ಕೊಲ್ಲಾಪುರ: ದೇಶಾದ್ಯಂತ ಬಣ್ಣಗಳ ಹಬ್ಬ ಹೋಳಿ ಸಂಭ್ರಮ ಮನೆ ಮಾಡಿದ್ದು, ಜನರು ಬಣ್ಣಗಳಲ್ಲಿ ಮಿಂದೇಳುತ್ತಿದ್ದಾರೆ. ಇದೆಲ್ಲದರ ನಡುವೆ ಮರಾಠಿ ಪುಂಡರು ಮತ್ತೊಮ್ಮೆ ಬಾಲ ಬಿಚ್ಚಿದ್ದು, ರಾಜ್ಯದ ಬಸ್ಗಳ (KSRTC Bus) ಮೇಲೆ ಕಲ್ಲು ಹಾಗೂ ಬಾಟಲಿಗಳನ್ನು ತೂರಿರುವ ಘಟನೆ ಬೆಳಕಿಗೆ ಬಂದಿದ್ದು, ಮತ್ತೊಮ್ಮೆ ವಿವಾದ ಭುಗಿಲೇಳುವ ಸಾಧ್ಯತೆ ಇದೆ.

ಮಹಾರಾಷ್ಟ್ರದ ಕೊಲ್ಲಾಪುರ ಜಿಲ್ಲೆಯ ಇಚಲಕರಂಜಿಯಲ್ಲಿ ಈ ಘಟನೆ ನಡೆದಿದ್ದು, ರಾಜ್ಯ ರಸ್ತೆ ಸಾರಿಗೆ ಸಂಸ್ಥೆಗೆ (KSRTC) ಸೇರಿದ್ದ ಬಸ್ ಮೇಲೆ ಮರಾಠಿ ಪುಂಡರು ಕಲ್ಲು ಹಾಗೂ ಬಾಟಲಿಗಳಿಂದ ದಾಳಿ ಮಾಡಿದ್ದಾರೆ.
ಚಿಕ್ಕೋಡಿ ಮಾರ್ಗವಾಗಿ ಕೊಲ್ಲಾಪುರ ಜಿಲ್ಲೆಯ ಇಚಲಕರಂಜಿಗೆ ತೆರಳಿದ್ದ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ ಬಸ್ (KSRTC) ಮೇಲೆ 20ಕ್ಕೂ ಅಧಿಕ ಜನರ ಗುಂಪು ಕಲ್ಲು ಹಾಗೂ ಗಾಜಿನ ಬಾಟಲಿಗಳನ್ನು ಎಸೆದಿದೆ. ಇದರಿಂದ ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ ವಾಹನದ ಗಾಜು ಪುಡಿಯಾಗಿದೆ. ಅದೃಷ್ಟವಷಾತ್ ಪ್ರಯಾಣಿಕರಿಗೆ ಯಾವುದೇ ಗಾಯಗಳಾಗಿಲ್ಲ ಎಂದು ತಿಳಿದು ಬಂದಿದೆ.
ಘಟನೆಯ ಕುರಿತು ಮಾತನಾಡಿರುವ ಬೆಳಗಾವಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ. ಭೀಮಾಶಂಕರ ಗುಳೇದ, ಇದು ಕನ್ನಡ – ಮರಾಠಿ ಭಾಷಾ ವಿಚಾರವಾಗಿ ನಡೆದ ಗಲಾಟೆಯಲ್ಲ. ಇಚಲಕರಂಜಿಯಲ್ಲಿ ಬಣ್ಣದಾಟ ಆಡುತ್ತಿದ್ದವರೇ ಮಸಿ ಹಾಗೂ ಬೂದಿ ತುಂಬಿದ ಬಾಟಲಿಗಳನ್ನು ಎಸೆದಿದ್ದಾರೆ. ಎಲ್ಲಿಯೂ ಕಲ್ಲು ತೂರಾಟ ನಡೆದಿಲ್ಲ. ಇನ್ನು, ಘಟನೆಗೆ ಸಂಬಂದಿಸಿದಂತೆ ಇಚಲಕಾರಂಜಿನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, 20 ಜನರನ್ನು ಅಲ್ಲಿನ ಪೊಲೀಸರು ಬಂಧಿಸಿದ್ದಾರೆ ಎಂದು ತಿಳಿಸಿದ್ದಾರೆ.
ಗಾಯಗೊಂಡ ಬಳಿಕ ಫಸ್ಟ್ ಏಡ್ ಪಡೆಯಲು ಸೀದಾ ಮೆಡಿಕಲ್ ಸ್ಟೋರ್ಗೆ ಎಂಟ್ರಿ ಕೊಟ್ಟ ಮಂಗ; ವಿಡಿಯೋ ವೈರಲ್