25.9 C
Bengaluru
Wednesday, January 22, 2020

VIDEO| 2019ನೇ ಸಾಲಿನ ವಿಶ್ವಸುಂದರಿ ಕಿರೀಟ ಮುಡಿಗೇರಿಸಿಕೊಂಡ ಜಮೈಕಾ ಬೆಡಗಿ: ಭಾರತದ ಸುಮನ್​ ರಾವ್​ 2ನೇ ರನ್ನರ್​ ಅಪ್​!

Latest News

ತಾಪಂ ಆಡಳಿತ ಶೀಘ್ರ ಕಾರ್ಯಾರಂಭ

ಅಜ್ಜಂಪುರ: ತಾಪಂ ಆಡಳಿತ ಕಾರ್ಯ ಶೀಘ್ರ ಆರಂಭಿಸಲಾಗುವುದು. ಇದಕ್ಕೆ ಪೂರಕವಾಗಿ ಅಜ್ಜಂಪುರ ವ್ಯಾಪ್ತಿಯ ತಾಲೂಕು ಪಂಚಾಯಿತಿ ಸದಸ್ಯರನ್ನು ತರೀಕೆರೆಯಿಂದ ಪ್ರತ್ಯೇಕಿಸುವ ಕಾರ್ಯ ಪ್ರಗತಿಯಲ್ಲಿದೆ...

ಪ್ರಮುಖ ಸ್ಥಳಗಳಲ್ಲಿ ಪೊಲೀಸ್ ಬಿಗಿ ಭದ್ರತೆ

ಚಿಕ್ಕಮಗಳೂರು: ಮಂಗಳೂರಿನಲ್ಲಿ ಬಾಂಬ್ ಪತ್ತೆಯಾದ ಘಟನೆ ಹಿನ್ನೆಲೆಯಲ್ಲಿ ಪ್ರಮುಖ ಧಾರ್ವಿುಕ ಕ್ಷೇತ್ರಗಳಾದ ಶೃಂಗೇರಿ, ಹೊರನಾಡು, ಬಾಬಾಬುಡನ್​ಗಿರಿ, ಮುಳ್ಳಯ್ಯನಗಿರಿ, ಭದ್ರಾ ಅಣೆಕಟ್ಟೆ ಪ್ರದೇಶದಲ್ಲಿ ಪೊಲೀಸ್...

ದೊರೆತ ಉದ್ಯೋಗದಲ್ಲೇ ನಿಷ್ಠೆ ತೋರಿ: ಉದ್ಯೋಗ ಮೇಳದಲ್ಲಿ ಅಭ್ಯರ್ಥಿಗಳಿಗೆ ಶಾಸಕ ಎಸ್.ವಿ ರಾಮಚಂದ್ರ ಸಲಹೆ

ಜಗಳೂರು: ಸರ್ಕಾರಿ ಕೆಲಸಕ್ಕೆ ಅಲಂಬಿತರಾಗದೇ ಸಿಕ್ಕ ಉದ್ಯೋಗವನ್ನು ನಿಷ್ಠೆಯಿಂದ ಮಾಡಿದರೆ ಮುಂದೆ ಅವಕಾಶದ ಬಾಗಿಲುಗಳು ತೆರೆಯುತ್ತವೆ ಎಂದು ಶಾಸಕ ಎಸ್.ವಿ. ರಾಮಚಂದ್ರ ಹೇಳಿದರು. ಇಲ್ಲಿನ...

ಕೋತಿ ಹಾವಳಿಗೆ ಹಣ್ಣಿನ ಗಿಡ ಮದ್ದು

ಚಿಕ್ಕಮಗಳೂರು: ಕಡೂರಿನ ಹಲವೆಡೆ ತಲೆದೋರಿರುವ ಮಂಗಗಳ ಹಾವಳಿ ತಡೆಗೆ ಗ್ರಾಮಗಳ ಹೊರಭಾಗದಲ್ಲಿ ಹಣ್ಣಿನ ಸಸಿಗಳನ್ನು ನೆಟ್ಟು ಬೆಳೆಸುವ ಮೂಲಕ ಅವುಗಳನ್ನು ಆಕರ್ಷಿಸಬಹುದು. ಈ...

ಕರೋನಾ ವೈರಸ್​ ಪತ್ತೆ ಮಾಡಲು ಕೇರಳದ ವಿಮಾನ ನಿಲ್ದಾಣಗಳಲ್ಲಿ ಸ್ಕ್ರೀನಿಂಗ್​ ಕೇಂದ್ರಗಳ ಸ್ಥಾಪನೆ

ತಿರುವನಂತಪುರ: ಕರೋನಾ ವೈರಸ್​ ಹರಡುತ್ತಿರುವ ಹಿನ್ನೆಲೆಯಲ್ಲಿ ಕೇಂದ್ರದ ಸಲಹೆ ಮೇರೆಗೆ ಕೇರಳದ ವಿಮಾನ ನಿಲ್ದಾಣಗಳಲ್ಲಿ ವೈರಸ್​ ಪತ್ತೆ ಮಾಡುವ ಸ್ಕ್ರೀನಿಂಗ್​ ಕೇಂದ್ರಗಳನ್ನು ಸ್ಥಾಪಿಸಲಾಗಿದೆ...

ಲಂಡನ್​: ಡಿಸೆಂಬರ್​ 14ರಂದು ಲಂಡನ್​ನಲ್ಲಿ ನಡೆದ 2019ನೇ ಸಾಲಿನ ವಿಶ್ವಸುಂದರಿ ಸೌಂದರ್ಯ ಸ್ಪರ್ಧೆಯಲ್ಲಿ ಜಮೈಕಾದ 23 ವರ್ಷದ ಟೋನಿ ಅನ್​ ಸಿಂಗ್ ಅವರನ್ನು ವಿಜೇತೆ ಎಂದು ಘೋಷಿಸಲಾಗಿದೆ.

2018ರ ವಿಜೇತೆ ಭಾರತದ ಮಾನುಷಿ ಚಿಲ್ಲರ್​ ಅವರಿಂದ ವಿಶ್ವಸುಂದರಿ ಕಿರೀಟವನ್ನು ಅನ್​ ಸಿಂಗ್ ಮುಡಿಗೇರಿಸಿಕೊಂಡರು. ಫ್ರಾನ್ಸ್​ನ ಒಫೆಲೆ ಮೆಜಿನೋ ಮತ್ತು ಭಾರತದ ಸುಮನ್​ ರಾವ್​ ಕ್ರಮವಾಗಿ ಮೊದಲು ಮತ್ತು ಎರಡನೇ ರನ್ನರ್ ​ಅಪ್​ ಆಗಿ ಹೊರಹೊಮ್ಮಿದರು.

ಮಿಸ್​ ವರ್ಲ್ಡ್​ ವೆಬ್​ಸೈಟ್​ ಪ್ರಕಾರ ವಿಶ್ವಸುಂದರಿ ಅನ್​ ಸಿಂಗ್​ ಅಮೆರಿಕದ ಫ್ಲೋರಿಡಾ ರಾಜ್ಯ ವಿಶ್ವವಿದ್ಯಾಲಯದ ಮನೋವಿಜ್ಞಾನ ವಿದ್ಯಾರ್ಥಿನಿಯಾಗಿದ್ದಾರೆ. ವೈದ್ಯೆಳಾಗುವ ಬಯಕೆಯನ್ನು ಹೊಂದಿರುವ ಅನ್​ ಸಿಂಗ್ ಈ ಹಿಂದೆ ವಿಶ್ವವಿದ್ಯಾಲಯದಲ್ಲಿ ಕೆರೆಬಿಯನ್​ ವಿದ್ಯಾರ್ಥಿ ಸಂಘದ ಅಧ್ಯಕ್ಷೆಯಾಗಿದ್ದರು ಎಂಬುದನ್ನು ವೆಬ್​ಸೈಟ್​ ತಿಳಿಸಿದೆ.

ವಿಶ್ವಸುಂದರಿ ಕಿರೀಟ ಮುಡಿಗೇರಿಸಿಕೊಂಡ ಜಮೈಕಾದ ನಾಲ್ಕನೇ ಸುಂದರಿ ಎಂಬ ಖ್ಯಾತಿಗೆ ಅನ್​ ಸಿಂಗ್ ಪಾತ್ರರಾಗಿದ್ದಾರೆ. ಹಾಡನ್ನು ಎಂಜಾಯ್​ ಮಾಡುವುದು, ಅಡುಗೆ, ಸೆಲ್ಫಿ ವಿಡಿಯೋ ಮಾಡುವುದು, ಹಾಡುವುದು ಅವರ ನೆಚ್ಚಿನ ಹವ್ಯಾಸಗಳಾಗಿವೆ. ತಮ್ಮ ಕನಸನ್ನು ನನಸು ಮಾಡಿದ ಎಲ್ಲಾ ಶ್ರೇಯಸ್ಸನ್ನು ಅನ್​ ಸಿಂಗ್​ ಅವರು ತಮ್ಮ ತಾಯಿಗೆ ನೀಡಿದ್ದಾರೆ.

ಇನ್ನು ಎರಡನೇ ರನ್ನರ್​ ಅಪ್​ ಭಾರತ ಸುಮನ್​ ರಾವ್(20)​ ವಿಚಾರಕ್ಕೆ ಬರುವುದಾದರೆ, ಇವರು ರಾಜಸ್ಥಾನ ಮೂಲದವರು. ಈಗಾಗಲೇ ಜೂನ್​ನಲ್ಲಿ ನಡೆದ ಮಿಸ್​ ಇಂಡಿಯಾ 2019 ಕಿರೀಟವನ್ನು ಸುಮನ್​ ಮುಡಿಗೇರಿಸಿಕೊಂಡಿದ್ದಾರೆ. ನಟಿಯಾಗುವ ಆಸೆಯನ್ನು ಹೊಂದಿರುವ ಸುಮನ್​ ಅದಕ್ಕಾಗಿ ಭಾರಿ ತಯಾರಿಯನ್ನು ನಡೆಸುತ್ತಿದ್ದಾರೆ. ಮಾಡೆಲಿಂಗ್​ ಕ್ಷೇತ್ರದಲ್ಲೂ ಬಿಜಿಯಾಗಿದ್ದಾರೆ.

ಈ ಬಾರಿಯ ವಿಶ್ವಸುಂದರಿ ಸ್ಪರ್ಧೆ ಲಂಡನ್​ ನಡೆಯಿತು. ಐವರು ಸ್ಪರ್ಧಿಗಳು ಕೊನೆಯ ಪ್ರಶ್ನೋತ್ತರ ಸುತ್ತಿಗೆ ಆಯ್ಕೆಯಾಗಿದ್ದರು. ಈ ವೇಳೆ ಬ್ರಿಟೀಷ್​ ಬ್ರಾಡ್​ಕಾಸ್ಟರ್​ ಪಿಯರ್ಸ್​ ಮಾರ್ಗನ್​ ಅವರು ಪ್ರಮುಖ ಜಡ್ಜ್​ ಆಗಿ ಆಗಮಿಸಿದ್ದರು. 2019ನೇ ವಿಶ್ವಸುಂದರಿ ಸ್ಪರ್ಧೆಯು 69ನೇ ಆವೃತಿಯಾಗಿದ್ದು, ಇದರಲ್ಲಿ 120 ದೇಶದ ಸ್ಪರ್ಧಿಗಳು ಭಾಗವಹಿಸಿದ್ದರು. ನವೆಂಬರ್​ 20ರಂದು ಲಂಡನ್​ನಲ್ಲಿ ಉದ್ಘಾಟನಾ ಕಾರ್ಯಕ್ರಮ ಅದ್ಧೂರಿಯಾಗಿ ನಡೆದಿತ್ತು. ಅನೇಕ ಸ್ಪರ್ಧೆಗಳ ಬಳಿಕ ಅಂತಿಮ ಹಂತಕ್ಕೆ 10 ಸ್ಪರ್ಧಿಗಳನ್ನು ಫೈನಲ್​ಗೆ ಆಯ್ಕೆ ಮಾಡಲಾಗಿತ್ತು. ಕೊನೆಯಲ್ಲಿ ಜಮೈಕಾ ಟೋನಿ ಅನ್​ ಸಿಂಗ್​ ವಿಶ್ವಸುಂದರಿಯಾಗಿ ಹೊರಹೊಮ್ಮಿದರು.

2018ನೇ ವಿಶ್ವ ಸುಂದರಿ ಸ್ಪರ್ಧೆಯು ಡಿಸೆಂಬರ್​ 8ರಂದು ಚೀನಾದ ಸಾನ್ಯ ನಗರದಲ್ಲಿ ನಡೆದಿತ್ತು. ಇದು 68ನೇ ಆವೃತ್ತಿಯ ವಿಶ್ವ ಸುಂದರಿ ಸ್ಪರ್ಧೆಯಾಗಿತ್ತು. ಇದರಲ್ಲಿ ಭಾರತ ಮಾನುಷಿ ಚಿಲ್ಲರ್​ ಅವರು ವಿಶ್ವಸುಂದರಿಯಾಗಿ ವಿಜೇತೆಯಾಗಿದ್ದರು. (ಏಜೆನ್ಸೀಸ್​)

ವಿಡಿಯೋ ನ್ಯೂಸ್

VIDEO: ಮಾವುತನ ಊಟದ ಎಲೆಯಿಂದ ತುತ್ತು ಅನ್ನ ತಿಂದು, ನೆಟ್ಟಿಗರ...

ತಿರುವನಂತಪುರ: ಆನೆಗಳ ಆಟ, ದಾಳಿ, ಮರ ಹತ್ತುವುದು ಹೀಗೆ ಹಲವು ವಿಡಿಯೋಗಳು ಈಗಾಗಲೇ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್​ ಆಗಿವೆ. ಆದರೆ ಈಗ ವೈರಲ್​ ಆಗಿರುವ ಆನೆಯ ವಿಡಿಯೋ ಸಾಮಾಜಿಕ ಬಳಕೆದಾರರ ಮನಸ್ಸು ಗೆದ್ದಿದೆ. ಹಸಿದ...

VIDEO| ರಾಷ್ಟ್ರಪತಿ ರಾಮನಾಥ್​ ಕೋವಿಂದ್​ರಿಂದ ಪ್ರಧಾನಮಂತ್ರಿ ರಾಷ್ಟ್ರೀಯ ಬಾಲ ಪುರಸ್ಕಾರ...

ನವದೆಹಲಿ: ದೆಹಲಿಯ ರಾಷ್ಟ್ರಪತಿ ಭವನದಲ್ಲಿ ಇಂದು ನಡೆದ ಕಾರ್ಯಕ್ರಮದಲ್ಲಿ ರಾಷ್ಟ್ರಪತಿ ರಾಮನಾಥ್​ ಕೋವಿಂದ್​ ಅವರು ಪ್ರಧಾನಮಂತ್ರಿ ರಾಷ್ಟ್ರೀಯ ಬಾಲ ಪುರಸ್ಕಾರ ಪ್ರಶಸ್ತಿ ಪ್ರದಾನ ಮಾಡಿದರು. ವಿವಿಧ ಕ್ಷೇತ್ರಗಳಲ್ಲಿ ಅದ್ವಿತೀಯ ಸಾಧನೆ ಮಾಡಿದ...

VIDEO| ಬೇಲಿಯೇ ಎದ್ದು ಹೊಲ ಮೇಯ್ದಂತೆ ಎಂಬ ಗಾದೆ ಮಾತಿಗೆ...

ಲಖನೌ: ಬೇಲಿಯೇ ಎದ್ದು ಹೊಲ ಮೇಯ್ದಂತೆ ಎಂಬ ಗಾದೆ ಮಾತಿಗೆ ಪೂರಕವಾದ ಘಟನೆ ಇದಾಗಿದೆ. ಉತ್ತರ ಪ್ರದೇಶದ ನೋಯ್ಡಾದಲ್ಲಿ ನಡೆದ ಘಟನೆ ಸಿಸಿಟಿವಿಯಲ್ಲಿ ಸೆರೆಯಾಗಿದೆ. ನೋಯ್ಡಾದಲ್ಲಿ ಅಂಗಡಿ ಹೊರಭಾಗದಲ್ಲಿ ಇಟ್ಟಿದ್ದ ಬಾಕ್ಸ್​ನಿಂದ...

VIDEO| ನಟಿಯಾಗಿರೋ ಆಲಿಯಾ ಇದೀಗ ಶೆಫ್​: ಬಾಲಿವುಡ್​ ಬ್ಯೂಟಿಯ ಅಡುಗೆ...

ಮುಂಬೈ: ಬಾಲಿವುಡ್​ ಬ್ಯೂಟಿ ಆಲಿಯಾ ಭಟ್ ನಟನೆ ಜತೆಗೆ ಹೊಸ ಸಾಹಸಕ್ಕೆ ಕೈಹಾಕಿದ್ದಾರೆ. ನಟಿಯಾಗಿರುವ ಆಲಿಯಾ ಇದೀಗ ಶೆಫ್ ಆಗಿದ್ದು, ಹೊಸ ಬಗೆಯ ಅಡುಗೆ ಪರಿಚಯಿಸಲು ಮುಂದಾಗಿದ್ದಾರೆ. ಯೂಟ್ಯೂಬ್​ನಲ್ಲಿ ಆಲಿಯಾ ಭಟ್...

VIDEO| ಅತಿವೇಗದ ಎಸೆತ, ಮಥೀಶಾ ಪಥಿರಣ ವಿಶ್ವದಾಖಲೆ!

ಬ್ಲೂಮ್​ಫಾಂಟೆನ್: ಶ್ರೀಲಂಕಾ ವಿರುದ್ಧ ಭಾನುವಾರ ನಡೆದ 19 ವಯೋಮಿತಿ ಏಕದಿನ ವಿಶ್ವಕಪ್ ಟೂರ್ನಿಯ ಮುಖಾಮುಖಿಯಲ್ಲಿ ಭಾರತ ತಂಡ 90 ರನ್​ಗಳಿಂದ ಗೆಲುವು ಸಾಧಿಸಿತು. ಆದರೆ, ಲಂಕಾ ಕಡೆಯಿಂದಲೂ ಸ್ಮರಣೀಯ ದಾಖಲೆಯೊಂದು...

VIDEO| ತಮಿಳಿನ ಕೌನ್​ ಬನೇಗಾ ಕರೋಡ್​ಪತಿ ಶೋನಲ್ಲಿ 1 ಕೋಟಿ...

ಚೆನ್ನೈ: ತಮಿಳು ಆವೃತ್ತಿಯ ಕೌನ್​ ಬನೇಗಾ ಕರೋಡ್​ಪತಿ(ಕೊಡೀಶ್ವರಿ) ರಿಯಾಲಿಟಿ ಶೋನಲ್ಲಿ ವಿಕಲಾಂಗ ಮಹಿಳೆಯೊಬ್ಬಳು ಬರೋಬ್ಬರಿ 1 ಕೋಟಿ ರೂ. ಬಹುಮಾನ ಮೊತ್ತವನ್ನು ಗೆದ್ದು ಎಲ್ಲರ ಗಮನ ಸೆಳೆದಿದ್ದಾಳೆ.ಮದುರೈ ನಿವಾಸಿಯಾಗಿರುವ ಕೌಶಲ್ಯ...