿ ಮೋರ್ಚಾ ಜಿಲ್ಲಾಧ್ಯಕ್ಷ ಕೆ.ಪಿ.ವೆಂಕಟೇಶ್ ಮಾತನಾಡಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಾವು ಅಹಿಂದ ಎಂದು ಭಾಷಣ ಮಾಡುತ್ತಾರೆ. ಆದರೆ ಪರಿಶಿಷ್ಟರಿಗೆ ಮೀಸಲಿರುವ ಅನುದಾನ ದುರ್ಬಳಕೆ ಮಾಡಿಕೊಳ್ಳುವ ಮೂಲಕ ಪರಿಶಿಷ್ಟರ ಏಳಿಗೆಗೆ ಪೆಟ್ಟು ನೀಡುತ್ತಿದ್ದಾರೆ. ರಾಜ್ಯ ಸರ್ಕಾರ ದಲಿತ ವಿರೋಧಿ ನೀತಿ ಅನುಸರಿಸುತ್ತಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.
    ಕಾಂಗ್ರೆಸ್ ಸರ್ಕಾರ ದಲಿತರ ಹೆಸರಿನಲ್ಲಿ ಅಧಿಕಾರಕ್ಕೆ ಬಂದಿದೆ. ಆದರೆ ಅಧಿಕಾರಕ್ಕೆ ಬಂದ ಬಳಿಕ ದಲಿತ ವಿರೋಧಿ ನೀತಿಯನ್ನು ನಿರಂತರವಾಗಿ ಅನುಸರಿಸುತ್ತಿದೆ. ಪರಿಶಿಷ್ಟ ಜಾತಿ ಮತ್ತು ಪಂಗಡದ ಸಮುದಾಯಗಳ ವಿವಿಧ ಇಲಾಖೆಗಳ ಎಸ್‌ಸಿಪಿ, ಮತ್ತು ಟಿಎಸ್‌ಪಿ ಅನುದಾನ ೧೧ ಸಾವಿರ ಕೋಟಿ ರೂಪಾಯಿಯನ್ನು ಗ್ಯಾರಂಟಿ ಯೋಜನೆಗಳಿಗೆ ಬಳಕೆ ಮಾಡಿಕೊಳ್ಳುವ ಮೂಲಕ ದಲಿತರಿಗೆ ಅನ್ಯಾಯ ಮಾಡಲಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.
    ಬಿಜೆಪಿ ಜಿಲ್ಲಾ ವಕ್ತಾರ ಟಿ.ರಾಜಶೇಖರ್ ಮಾತನಾಡಿ, ದಲಿತ ವಿರೋಧಿ ನಿಲುವು ಹೊಂದಿರುವ ಕಾಂಗ್ರೆಸ್ ತಳ ಸಮುದಾಯಗಳಿಗೆ ನಿರಂತರವಾಗಿ ಅನ್ಯಾಯ ಮಾಡುತ್ತಾ ಬಂದಿದೆ. ಈಗ ೧೧ ಸಾವಿರ ಕೋಟಿ ರೂಪಾಯಿ ಮೀಸಲು ಹಣವನ್ನು ಬೇರೆ ಕಾರ್ಯಕ್ರಮಗಳಿಗೆ ಬಳಕೆ ಮಾಡಿಕೊಂಡಿದೆ. ಇದು ಸರಿಯಲ್ಲ ಎಂದು ದೂರಿದರು.
    ಸರ್ಕಾರ ಕೂಡಲೇ ದಲಿತರ ಮೀಸಲು ಅನುದಾನವನ್ನು ವಾಪಸ್ ನೀಡಬೇಕು. ಇಲ್ಲವಾದಲ್ಲಿ ರಾಜ್ಯಾದ್ಯಂತ ತೀವ್ರಸ್ವರೂಪದ ಪ್ರತಿಭಟನೆ ನಡೆಸಲಾಗುವುದುರ ಎಂದು ಎಚ್ಚರಿಕೆ ನೀಡಿದರು.
    ಪ್ರತಿಭಟನೆಯಲ್ಲಿ ಬಿಜೆಪಿ ಮುಖಂಡರಾದ ಪುಷ್ಪರಾಜ್, ಈಶ್ವರಹಳ್ಳಿ ಮಹೇಶ್, ಹಿರೇಮಗಳೂರು ಪುಟ್ಟಸ್ವಾಮಿ, ದಿನೇಶ್, ಯುವಮೋರ್ಚಾ ಜಿಲ್ಲಾ ಘಟಕದ ಅಧ್ಯಕ್ಷ ಸಂತೋಷ್ ಕೋಟ್ಯಾನ್, ದಿನೇಶ್ ಮತ್ತಿತರರಿದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts