ಮಂಗಳೂರಿನ ಈಶಿಕಾ ಶೆಟ್ಟಿಗೆ ಮಿಸ್ ಟೀನ್ ಗ್ಲೋಬಲ್ ವರ್ಲ್ಡ್ ಪ್ರಶಸ್ತಿ

bala
Published on

ಮಂಗಳೂರು: ದೆಹಲಿಯ ಟಾಲಕಟೋರ ಸ್ಟೇಡಿಯಂನಲ್ಲಿ ನಡೆದ ಮಿಸ್ಸಸ್-ಮಿಸ್ಟರ್ ಮತ್ತು ಮಿಸ್ ಹಾಗೂ ಮಿಸ್ ಟೀನ್ ಗ್ಲೋಬಲ್ ವರ್ಲ್ಡ್ ಸೌಂದರ್ಯ ಸ್ಪರ್ಧೆಯಲ್ಲಿ ಮಂಗಳೂರಿನ ಈಶಿಕಾ ಶೆಟ್ಟಿ ‘ಮಿಸ್ ಟೀನ್ ಗ್ಲೋಬಲ್ ವರ್ಲ್ಡ್ ಇಂಡಿಯಾ ಓಶಿಯಾನ 2024’ ಪ್ರಶಸ್ತಿಯನ್ನು ಪಡೆದುಕೊಂಡಿದ್ದಾರೆ ಎಂದು ನಟ ಸಾಯಿಕೃಷ್ಣ ಕುಡ್ಲ ತಿಳಿಸಿದರು.

ಸೋಮವಾರ ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದ ಅವರು, ಗ್ಲೋಬಲ್ ಇಂಡಿಯಾ ಎಂಟರ್‌ಟೈನ್‌ಮೆಂಟ್ ಪ್ರೊಡಕ್ಷನ್ ಮತ್ತು ಅಲಿ ಶರ್ಮಾ ವತಿಯಿಂದ ಸ್ಪರ್ಧೆ ಏರ್ಪಡಿಸಲಾಗಿತ್ತು. ಸ್ಪರ್ಧೆಯಲ್ಲಿ ದೇಶದ ವಿವಿಧ ರಾಜ್ಯದ 65 ಮಂದಿ ಭಾಗವಹಿಸಿದ್ದರು ಅದರಲ್ಲಿ ತುಳುನಾಡಿನ ಈಶಿಕಾ ಗೆದ್ದಿರುವುದು ನಮ್ಮೆಲ್ಲರಿಗೂ ಹೆಮ್ಮೆಯ ಸಂಗತಿ. ಕಾವೂರಿನ ಶಿವನಗರದ ನಿವಾಸಿ, ಪೊಲೀಸ್ ಇಲಾಖೆಯಲ್ಲಿ ಎಎಸ್‌ಐ ಆಗಿರುವ ಶರತ್ ಕುಮಾರ್ ಶೆಟ್ಟಿ ಹಾಗೂ ಶ್ವೇತಾ ಶೆಟ್ಟಿ ದಂಪತಿಗಳ ಪುತ್ರಿಯಾಗಿದ್ದಾರೆ ಎಂದರು.

ಸೌಂದರ್ಯ ಸ್ಪರ್ಧೆಯಲ್ಲಿ ವಿಜೇತೆ ಈಶಿಕಾ ಶೆಟ್ಟಿ ಮಾತನಾಡಿ, ಚಿಕ್ಕಂದಿನಿಂದಲೇ ಸಾಂಸ್ಕೃತಿಕ ಕಾರ್ಯಕ್ರಮ, ನೃತ್ಯ, ನಟನೆ ಬಗ್ಗೆ ಆಸಕ್ತಿಯಿತ್ತು. ಇದ್ದರಿಂದಾಗಿ ಸೌಂದರ್ಯ ಸ್ಪರ್ಧೆಯಲ್ಲಿ ಭಾಗವಹಿಸಿ ಪ್ರಶಸ್ತಿ ಪಡೆಯುವಂತಾಗಿದೆ ಎಂದರು.

ಪೊಲೀಸ್ ಇಲಾಖೆಯಲ್ಲಿ ಎಎಸ್‌ಐ ಶರತ್ ಕುಮಾರ್ ಶೆಟ್ಟಿ, ಶ್ವೇತಾ ಶರತ್ ಶೆಟ್ಟಿ, ರವಿಕಲಾ ಶೆಟ್ಟಿ ಉಪಸ್ಥಿತರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net