More

    ರೈಲ್ವೆ ಇಂಜಿನ್-ಬೋಗಿಗಳ ನಡುವೆ ತಪ್ಪಿದ ಸಂಪರ್ಕ..!

    ಶಿವಮೊಗ್ಗ: ರೈಲ್ವೆ ಇಂಜಿನ್ ಹಾಗೂ ಬೋಗಿಗಳ ನಡುವಿನ ಸಂಪರ್ಕ ತಪ್ಪಿದ ಪರಿಣಾಮ ಬೋಗಿಗಳನ್ನೇ ಬಿಟ್ಟು ಇಂಜಿನ್ 100 ಅಡಿಗಳಷ್ಟು ಮುಂದಕ್ಕೆ ಚಲಿಸಿದ ವಿಲಕ್ಷಣ ಘಟನೆ ಶುಕ್ರವಾರ ಬೆಳಗ್ಗೆ ಭದ್ರಾವತಿ ತಾಲೂಕಿ ಕಡದಕಟ್ಟೆ ರೈಲ್ವೆ ಲೆವೆಲ್ ಕ್ರಾಸಿಂಗ್ ಸಮೀಪದ ಬಿಳಕಿ ಪ್ರದೇಶದ ಬಳಿ ಸಂಭವಿಸಿದೆ.

    ತಾಳಗುಪ್ಪ-ಬೆಂಗಳೂರು ಇಂಟರ್‌ಸಿಟಿ ಎಕ್ಸ್‌ಪ್ರೆಸ್ ರೈಲು, ಇಂಜಿನ್-ಬೋಗಿಗಳ ನಡುವೆ ಸಂಪರ್ಕ ಕಳೆದುಕೊಂಡಿದ್ದು ಈ ಘಟನೆಯಿಂದ ಕೆಲಕಾಲ ಪ್ರಯಾಣಿಕರು ಗೊಂದಲಕ್ಕೊಳಗಾಗಿದ್ದರು.
    ತಾಳಗುಪ್ಪದಿಂದ ಶಿವಮೊಗ್ಗ ರೈಲ್ವೆ ನಿಲ್ದಾಣಕ್ಕೆ ಆಗಮಿಸಿದ್ದ ರೈಲು ಬೆಳಗ್ಗೆ 7.5 ಗಂಟೆಗೆ ಭದ್ರಾವತಿ ನಿಲ್ದಾಣದತ್ತ ಪ್ರಯಾಣ ಬೆಳೆಸಿತ್ತು. ಬಿಳಕಿ ಸಮೀಪ ಏಕಾಏಕಿ ರೈಲ್ವೆ ಇಂಜಿನ್ ಬೋಗಿಗಳ ಬಿಟ್ಟು ಮುಂದಕ್ಕೆ ಚಲಿಸಿದೆ. ಕೊಂಚ ದೂರ ಕ್ರಮಿಸಿದ ನಂತರ ಇಂಜಿನ್ ಅನ್ನು ಲೋಕೋ ಪೈಲೆಟ್ ನಿಲ್ಲಿಸಿದ್ದಾರೆ. ವಿಷಯ ತಿಳಿಯುತ್ತಿದ್ದಂತೆ ಭದ್ರಾವತಿ ಹಾಗೂ ಶಿವಮೊಗ್ಗದ ರೈಲ್ವೆ ಇಲಾಖೆ ಸಿಬ್ಬಂದಿ ಸ್ಥಳಕ್ಕೆ ದೌಡಾಯಿಸಿ ಇಂಜಿನ್ ಹಾಗೂ ಬೋಗಿ ನಡುವೆ ಸಂಪರ್ಕ ಕಲ್ಪಿಸಿದ್ದಾರೆ. ನಂತರ ರೈಲು ಭದ್ರಾವತಿಯತ್ತ ಪ್ರಯಾಣ ಬೆಳೆಸಿದೆ.
    ಭದ್ರಾವತಿ ನಿಲ್ದಾಣದಲ್ಲಿ ಹೆಚ್ಚುವರಿ ದುರಸ್ತಿ ಕಾರ್ಯ ನಡೆಸಲಾಯಿತು. ತಾಂತ್ರಿಕ ಕಾರಣಗಳಿಂದ ವಿಳಂಬವಾಗಿ ರೈಲು ಸಂಚಾರ ಆರಂಭಿಸಿದ್ದು, ಕೆಲಸ ಕಾರ್ಯ ಮತ್ತಿತರ ಉದ್ದೇಶಗಳಿಗೆ ತೆರಳುವ ಪ್ರಯಾಣಿಕರು ತೀವ್ರ ತೊಂದರೆ ಪಡುವಂತಾಯಿತು.
    ಇಂಜಿನ್-ಬೋಗಿಗಳ ನಡುವೆ ಸಂಪರ್ಕ ತಪ್ಪುವುದು ಅಪರೂಪದಲ್ಲಿ ಅಪರೂಪ. ಕೆಲವೊಮ್ಮೆ ತಾಂತ್ರಿಕ ಕಾರಣಗಳಿಂದ ಈ ರೀತಿಯ ಘಟನೆಗಳು ಜರುಗುತ್ತವೆ ಎಂದು ರೈಲ್ವೆ ಇಲಾಖೆ ಅಧಿಕಾರಿಗಳು ಮಾಹಿತಿ ನೀಡಿದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts