More

    ಬಾಂಗ್ಲಾದೇಶ ಚುನಾವಣೆ; ಮತಗಟ್ಟೆ, ರೈಲಿಗೆ ಬೆಂಕಿ ಹಚ್ಚಿದ ದುಷ್ಕರ್ಮಿಗಳು

    ಢಾಕಾ: ಬಾಂಗ್ಲಾದೇಶದಲ್ಲಿ ಭಾನುವಾರ (ನಾಳೆ ) ನಡೆಯಲಿರುವ ಸಾರ್ವತ್ರಿಕ ಚುನಾವಣೆ ನಡೆಯಲಿದೆ. ಪಾರದರ್ಶಕ, ಮುಕ್ತ, ಶಾಂತಿಯುತ ಮತ್ತು ನಿಷ್ಪಕ್ಷಪಾತ ಚುನಾವಣೆಗಳನ್ನು ಜರುಗಿಸಲು ಅಗತ್ಯ ಸಿದ್ಧತೆಗಳನ್ನು ಮಾಡಿಕೊಳ್ಳಲಾಗಿದೆ.

    ಇದರ ಬೆನ್ನೆಲ್ಲೇ ಮತ ಗಟ್ಟೆಗಳಿಗೆ ಮತ್ತು ಐದು ಶಾಲೆಗಳಿಗೆ ಅನಾಮಿಕರು ಬೆಂಕಿ ಹಚ್ಚಿದ್ದಾರೆ ಇದರಿಂದ ಸ್ಥಳದಲ್ಲಿ ಬಿಗುವಿನ ವಾತಾವರಣ ನಿರ್ಮಾಣವಾಗಿದೆ. ಢಾಕಾ ಪ್ರದೇಶದ ಸಮೀಪ ಮತ್ತು ಘಾಜಿಪುರದಲ್ಲಿ ಈ ಘಟನೆ ಸಂಭವಿಸಿದೆ.

    ಮತ ಚಲಾಯಿಸದಂತೆ ಜನರಲ್ಲಿ ಭೀತಿ ಹುಟ್ಟಿಸುವ ಸಲುವಾಗಿ ದುಷ್ಕರ್ಮಿಗಳು ಈ ಕೃತ್ಯ ಎಸಗಿದ್ದಾರೆ. ಆದರೆ ಮತದಾರರು ಆತಂಕ ಪಡುವ ಅಗತ್ಯವಿಲ್ಲ. ಅನಾಹುತ ನಡೆಯದಂತೆ ಎಚ್ಚರವಹಿಸುವುದಾಗಿ ಪೊಲೀಸ್​ ಉನ್ನತ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

    ಇದನ್ನೂ ಓದಿ: ಸರ್ಕಾರಿ ಬಸ್‌ಗಳ ಮಧ್ಯೆ ಮುಖಾಮುಖಿ ಡಿಕ್ಕಿ; ಇಬ್ಬರ ಸಾವು, ಹಲವರು ಗಂಭೀರ

    ಢಾಕಾದ ಗೋಪಿಬಾಗ್​ ಪ್ರದೇಶದಲ್ಲಿ ಬೆನಾಪೋಲ್​ ಎಕ್ಸ್​​ಪ್ರೆಸ್ ರೈಲಿನ ನಾಲ್ಕು ಬೋಗಿಗಳಿಗೆ ದುಷ್ಕರ್ಮಿಗಳು ಬೆಂಕಿದ ಪರಿಣಾಮ ನಾಲ್ಕು ಮಂದಿ ಮೃತಪಟ್ಟಿದ್ದಾರೆ. ಹಲವರು ತೀವ್ರವಾಗಿ ಗಾಯಗೊಂಡಿದ್ದಾರೆ. ಈ ರೈಲಿನಲ್ಲಿದ್ದ ಹಲವರು ಭಾರತದಿಂದ ಬಾಂಗ್ಲಾದೇಶಕ್ಕೆ ಮರಳುತ್ತಿದ್ದರು ಅಧಿಕಾರಿಗಳು ತಿಳಿಸಿದ್ದಾರೆ.

    ಭಾನುವಾರ ನಡೆಯಲಿರುವ ಸಾರ್ವತ್ರಿಕ ಚುನಾವಣೆಯಲ್ಲಿ 27 ವಿಪಕ್ಷಗಳಿಂದ 1500ಕ್ಕೂ ಹೆಚ್ಚು ಅಭ್ಯರ್ಥಿಗಳು ಮತ್ತು 436 ಸ್ವತಂತ್ರ ಅಭ್ಯರ್ಥಿಗಳು ಚುನಾವಣೆಯಲ್ಲಿ ಸ್ಪರ್ಧಿಸಿದ್ದಾರೆ. ಬಿಗಿ ಭದ್ರತೆಯಲ್ಲಿ ನಡೆಯುತ್ತಿರುವ 12ನೇ ಸಾರ್ವತ್ರಿಕ ಚುನಾವಣೆಯ ಮೇಲ್ವಿಚಾರಣೆಯನ್ನು ಭಾರತದ ಮೂವರು ಸೇರಿ 100ಕ್ಕೂ ಹೆಚ್ಚು ವಿದೇಶಿಗರನ್ನು ವೀಕ್ಷಣೆಯನ್ನು ನೋಡಿಕೊಳ್ಳಲಿದ್ದಾರೆ.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts