ನಾಯಿ ಬಾಲಕ್ಕೆ ಪಟಾಕಿ ಕಟ್ಟಿ ಸಿಡಿಸಿದ ಕಿಡಿಗೇಡಿ; ದುಷ್ಕೃತ್ಯದ Video Viral

Viral Video
Published on

ಮುಂಬೈ: ದೇಶಾದ್ಯಂತ ಬೆಳಕಿನ ಹಬ್ಬ ದೀಪಾವಳಿಯನ್ನು ಸಂಭ್ರಮ ಸಡಗರದಿಂದ ಆಚರಿಸಲಾಗುತ್ತಿದ್ದು, ಜನರು ಲಕ್ಷ್ಮೀ ಪೂಜೆ ಮಾಡಿ ಪಟಾಕಿ ಸಿಡಿಸಿ ಸಿಹಿ ಹಂಚಿ ಸಂಭ್ರಮಿಸುತ್ತಿದ್ದಾರೆ. ಆದರೆ, ಸಂಭ್ರಮದ ನಡುವೆಯೇ ದುಷ್ಕರ್ಮಿಗಳ ಕುಕೃತ್ಯದ ವಿಡಿಯೋ ಒಂದು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್​ ಆಗಿದ್ದು (Video Viral), ವ್ಯಾಪಕ ಆಕ್ರೋಶಕ್ಕೆ ಗುರಿಯಾಗಿದೆ.

ವೈರಲ್​ ಆಗಿರುವ ವಿಡಿಯೋ ನೋಡುವುದಾದರೆ ನಾಯಿಯ ಬಾಲ ಒಂದಕ್ಕೆ ಯುವಕನೋರ್ವ ಪಟಾಕಿ ಕಟ್ಟಿ ಅದಕ್ಕೆ ಬೆಂಕಿ ಹಚ್ಚುತ್ತಿದ್ದು, ಪಟಾಕಿ ಸಿಡಿಯುತ್ತಿದ್ದಂತೆ ನಾಯಿ ಓಡುತ್ತಿರುವುದನ್ನು ನೋಡಬಹುದಾಗಿದೆ. ಯುವಕರು ಅದನ್ನು ನೋಡಿ ಜೋರಾಗಿ ಕೇಕೆ ಹಾಕುತ್ತಿರುವುದನ್ನು ವೈರಲ್​ ಆಗಿರುವ ವಿಡಿಯೋದಲ್ಲಿ ಕಾಣಬಹುದಾಗಿದೆ. ಈ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್​ ಆಗಿದೆ.

ವಿಡಿಯೋ ವೈರಲ್​ ಆಗುತ್ತಿದ್ದಂತೆ ಅನೇಕರು ಕಿಡಿಕಾರಿದ್ದು, ಪೆಟಾ ಸಂಸ್ಥೆ ಕೂಡ ಪ್ರತಿಕ್ರಿಯಿಸಿದೆ. ನಮೂದಿಸಲಾಗಿರುವ ತುರ್ತು ಸಂಖ್ಯೆಗೆ ಎಲ್ಲಾ ಮಾಹಿತಿಯನ್ನು ಹಂಚಿಕೊಳ್ಳಿ ಎಂದು ಪ್ರತಿಕ್ರಿಯಿಸಿದೆ. ಅನೇಕರು ಯುವಕರ ನಡೆಯನ್ನು ಖಂಡಿಸಿದ್ದು, ಅವರ ವಿರುದ್ಧ ಪೊಲೀಸ್​ ಕ್ರಮಕ್ಕೆ ಆಗ್ರಹಿಸಿದ್ದಾರೆ. ಮೂಕ ಜೀವಿಯ ಮೇಲೆ ಈ ರೀತಿಯ ದುಷ್ಕೃತ್ಯ ಸಹಿಸಲಾರದು ಎಂದು ಕಮೆಂಟ್​ ಮಾಡಿ ಕಿಡಿಕಾರಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net